Home namma chikmagalur chikamagalur ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ
chikamagalurHomeLatest Newsnamma chikmagalur

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

Share
Share

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ ವರುಣದೇವ ಭರ್ಜರಿ ಸಿಹಿಸುದ್ದಿ ನೀಡಿದ್ದಾನೆ. ಸುಮಾರು ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಬೆಳ್ಳಂಬೆಳಗ್ಗೆಯೇ ಭರ್ಜರಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಲೆನಾಡು ಭಾಗದ ಪ್ರಮುಖ ತಾಲೂಕುಗಳಾದ ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ, ಕಳಸ ಹಾಗೂ ಕೊಪ್ಪದಲ್ಲಿ ಮುಂಜಾನೆಯಿಂದಲೇ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರದಲ್ಲಿಯೂ ಬೆಳಗ್ಗೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಂಪಾದ ವಾತಾವರಣ ನಿರ್ಮಾಣವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಬತ್ತಿ ಹೋಗಿದ್ದ ಕಾಲುವೆಗಳಲ್ಲಿ ನೀರು ಹರಿಯಲಾರಂಭಿಸಿದೆ.

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಮಲೆನಾಡಿಗೆ ಮಳೆರಾಯ ಸಂಪೂರ್ಣವಾಗಿ ಕೈಕೊಟ್ಟಿದ್ದ. ಮಳೆಗಾಲದಲ್ಲೇ ಮಳೆ ಇಲ್ಲದೆ ಕಾಫಿ, ಮೆಣಸು, ಅಡಿಕೆ ಬೆಳೆಗಾರರು ಹಾಗೂ ರೈತರು ಆಕಾಶ ನೋಡುವಂತಾಗಿತ್ತು. ಬೆಳೆಗಳು ಒಣಗುವ ಭೀತಿಯಲ್ಲಿದ್ದ ಕೃಷಿಕರಿಗೆ ಇಂದಿನ ಮುಂಜಾನೆಯ ಮಳೆ ಸಂಜೀವಿನಿಯಂತೆ ಪರಿಣಮಿಸಿದೆ. ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯನ್ನು ಕಂಡು ಮಲೆನಾಡಿಗರು ಹರ್ಷ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದರೆ, ಇನ್ನೊಂದೆಡೆ ಬಯಲುಸೀಮೆ ಭಾಗಗಳಾದ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ಭಾಗದಲ್ಲಿ ಮಳೆಯ ಮುನ್ಸೂಚನೆಯಾಗಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಒಟ್ಟಾರೆಯಾಗಿ ಬಹಳ ದಿನಗಳ ನಂತರ ಬಂದ ಮಳೆ ಮಲೆನಾಡಿಗೆ ಮರುಜೀವ ನೀಡಿದೆ.
Heavy rainfall across the district after a long hiatus of two months.
Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...

ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್-ಮನನೊಂದ ಯುವತಿ ಆತ್ಮಹತ್ಯೆ

ಕೊಪ್ಪ : ಪ್ರೀತಿಯ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್...