Home Latest News ಜಿಲ್ಲೆಯಲ್ಲಿ ಬಿದ್ದ ಧಾರಾಕಾರ ಮಳೆಯಿಂದ ಭಾರಿ ಹಾನಿ
Latest NewschikamagalurHomenamma chikmagalur

ಜಿಲ್ಲೆಯಲ್ಲಿ ಬಿದ್ದ ಧಾರಾಕಾರ ಮಳೆಯಿಂದ ಭಾರಿ ಹಾನಿ

Share
Share

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಹಾಗೂ ಬಯಲು ಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭಾರಿ ಹಾನಿ ಸಂಭವಿಸುತ್ತಿದೆ. ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಮತ್ತೆ ತುಂಬಿ ಹರಿಯಲಾರಂಭಿಸಿದ್ದರೆ, ಬಯಲು ಸೀಮೆ ಭಾಗದಲ್ಲಿ ಕೆರೆಗಳು ಕೋಡಿ ಬಿದ್ದಿವೆ. ಅಲ್ಲದೆ ಅಲ್ಲಲ್ಲಿ ಮನೆಗಳಿಗೂ ಹಾನಿಯಾಗಿದೆ. ಇನ್ನು ಚಿಕ್ಕಮಗಳೂರು ತಾಲೂಕಿನಲ್ಲಿ ತರಕಾರಿ ಬೆಳೆಗಳು ಜಲಾವೃತಗೊಂಡಿದ್ದು, ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಹರಸಾಹಪಡುವಂತಾಗಿದೆ.

ಚಿಕ್ಕಮಗಳೂರು ತಾಲೂಕಿನ ಬಂಡಿಹಳ್ಳಿ ಗ್ರಾಮದಲ್ಲಿ ಕಳೆದ ಮರ‍್ನಾಲ್ಕು ದಿನಗಳಿಂದ ಸುರಿಯುತ್ತಿರುವ ಅತಿಯಾದ ಮಳೆಯಿಂದ ಅಕ್ಕಪಕ್ಕದ ಕೆರೆಗಳು ಕೋಡಿಬಿದ್ದು ಹತ್ತಾರು ಎಕರೆ ಕೃಷಿ ಭೂಮಿಯು ನೀರಿನಿಂದ ಮುಳುಗಡೆಗೊಂಡಿದೆ. ಭಾರಿ ಮಳೆಯಿಂದಾಗಿ ಈ ಭಾಗದಲ್ಲಿ ಬೆಳೆದಿರುವ ಹೂ ಕೋಸು, ಅಡಕೆ, ಬಾಳೆ, ಮೆಕ್ಕೆಜೋಳ ಬೆಳೆಗಳು ಸಂಪೂರ್ಣವಾಗಿ ನೀರಿನಿಂದ ಮುಳುಗಡೆಗೊಂಡು ರೈತರಿಗೆ ಕೈಗೆ ಬಂದ ತುತ್ತಾ ಬಾಯಿಗೆ ಬರದಂತಾಗಿದೆ ಎಂದು ಸ್ಥಳೀಯ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇನ್ನು ಕಡೂರು ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಿಂಗಟಗೆರೆ ಹೋಬಳಿಯ ಎಸ್.ಮಾದಾಪುರ ಗ್ರಾಮದ ೧೫ ಎಕರೆ ವಿಸ್ತೀರ್ಣದ ಕೆರೆ ಒಂದೇ ದಿನದ ಮಳೆಗೆ ಭರ್ತಿಯಾಗಿ ಕೋಡಿ ಬಿದ್ದಿದೆ. ಈ ಭಾಗದಲ್ಲಿ ಆಗಾಗ್ಗೆ ಸಾಧಾರಣ ಮಳೆಯಾಗಿದ್ದರಿಂದ ಕೆರೆ ಭರ್ತಿಯಾಗಿರಲಿಲ್ಲ. ಹೀಗಾಗಿ ಬರಗಾಲದ ಛಾಯೆ ಆವರಿಸಿತ್ತು. ಇದೀಗ ಒಂದೇ ದಿನದಲ್ಲಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದರಿಂದ ರೈತರು ಸಂತಸಗೊಂಡಿದ್ದಾರೆ.

ಇನ್ನು ಮಲೆನಾಡು ಭಾಗದಲ್ಲಿ ಅಡಕೆ ಕೊಯ್ಲಿಗೆ ರೈತರು ಸಿದ್ಧತೆ ಆರಂಭಿಸಿದ್ದರು. ಆದರೆ ಇದೀಗ ಧಾರಾಕಾರ ಮಳೆ ಆರಂಭಗೊAಡಿದ್ದರಿAದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅಡಕೆ ಕೊಯ್ಲು ಮಾಡಿದಲ್ಲಿ ಅಡಕೆ ಒಣಗಿಸಲು ಸಾಧ್ಯವಾಗದ ಸ್ಥಿತಿ ಇದೆ. ಇನ್ನು ಅಡಕೆ ಕೊಯ್ಲು ಮಾಡದೇ ಹಾಗೆಯೇ ಬಿಟ್ಟಲ್ಲಿ ಮರದಲ್ಲೇ ಅಡಕೆ ಹಣ್ಣಾಗುವ ಆತಂಕ ಎದುರಾಗಿದೆ.

Heavy rains in the district cause extensive damage

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...