Home namma chikmagalur chikamagalur ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
chikamagalurCrime NewsHomeLatest Newsnamma chikmagalur

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

Share
Share

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿ ನಿಲಯದ ತನ್ನ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥತಿಯಲ್ಲಿದ್ದ ಬಾಲಕನನ್ನು ಸಹಪಾಠಿಗಳು ರಕ್ಷಿಸಿದ್ದಾರೆ. ಕೂಡಲೇ ನಗರದ ಅರಳುಗುಪ್ಪೆ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ಕಳುಹಿಸಲಾಯಿತು. ‘ವಿದ್ಯಾರ್ಥಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಟಿ, ಎಂಆರ್‌ಐ ಸ್ಕ್ಯಾನ್ ಮಾಡಲಾಗಿದ್ದು, ಯಾವುದೇ ತೊಂದರೆಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಪ್ರಾಣಕ್ಕೆ ಅಪಾಯ ಇಲ್ಲ’ ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಐಟಿಡಿಪಿ ಜಿಲ್ಲಾ ಅಧಿಕಾರಿ ರಮೇಶ್ ತಿಳಿಸಿದರು.

Hostel student attempts suicide

Share

Leave a comment

Leave a Reply

Your email address will not be published. Required fields are marked *

Don't Miss

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ ಏಜೆಂಟ್ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್...

Related Articles

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...

ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್-ಮನನೊಂದ ಯುವತಿ ಆತ್ಮಹತ್ಯೆ

ಕೊಪ್ಪ : ಪ್ರೀತಿಯ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್...