Home ಕಾರು–ಥಾರ್ ನಡುವೆ ಭೀಕರ ಡಿಕ್ಕಿ: ಮೆಸ್ಕಾಂ ಜೆಇ ಸ್ಥಳದಲ್ಲೇ ಸಾವು
HomeKadurLatest Newsnamma chikmagalur

ಕಾರು–ಥಾರ್ ನಡುವೆ ಭೀಕರ ಡಿಕ್ಕಿ: ಮೆಸ್ಕಾಂ ಜೆಇ ಸ್ಥಳದಲ್ಲೇ ಸಾವು

Share
Share

ಕಡೂರು: ಕಾರು ಮತ್ತು ಥಾರ್ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಸ್ಕಾಂ ಇಲಾಖೆಯ ಕಿರಿಯ ಎಂಜಿನಿಯರ್ (ಜೆಇ) ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ಬುಕ್ಕಸಾಗರ ಗೇಟ್ ಬಳಿ ತಡರಾತ್ರಿ ನಡೆದಿದೆ.

ಮೃತರನ್ನು 49 ವರ್ಷದ ಸನತ್ ಎಂದು ಗುರುತಿಸಲಾಗಿದೆ. ಇವರು ಕಡೂರಿನಿಂದ ಚಿಕ್ಕಮಗಳೂರು ಕಡೆಗೆ ತಮ್ಮ ಫೋರ್ಡ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಎದುರಿನಿಂದ ಬಂದ ಥಾರ್ ಜೀಪ್‌ಗೆ ಕಾರು ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಫೋರ್ಡ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಸನತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಥಾರ್ ಜೀಪ್‌ನಲ್ಲಿದ್ದ ಮಂಜುಳಾ, ಸ್ವಾತಿ ಹಾಗೂ ಸೋಮೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Horrific collision between car and Thar: MESCOM JE dies on the spot

Share

Leave a comment

Leave a Reply

Your email address will not be published. Required fields are marked *

Don't Miss

ದೇವೀರಮ್ಮನ ಬೆಟ್ಟ ಏರುವಾಗ ಹೃದಯಾಘಾತದಿಂದ ಭಕ್ತನ ಸಾವು

ಚಿಕ್ಕಮಗಳೂರು: ಪ್ರಸಿದ್ಧ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕಾಗಿ ಬೆಟ್ಟ ಏರುತ್ತಿದ್ದ ಭಕ್ತರೊಬ್ಬರು ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಕನ್ಯಾಡಿ ಗ್ರಾಮದ...

ಸಾಲಬಾಧೆ ತಾಳಲಾರದೆ ಅಡಿಕೆ ತೋಟದಲ್ಲೇ ರೈತ ಆತ್ಮಹತ್ಯೆ

ಕಡೂರು: ಬರದ ಬೇಗುದಿ, ಕೃಷಿ ನಷ್ಟ ಹಾಗೂ ಸಾಲದ ಹೊರೆ ತಾಳಲಾರದೆ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದು, ದೀಪಾವಳಿಯ ಸಂಭ್ರಮದ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ...

Related Articles

ಕುಂಬಾರ ನೂತನ ಸಮುದಾಯ ಭವನ ಲೋಕಾರ್ಪಣೆ

ಚಿಕ್ಕಮಗಳೂರು:  ಹಿಂದಿನ ಕಾಲದಲ್ಲಿ ಕುಂಬಾರರು ತಯಾರಿಸಿದ ಮಣ್ಣಿನ ಮಡಿಕೆ, ದೀಪದ ಹಣತೆ ಸೇರಿದಂತೆ ಪ್ರತಿಯೊಂದು ವಸ್ತುಗಳು...

ತರೀಕೆರೆಯ ವ್ಯಕ್ತಿಯ ಬ್ಯಾಂಕ್ ಖಾತೆ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ವಂಚನೆ ಮೂಲಕ ಸಾರ್ವಜನಿಕರಿಂದ ಹಣ ಪಡೆದು, ಅದನ್ನು ತರೀಕೆರೆಯ ಕೆನರಾ ಬ್ಯಾಂಕ್ ಖಾತೆಯೊಂದಕ್ಕೆ...

ಕಲ್ಲುದೊಡ್ಡಿ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ

ಚಿಕ್ಕಮಗಳೂರು: ನಗರದ ಹೊರವಲಯದ ಕಲ್ಲುದೊಡ್ಡಿ ಗ್ರಾಮದ ಶನೇಶ್ವರ ಸ್ವಾಮಿ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು,...

ಟ್ರಾವೆಲ್ ಏಜೆಂಟ್ ನಿಂದ ಬಿಂಡಿಗಾ ಪೀಕ್ ರೆಸಾರ್ಟ್‌ಗೆ ₹8.28 ಲಕ್ಷ ವಂಚನೆ

ಚಿಕ್ಕಮಗಳೂರು: ಗ್ರಾಹಕರಿಗೆ ಹೋಟೆಲ್ ಕೊಠಡಿಗಳನ್ನು ಕಾಯ್ದಿರಿಸಿ ವಸತಿ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸಿದರೂ, ಸೇವಾ ಶುಲ್ಕದ...