Home Latest News ಹಿರಿಯ ಸಚಿವರ ರಾಜಕೀಯ ಜೀವನ ಮುಗಿಸುವುದಕ್ಕೆ ಹನಿಟ್ರ್ಯಾಪ್
Latest NewsHomenamma chikmagalur

ಹಿರಿಯ ಸಚಿವರ ರಾಜಕೀಯ ಜೀವನ ಮುಗಿಸುವುದಕ್ಕೆ ಹನಿಟ್ರ್ಯಾಪ್

Share
Share

ಚಿಕ್ಕಮಗಳೂರು: ಹಿರಿಯ ಸಚಿವ ಮತ್ತೊಬ್ಬ ಹಿರಿಯ ಸಚಿವನ ರಾಜಕೀಯ ಜೀವನ ಮುಗಿಸುವುದಕ್ಕೆ ಹನಿಟ್ರ್ಯಾಪ್ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸರ್ಕಾರವನ್ನು ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ರಾಜ್ಯ ರಾಜಕಾರಣದಲ್ಲಿ ೪೮ ಜನರ ಹನಿಟ್ರ್ಯಾಪ್ ಸಿಡಿ ವಿಚಾರ ಕುರಿತು ಗಮನ ಸೆಳೆದಾಗ, ಆಡಳಿತ ಪಕ್ಷದ ಸಚಿವ ಸಂಪುಟದ ಸಚಿವರೊಬ್ಬರು ಹನಿಟ್ರ್ಯಾಪ್ ಬಗ್ಗೆ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ, ಇದು ಸಣ್ಣ ವಿಷಯವೇ, ತಳ್ಳಿ ಹಾಕುವಂತಹದ್ದೆ, ಜಡ್ಜ್, ಶಾಸಕರು, ಮುಖಂಡರು, ಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿಸಿ ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ ಎಂದು ಆರೋಪ ಮಾಡಲಾಗುತ್ತಿದೆ ಎಂದು ಹೇಳಿದರು.

ಶತೃಗಳನ್ನು ಮಣಿಸುವುದಕ್ಕೆ ರಾಜ-ಮಹಾರಾಜರು ಇದನ್ನೆ ಬಳಸಿಕೊಳ್ಳುತ್ತಿದ್ದರು.ಶತೃ ದೇಶಗಳು ಬೇಹುಗಾರಿಕೆಗೆ ಸುಂದರ ಹೆಣ್ಣು ಮಕ್ಕಳನ್ನು ಉಪಯೋಗಿಸಿಕೊಳ್ಳುತ್ತಿದ್ದರು. ಋಷಿ-ಮುನಿಗಳ ತಪಸ್ಸು ಭಂಗ ಮಾಡೋದಕ್ಕೆ ದೇವ ಕನ್ಯೆಯರನ್ನೇ ಬಳಸಿಕೊಂಡಿದ್ದು ಪುರಾಣಗಳಲ್ಲಿದೆ. ಎಂದು ತಿಳಿಸಿದ ಅವರು, ಹನಿಟ್ರ್ಯಾಪ್ ವಿಷಯದಲ್ಲಿ ಯಾರೂ ದೂರು ನೀಡಿಲ್ಲ, ಆದರೆ, ಸದನ, ವಿಧಾನಸಭೆಯಲ್ಲಿ ಆರೋಪ ಮಾಡೋದು ಸಾಮಾನ್ಯ ವಿಷಯವೇ ಎಂದು ಪ್ರಶ್ನಿಸಿದರು.

ಆ ಆರೋಪವನ್ನೇ ದೂರೆಂದು ಪರಿಗಣಿಸಿ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಆಗ್ರಹಿಸಿದ್ದೇವೆ.ನಮ್ಮ ಹೋರಾಟ ಹತ್ತಿಕ್ಕಲು ನಮ್ಮ ಪಕ್ಷದ ೧೮ ಜನ ಸದಸ್ಯರನ್ನು ಅಮಾನತು ಮಾಡಿದ್ದಾರೆ.ವಿಧಾನಸಭೆ ಅಧ್ಯಕ್ಷರು ತಮ್ಮ ತೀರ್ಪನ್ನು ಪುನರ್ ಪರಿಶೀಲಿಸಬೇಕೆಂದು ಒತ್ತಾಯಿಸಿದರು.

Honeytrap to end senior minister’s political career

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿ

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತೆ ಮುಂದುವರಿದಿದ್ದು,ನಾಲ್ಕು ದಿನಗಳ ಅಂತರದಲ್ಲಿ ಮತ್ತೊಂದು ಅಮಾಯಕ ಜೀವ ಬಲಿಯಾಗಿದ್ದು, ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ...

ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ

ಚಿಕ್ಕಮಗಳೂರು: – ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂ ಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹೆಚ್.ಕುಮಾರಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಜಿ.ಹಾಲಪ್ಪ ಸೋ ಮವಾರ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆಯಾದರು....

Related Articles

ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯ ರಂಗೀನಾಟ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಹೈ ಡ್ರಾಮಾ ನೋಡಿದರೆ ಯಾವ ಕಡೆ ನಗಾಡ...

ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ....

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಂತ ನಾಡಿಗ್ ಗೆ ಅಭಿನಂದನ ಸಮಾರಂಭ

ತರೀಕೆರೆ: ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕತ೯ ಅನಂತ ನಾಡಿಗ್ ಗೆ ತಾಲ್ಲೂಕು ಶರಣ...

ನಾಗರೀಕ ಸೇವಾ ಪರೀಕ್ಷೆ ಎದುರಿಸಲು ಜ್ಞಾನ, ಛಲದ ಅವಶ್ಯ

ಚಿಕ್ಕಮಗಳೂರು: ನಾಗರೀಕ ಸೇವಾ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ವಿ ದ್ಯಾರ್ಥಿಗಳಿಗೆ ಆಸ್ತಿ-ಅಂತಸ್ತಿನ ಅರ್ಹತೆ ಬೇಕಿಲ್ಲ. ಅಪಾರ...