Home namma chikmagalur chikamagalur ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ
chikamagalurHomeLatest Newsnamma chikmagalur

ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ

Share
Share

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಶೃಂಗೇರಿ ತಾಲೂಕುಗಳ ಅಂಗನವಾಡಿ, ಶಿಶುಪಾಲನಾ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಗಸ್ಟ್ 3, 2026 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಭನ್ವ‌ರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಜಲ ಆಯೋಗ (CWC) ಎಚ್ಚರಿಕೆ ನೀಡಿದ್ದು, ತುಂಗಾ ನದಿಯ ನೀರಿನ ಮಟ್ಟವು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಈ ರಜೆಯು ಕೊಪ್ಪ ಮತ್ತು ಶೃಂಗೇರಿ ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಲಿದ್ದು, ರಜೆಯಿಂದಾಗಿ ನಷ್ಟವಾಗುವ ದಿನಗಳನ್ನು ಮುಂಬರುವ ಸಾರ್ವತ್ರಿಕ ರಜಾ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಸೂಚಿಸಲಾಗಿದೆ.

ತುಂಗಾ ನದಿಯಲ್ಲಿ ಪ್ರವಾಹದ ಅಪಾಯವಿರುವುದರಿಂದ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮಕ್ಕಳು ಯಾವುದೇ ಕಾರಣಕ್ಕೂ ನದಿ, ಹೊಳೆ, ಕೆರೆ ಮುಂತಾದ ಜಲಮೂಲಗಳ ಬಳಿ ತೆರಳಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Holiday for schools in three taluks of the district

Share

Leave a comment

Leave a Reply

Your email address will not be published. Required fields are marked *

Don't Miss

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯನ್ನು...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ ತಾಂತ್ರಿಕ ಅಡಚಣೆಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್...

Related Articles

ಭದ್ರೆಯ ಕೃಪೆಯಿಂದ ಕೋಡಿಬಿದ್ದ ಕುಕ್ಕಸಮುದ್ರ ಕೆರೆ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಹರಿದು ಬಂದ ಭದ್ರಾ ನೀರು ಕಡೂರು...

ಮಹೇಶ್ ಜೋಷಿಗೆ ಹಿನ್ನೆಡೆ-ಮತ್ತೆ ಕೋರ್ಟ್ ನಲ್ಲಿ ಹೋರಾಟಕ್ಕೆ ಜಯ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆಡಳಿತಾತ್ಮಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಹಿರಿಯ ಸಾಹಿತಿಗಳು,...

ಅ.8ರಂದು ಚಿಕ್ಕಮಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿಯ ಮಹಿಳಾ ಮಹಾಸಭೆ

ಚಿಕ್ಕಮಗಳೂರು:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಮಿತಿ...

 ಅ.8ರಂದು ಚಿಕ್ಕಮಗಳೂರಿನಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ

ಚಿಕ್ಕಮಗಳೂರು: ದೇಶಾದ್ಯಂತ ನಡೆಯುತ್ತಿರುವ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ–ದೇಶ ಬಚಾವೋ’ ಚಳುವಳಿಯ ಭಾಗವಾಗಿ ಅ.8ರಂದು ಚಿಕ್ಕಮಗಳೂರು...