Home namma chikmagalur ನಿರಂತರ ಮಳೆ ಹಳ್ಳಕೊಳ್ಳ ತುಂಬಿ ಧರೆ ಕುಸಿತ
namma chikmagalurHome

ನಿರಂತರ ಮಳೆ ಹಳ್ಳಕೊಳ್ಳ ತುಂಬಿ ಧರೆ ಕುಸಿತ

Share
Share

ಚಿಕ್ಕಮಗಳೂರು :

ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನರಸಿಂಹರಾಜ ಪುರ ತಾಲೂಕಿನ ಬನ್ನೂರು ಸಮೀಪ ಜಕ್ಕಣಕ್ಕಿ ಗ್ರಾಮದಲ್ಲಿ ಹಳ್ಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಧರೆ ಕುಸಿತ ಉಂಟಾಗಿದೆ. ಇದರಿಂದ ಜಕ್ಕಣಕ್ಕಿ ಗ್ರಾಮವನ್ನು ಸಂಪರ್ಕಿಸುವ ರಸ್ತೆ ಬಂದ್ ಆಗುವ ಸಾಧ್ಯತೆ ಇದ್ದು ಮನೆ ಎಸ್ಟೇಟ್ ಗಳಿಗೆ ದಾರಿ ಇಲ್ಲದಂತಾಗುವ ಭೀತಿ ಎದುರಾಗಿದೆ.

  • ವಾಯುಭಾರ ಕುಸಿತದಿಂದ ಕಳೆದ ನಾಲ್ಕೈದು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ಧರೆ ಕುಸಿತವಾಗಿದೆ. ಎನ್.ಆರ್.ಪುರ ತಾಲೂಕಿನ ಬನ್ನೂರು ಸಮೀಪದ ಜಕ್ಕಣಕ್ಕಿ ಗ್ರಾಮದಲ್ಲಿ ಘಟನೆ ನಡೆದಿದ್ದು,
    ಹಳ್ಳದಲ್ಲಿ ನಿರಂತರ ನೀರು ಹರಿದು ಹಳ್ಳದ ಪಕ್ಕ ಭಾರೀ ಪ್ರಮಾಣದಲ್ಲಿ ಧರೆ ಕುಸಿತ ಉಂಟಾಗಿದೆ. ಜಕ್ಕಣಕ್ಕಿ ಗ್ರಾಮಕ್ಕೆ ಇರುವ ರಸ್ತೆ ಸಂಪರ್ಕ ಕಟ್ ಆಗುವ ಸಾಧ್ಯತೆ ಇದ್ದು
    ಸಮೀಪದ ಸೇತುವೆ ಕಟ್ ಆದರೆ 15 ಮನೆಗಳು 3 ಎಸ್ಟೇಟ್ ಗಳು ಕಾರ್ಮಿಕರ ಲೈನ್ ಮನೆಗಳಿಗೆ ದಾರಿ ಇಲ್ಲದಂತಾಗುತ್ತದೆ. ಎರಡ್ಮೂರು ವರ್ಷಗಳಿಂದ ನಿರಂತರವಾಗಿ ಕುಸಿಯುತ್ತಿರುವ ಭೂಮಿಯಿಂದಾಗಿ ಭೀತಿ ಎದುರಾಗಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳಾಗಲಿ ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ನೋ ಯೂಸ್ ಎಂಬಂತಾಗಿದೆ. ಅಧಿಕಾರಿಗಳು ಬಂದು ನೋಡುತ್ತಾರೆ ಹೊರತು ಯಾವುದೇ ಕ್ರಮ ಕೈಗೊಳ್ಳಲ್ಲ ಎಂಬ ಮಾತುಗಳು ಕೇಳಿಬಂದಿದ್ದು, ಅಧಿಕಾರಿಗಳ ವಿರುದ್ಧ ಹಳ್ಳಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...