Home namma chikmagalur chikamagalur ಹರಿಹರಪುರದಲ್ಲಿ ಮನೆ ಕಳ್ಳತನ: ₹2 ಲಕ್ಷ ಮೌಲ್ಯದ ಚಿನ್ನದ ಸರ ಅಪಹರಣ
chikamagalurCrime NewsHomeLatest Newsnamma chikmagalur

ಹರಿಹರಪುರದಲ್ಲಿ ಮನೆ ಕಳ್ಳತನ: ₹2 ಲಕ್ಷ ಮೌಲ್ಯದ ಚಿನ್ನದ ಸರ ಅಪಹರಣ

Share
Share

ಕೊಪ್ಪ: ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಬೀರುವಿನಲ್ಲಿದ್ದ ಸುಮಾರು ₹2 ಲಕ್ಷ ಮೌಲ್ಯದ 24 ಗ್ರಾಂ ತೂಕದ ಚಿನ್ನದ ಸರ ಹಾಗೂ ₹600 ನಗದು ಕಳವು ಮಾಡಿರುವ ಘಟನೆ ಕೊಪ್ಪ ತಾಲ್ಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಳೆಹೊದ್ದು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಶಾರದಾ ಎಂಬುವವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಅವರ ಪುತ್ರ ಚೇತನ್ ಎಚ್.ಕೆ. ಅವರು ಶೃಂಗೇರಿ ಪಟ್ಟಣದ ಮಾನಗಾರಿನಲ್ಲಿ ಕಳೆದ ಹತ್ತು ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ವಾಸವಾಗಿದ್ದಾರೆ. ಅವರು ವಾರದಲ್ಲಿ ಎರಡು ಮೂರು ಬಾರಿ ಸ್ವಗ್ರಾಮಕ್ಕೆ ಬಂದು ಹೋಗುತ್ತಿದ್ದರು ಎನ್ನಲಾಗಿದೆ.

ಅ.12ರಂದು ಸಂಜೆ ಸುಮಾರು 5.20ರ ವೇಳೆಗೆ ಶಾರದಾ ಅವರು ಮನೆಯ ಮುಂಭಾಗದ ಬಾಗಿಲಿಗೆ ಬೀಗ ಹಾಕಿಕೊಂಡು ತಮ್ಮ ತಾಯಿ ಊರಾದ ಹಾರೋಬೈಲಿಗೆ ತೆರಳಿದ್ದರು. ಸಂಜೆ ಸುಮಾರು 7 ಗಂಟೆಗೆ ಮನೆಗೆ ಮರಳಿದಾಗ ಬಾಗಿಲಿಗೆ ಹಾಕಿದ್ದ ಬೀಗ ಮುರಿದಿದ್ದು, ಬಾಗಿಲು ಅರ್ಧ ತೆರೆದಿರುವುದು ಕಂಡುಬಂದಿದೆ.

ಕೂಡಲೇ ಪುತ್ರ ಚೇತನ್ ಹಾಗೂ ಪುತ್ರಿ ಚೈತ್ರ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಬಳಿಕ ಪುತ್ರಿ ಚೈತ್ರ ಮತ್ತು ಪಕ್ಕದ ಮನೆಯ ನಿವಾಸಿ ಸುಧಾಕರ್ ಅವರೊಂದಿಗೆ ಮನೆಯೊಳಗೆ ಪರಿಶೀಲಿಸಿದಾಗ, ಎರಡು ಗೋಡ್ರೇಜ್ ಬೀರುಗಳ ಬಾಗಿಲು ತೆರೆದಿದ್ದು, ಅದರಲ್ಲಿದ್ದ ಬಟ್ಟೆ ಹಾಗೂ ಇತರ ವಸ್ತುಗಳು ಮಂಚದ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ.

ಬೀರುವಿನ ಲಾಕರ್‌ನಲ್ಲಿ ಇಟ್ಟಿದ್ದ ಸುಮಾರು 24 ಗ್ರಾಂ ತೂಕದ ಚಿನ್ನದ ಸರ ಹಾಗೂ ₹600 ನಗದು ಕಳವಾಗಿರುವುದು ತಿಳಿದುಬಂದಿದೆ. ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿ ಕಳವು ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಚೇತನ್ ಎಚ್.ಕೆ. ಅವರು ಹರಿಹರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಳವಾದ ಚಿನ್ನದ ಸರ ಹಾಗೂ ಹಣವನ್ನು ಪತ್ತೆಹಚ್ಚಿ ಕಳ್ಳರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

House burglary in Hariharapura: Gold chain worth ₹2 lakh stolen.

Share

Leave a comment

Leave a Reply

Your email address will not be published. Required fields are marked *

Don't Miss

ವಿಕಸಿತ ಭಾರತ ನಿರ್ಮಾಣಕ್ಕೆ ‘ವೋಕಲ್ ಫಾರ್ ಲೋಕಲ್’ ಸಂಕಲ್ಪ ಅಗತ್ಯ

ಚಿಕ್ಕಮಗಳೂರು: ಕಳೆದ 25 ವರ್ಷಗಳ ಕಾಲ ಯಾವುದೇ ಕಳಂಕವಿಲ್ಲದೆ, ರಜೆಯನ್ನೂ ಪಡೆಯದೆ, ನಿರಂತರವಾಗಿ ರಾಷ್ಟ್ರಕ್ಕಾಗಿ ಕೆಲಸ ಮಾಡಿದವರು ಪ್ರಧಾನಿ ನರೇಂದ್ರ ಮೋದಿಯವರು. ಅವರು ಒಬ್ಬ ಕನಸುಗಾರ ಮಾತ್ರವಲ್ಲದೆ, ಆ ಕನಸನ್ನು ನನಸು...

ಅತ್ಯಾಚಾರ ಆರೋಪಿ ಪರ ನಿಂತಿದ್ದ ಪೇದೆ ಅಮಾನತು

ಚಿಕ್ಕಮಗಳೂರು: ತಲೆಮರೆಸಿಕೊಂಡಿರುವ ಅತ್ಯಾಚಾರ ಪ್ರಕರಣದ ಆರೋಪಿ ಸತೀಶ್ ಪಾತ್ರಿ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪೊಲೀಸ್ ಠಾಣೆಯಲ್ಲಿನ ಆಗುಹೋಗು ಹಾಗೂ ತನಿಖೆಗೆ ಸಂಬಂಧಿಸಿದ ಮಾಹಿತಿಯನ್ನು ಆರೋಪಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಎನ್‌.ಆರ್‌.ಪುರ ಪೊಲೀಸ್...

Related Articles

ಅಂಗನವಾಡಿಗೆ ದಾಖಲಾಗದಿರುವ ಮಕ್ಕಳ ಮರು ಸಮೀಕ್ಷೆಗೆ ಸೂಚನೆ

ಚಿಕ್ಕಮಗಳೂರು: ನಗರ ಪ್ರದೇಶದಲ್ಲಿ ಅಂಗನವಾಡಿಗೆ ದಾಖಲಾಗದಿರುವ ಮಕ್ಕಳನ್ನು ಮರು ಸಮೀಕ್ಷೆ ನಡೆಸಿ ದಾಖಲಿಸಲು ಕ್ರಮ ವಹಿಸುವಂತೆ...

ಅಪಘಾತ ವಲಯ ಸರಿಪಡಿಸಲು ಯೋಜನೆ ರೂಪಿಸಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈಗಾಗಲೇ ೨೧ ಅಪಘಾತ ಸಂಭಾವ್ಯ ಸ್ಥಳಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ೩ ಅಪಘಾತ ವಲಯಗಳನ್ನು...

ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಕಣ್ಣು ಬಿಡುತ್ತಿರುವ ವ್ಯಕ್ತಿ

 ಕಡೂರು:  ಪಟ್ಟಣದ ಕೃಷಿ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ...

ಮಳೆರಾಯನ ಕೃಪೆಗಾಗಿ ಕಪ್ಪೆಗಳಿಗೆ ಸಂಪ್ರದಾಯಬದ್ಧ ಮದುವೆ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನಲ್ಲಿ ಬರದ ಛಾಯೆ ತೀವ್ರವಾಗಿ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಮಳೆರಾಯನ ಕೃಪೆಗಾಗಿ ಗ್ರಾಮಸ್ಥರೆಲ್ಲರೂ...