Home namma chikmagalur ಭಾರಿ ಮಳೆ: ಚಿಕ್ಕಮಗಳೂರಿನಲ್ಲಿ ಸೇತುವೆಗಳು ಜಲಾವೃತ
namma chikmagalur

ಭಾರಿ ಮಳೆ: ಚಿಕ್ಕಮಗಳೂರಿನಲ್ಲಿ ಸೇತುವೆಗಳು ಜಲಾವೃತ

Share
ಭಾರಿ ಮಳೆ, Heavy rain: Bridges flooded in Chikkamagalur
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮಲೆನಾಡಿನ ಕೆಲ ಭಾಗಗಳು ಕಂಗಾಲಾಗಿವೆ. ಭಾರೀ ಮಳೆಗೆ ಗ್ರಾಮೀಣ ಭಾಗದಲ್ಲಿ ಸೇತುವೆಗಳು ಜಲಾವೃತಗೊಂಡಿವೆ.

ಹಳ್ಳ ದಾಟಲು ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನರು ಪರದಾಡುತ್ತಿದ್ದಾರೆ. ವೃದ್ಧೆಯೊಬ್ಬರನ್ನ ಗ್ರಾಮಸ್ಥನೊಬ್ಬನು ಕೈಗಳಲ್ಲಿ ಹೊತ್ತು ಸಾಗಿದ ಘಟನೆಯೂ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ಈ ಪರಿಸ್ಥಿತಿ ಉಂಟಾಗಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮವಾಗಿದ್ದು, ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ತೀವ್ರ ಪ್ರಮಾಣದ ನೀರು ಸೇತುವೆ ಮೇಲೆ ಹರಿಯುತ್ತಿದೆ. ಈ ಕಿರು ಸೇತುವೆ ತುಂಬಿ ಮಲಗಾರು ಗ್ರಾಮದ ಜನರು ಪರದಾಟ ಪಡುವಂತಾಗಿದೆ.

ಇದನ್ನು ಓದಿ: ಜಿಲ್ಲೆಯ ಹಲವೆಡೆ ಮಳೆ ಆರ್ಭಟ : ಸಿಡಿಲು ಬಡಿದು ಎತ್ತು ಸಾವು

ಮತ್ತೊಂದೆಡೆ ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆಗೆ ಮುಳ್ಳಯ್ಯನ ಗಿರಿ ಪ್ರದೇಶದ ಜನ ಬೆಚ್ಚಿಬಿದ್ದಿದ್ದಾರೆ ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲಿ 2 ಅಡಿ ಮಳೆ ನೀರು ಹರಿಯುತ್ತಿದೆ.  ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲಿನಲ್ಲಿ ಅಲ್ಲೋಲ-ಕಲ್ಲೋಲವೇ ಉಂಟಾಗಿದೆ.

ಐ.ಡಿ ಪೀಠದ ರಸ್ತೆಯಲ್ಲಿ 2 ಅಡಿ ಎತ್ತರದಲ್ಲಿ ಮಳೆ ನೀರು ಹರಿಯುತ್ತಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ ಆದರೂ ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲು ಭಾರೀ ಮಳೆಗೆ ನಲುಗಿ ಹೋಗಿದೆ. ವಾಯುಭಾರ ಕುಸಿತದ ಮಳೆಯ ಅಬ್ಬರಕ್ಕೆ ಪಶ್ಚಿಮ ಘಟ್ಟವೇ ಬೆದರಿದೆ ವಾರಾಂತ್ಯ ಹಿನ್ನೆಲೆ ಆಗಮಿಸಿದ್ದ ಪ್ರವಾಸಿಗರು ಮಳೆರಾಯನ ಅಬ್ಬರಕ್ಕೆ ತೊಯ್ದು ತೊಪ್ಪೆ ಆಗಿದ್ದಾರೆ ಮಳೆ ಮಧ್ಯೆ ಸಿಲುಕಿ ಮುಳ್ಳಯ್ಯನ ಗಿರಿ ಸಹವಾಸವೇ ಬೇಡ ಎಂದು ಪ್ರವಾಸಿಗರು ಹೇಳುವಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...