Home namma chikmagalur chikamagalur ಚಾರ್ಮಾಡಿ ಘಾಟ್‌ನಲ್ಲಿ ಭೀಕರ ಅಪಘಾತ – ಯುವಕ ಸಾವು
chikamagalurCrime NewsHomeLatest Newsnamma chikmagalur

ಚಾರ್ಮಾಡಿ ಘಾಟ್‌ನಲ್ಲಿ ಭೀಕರ ಅಪಘಾತ – ಯುವಕ ಸಾವು

Share
Share

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್‌ನ ಅಲೆಖಾನ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 24 ವರ್ಷದ ಯುವಕ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಬೆಂಗಳೂರಿನಿಂದ ಚಾರ್ಮಾಡಿ ಘಾಟ್‌ನ ಪ್ರಕೃತಿ ಸೌಂದರ್ಯ ಹಾಗೂ ವ್ಯೂ ಪಾಯಿಂಟ್‌ಗಳನ್ನು ವೀಕ್ಷಿಸಲು ಬಂದಿದ್ದ ಇಬ್ಬರು ಕಾಲೇಜು ಸ್ನೇಹಿತರು ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಅಲೆಖಾನ್ ಸಮೀಪ ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಕುಳಿತಿದ್ದ 24 ವರ್ಷದ ಚಿರಾಗ್ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಇದೇ ವೇಳೆ ಕಡೂರಿನಿಂದ ಧರ್ಮಸ್ಥಳದತ್ತ ತೆರಳುತ್ತಿದ್ದ ಬಸ್‌ನ ಹಿಂಬದಿ ಚಕ್ರ ರಸ್ತೆಗೆ ಬಿದ್ದಿದ್ದ ಚಿರಾಗ್‌ನ ತಲೆಯ ಮೇಲೆ ಹರಿದಿದೆ. ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯಗಳಾಗಿವೆ.

ಗಂಭೀರವಾಗಿ ಗಾಯಗೊಂಡಿದ್ದ ಚಿರಾಗ್‌ನನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಚಿಕಿತ್ಸೆಗಾಗಿ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ಯಶಸ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆಯ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Horrific accident in Charmadi Ghat – Youth dies

Share

Leave a comment

Leave a Reply

Your email address will not be published. Required fields are marked *

Don't Miss

ನ.18ರಂದು ಗೌಡನಹಳ್ಳಿ ಜನಾಂದೋಲನ ಅಂಬಳೆದಿಂದ ಚಲೋ

ಚಿಕ್ಕಮಗಳೂರು:ಕೈಗಾರಿಕಾ ಮಾಲಿನ್ಯ, ರಾಸಾಯನಿಕ ತ್ಯಾಜ್ಯದಿಂದ ಜಲಮೂಲಗಳ ಮಾಲಿನ್ಯ ಹಾಗೂ ಸಾರ್ವಜನಿಕ ಆಸ್ತಿಗಳ ಅತಿಕ್ರಮಣ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಗೌಡನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನ.18ರಂದು ಅಂಬಳೆ ಕೈಗಾರಿಕಾ ಪ್ರದೇಶದಲ್ಲಿ...

ಚಿಕ್ಕಮಗಳೂರಿನಲ್ಲಿ ಇಂದಿರಾಗಾಂಧಿ 110ನೇ ಜನ್ಮದಿನಾಚರಣೆ ಅದ್ದೂರಿ ಸಿದ್ಧತೆ

ಚಿಕ್ಕಮಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಮರುಜನ್ಮ ನೀಡಿದ ಐತಿಹಾಸಿಕ ನೆಲವಾದ ಚಿಕ್ಕಮಗಳೂರಿನಲ್ಲಿ ಅವರ 110ನೇ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಜಿಲ್ಲಾ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಇದೇ ಸಂದರ್ಭದಲ್ಲಿ ನೂತನ...

Related Articles

ಕನ್ನಡ ಸಾಹಿತ್ಯ ಪರಿಷತ್ ಘಟಕಗಳ ನಿರ್ವಹಣೆಗೆ ಆಡಳಿತಾಧಿಕಾರಿ ನೇಮಕ

ಕನ್ನಡ,ಕನ್ನಡ ಬನ್ನಿ ನಮ್ಮ ಸಂಗಡ ಎನ್ನುವ ಬದಲಿಗೆ ಕನ್ನಡ, ಕನ್ನಡ ನಮಗೆ ದೇಣಿಗೆ ನಿಮಗೆ ಬೇಕಾದ...

ಕಾಡನೆಗಳ ಕಾಟಕ್ಕೆ ಶಾಸಕರ ರಾಜೀನಾಮೆ ಹೈಡ್ರಾಮಾ ?.

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ಇಬ್ಬರ ಸಾವಿಗೆ ಕಾರಣವಾಗಿದ್ದು ಜನ...

ಮುತ್ತೋಡಿ ಅರಣ್ಯಕ್ಕೆ ಆನೆ ಸ್ಥಳಾಂತರದ ಪ್ರಕ್ರಿಯೆಗೆ ವಿರೋಧ

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಸೆರೆಹಿಡಿಯಲಾಗಿರುವ ಕಾಡಾನೆಗಳನ್ನು ಮೂಡಿಗೆರೆ ಮಾರ್ಗವಾಗಿ ಮುತ್ತೋಡಿ ಅರಣ್ಯಕ್ಕೆ ಸ್ಥಳಾಂತರಿಸುವ...

ಆನೆಗಳ ವಾಪಸ್ ಕಳುಹಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಮೂಡಿಗೆರೆ ಕಡೆಗೆ ಕಾಡಾನೆಗಳ ಗುಂಪನ್ನು ಅರಣ್ಯ ಇಲಾಖೆ ರಹಸ್ಯವಾಗಿ...