ನಮ್ಮ ದೇಶದಲ್ಲಿ ಈಗಾಗಲೇ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.ಕೇವಲ 5 ದಿನದಲ್ಲಿ 20 ಮಿಲಿಯನ್ ಗಿಂತ ಅಧಿಕ ಜನರು ಇನ್‌ಸ್ಟಾಗ್ರಾಂ ಫಾಲೋವರ್ಸ್‌ಗಳು ಆಗಿದ್ದಾರೆ. ಈ ಜಿರಲೆ ಪಾರ್ಟಿಗೆ ಕೌಂಟರ್ ಕೊಡಲು ಚಿಕ್ಕಮಗಳೂರಿನಲ್ಲಿ ‘ಲಕ್ಷ್ಮಣರೇಖೆ ಹಾಗೂ ಹಿಟ್ ಪಾರ್ಟಿ’ (Lakshmana Rekhe & HIT Party) ಉದಯಿಸಿದೆ!
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ಜಗದೀಶ್ಚಂದ್ರ ಎಂಬುವವರು ಈ ವಿಭಿನ್ನ ‘ಹಿಟ್ ಪಾರ್ಟಿ’ಗೆ ಜನ್ಮ ನೀಡಿದ್ದಾರೆ. ಅಷ್ಟೇ ಅಲ್ಲದೆ, ಈ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜಗದೀಶ್ಚಂದ್ರ ಅವರೇ ಆಯ್ಕೆಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಜಿರಲೆ ಪಾರ್ಟಿಯ ಆರ್ಭಟ ಹೆಚ್ಚಾದ ಬೆನ್ನಲ್ಲೇ, ಅದನ್ನು ನಿಯಂತ್ರಿಸಲು ಜಿರಲೆ ನಾಶಕ ‘ಹಿಟ್’ ಮತ್ತು ‘ಲಕ್ಷ್ಮಣರೇಖೆ’ ಹೆಸರಿನಲ್ಲಿ ಈ ಹೊಸ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ.
ಈ ಹಿಟ್ ಪಾರ್ಟಿ ಕೇವಲ ಹೆಸರಿಗೆ ಮಾತ್ರ ಸೀಮಿತವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನ ಈ ಪಾರ್ಟಿಯನ್ನು ಫಾಲೋ ಮಾಡಲು ಆರಂಭಿಸಿದ್ದಾರೆ. ‘ನಾವು ಜಿರಲೆಗಳಿಗೆ ಹೆದರುವುದಿಲ್ಲ, ಅವುಗಳನ್ನು ಮಟ್ಟಹಾಕಲು ನಮ್ಮ ಬಳಿ ಅಸ್ತ್ರಗಳಿವೆ’ ಎಂಬ ಸ್ಲೋಗನ್‌ಗಳು ವೈರಲ್ ಆಗುತ್ತಿವೆ.
Hit Party as a response to ‘Cockroach Party of India’