ಚಿಕ್ಕಮಗಳೂರು: ಹಾಲಿನ ಖರೀದಿ ದರ ಹೆಚ್ಚಳ ಮಾಡಬೇಕು ಎಂದು ರೈತರಿಂದ ಬೇಡಿಕೆ ಹೆಚ್ಚಾಗಿದ್ದು, ಈ ಸಂಬಂಧ ಶೀಘ್ರವೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳ ಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಮಿಳುನಾಡಿನಲ್ಲಿ ಲೀಟರ್ ಹಾಲಿಗೆ ₹9ರಿಂದ ₹10 ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಉತ್ಪಾದಕರಿಗೆ ಲೀಟರ್ ಹಾಲಿಗೆ ₹8ರಿಂದ 19 ಹೆಚ್ಚಾಗಿ ನೀಡಬೇಕು ಎಂದು ಗಲಾಟೆ ಮಾಡುತ್ತಿದ್ದಾರೆ. ಅದ್ದರಿಂದ ಶೀಘ್ರವೇ ಹಾಲಿನ ಒಕ್ಕೂಟಗಳ ಸಭೆ ನಡೆಸಲಾಗುವುದು’ ಎಂದರು.
ಹಾಲು ಉತ್ಪಾದಕರ ಸಹಕಾರ ಸಂಘಗಳು ಕೂಡ ನಷ್ಟದಲ್ಲಿವೆ. ಪಕ್ಕದ ರಾಜ್ಯಗಳಲ್ಲಿ ಹಾಲಿನ ದರ ಜಾಸ್ತಿ ಇರುವುದರಿಂದ ಅಲ್ಲಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು ಹೋಗುತ್ತಿದೆ. ಇದರಿಂದ ನಂದಿನಿ ಹಾಲು ಉತ್ಪಾದಕ ಸೊಸೈಟಿಗಳು ನಷ್ಟ ಅನುಭವಿಸುತ್ತಿವೆ. ಇದನ್ನು ತಡೆಯಲು ಏನು ಮಾಡ ಬೇಕು ಎಂಬ ಬಗ್ಗೆ ಚರ್ಚಿಸಲಾಗುವುದು ಎಂದರು.
ಅರಿತುಕೊಂಡು ಪರಿಹಾರ ಕಂಡುಕೊಳ್ಳಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ ಎಂದು ಹೇಳಿದರು.
ಕಸ್ತೂರಿರಂಗನ್ ವರದಿ ಕುರಿತು ಜನರಲ್ಲಿ ಭೀತಿ ಇದೆ. ಈ ಭೀತಿಯನ್ನು ಹೇಗೆ ದೂರ ಮಾಡಬೇಕು ಹಾಗೂ ಜನರ ಸಮಸ್ಯೆಗಳಿಗೆ ಯಾವ ರೀತಿಯಲ್ಲಿ ಪರಿಹಾರ ಕಲ್ಪಿಸಬೇಕು ಎಂಬುದನ್ನು ತಿಳಿದುಕೊಳ್ಳಲು ವಿವಿಧ ಪ್ರದೇಶಗಳಿಗೆ ತೆರಳಿ ಜನರೊಂದಿಗೆ ಚರ್ಚಿಸುತ್ತಿದ್ದೇನೆ ಎಂದರು.
ಕಸ್ತೂರಿರಂಗನ್ ವರದಿಯ ಸಮಸ್ಯೆಯನ್ನು ಜನರಿಂದ ದೂರ ಮಾಡುವ ಉದ್ದೇಶದಿಂದ ನಿನ್ನೆ ಮಂಗಳೂರು ಹಾಗೂ ಉಡುಪಿಗೆ ಭೇಟಿ ನೀಡಿದ್ದು, ಇಂದು ಶಿವಮೊಗ್ಗದ ಮೂಲಕ ಚಿಕ್ಕಮಗಳೂರಿಗೆ ಬಂದಿದ್ದೇನೆ. ನಾಳೆ ಹಾಸನ ಜಿಲ್ಲೆಗೆ ತೆರಳಿ ಅಲ್ಲಿಯೂ ಜನರ ಸಮಸ್ಯೆಗಳನ್ನು ಆಲಿಸುತ್ತೇನೆ.
ಬಳಿಕ ಎಲ್ಲರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ, ವಿಶೇಷ ಅಧಿವೇಶನದಲ್ಲಿ ಚರ್ಚಿಸಿ ಜನರ ಸಮಸ್ಯೆ ನಿವಾರಣೆಗೆ ಅಗತ್ಯ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.
Hike in milk procurement price – Decision to be taken after a meeting soon.
Leave a comment