ತರೀಕೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಪಟ್ಟಣದ ತಾಯರ್ ಬೀದಿಯಲ್ಲಿ ನಡೆದಿದೆ.
ಪಟ್ಟಣದ ಗಣಪತಿ ಪೆಂಡಾಲ್ ಹಿಂಭಾಗದ ತಾಯರ್ ಬೀದಿಯ ನೂರ್ ಅಹ್ಮದ್ ಅವರಿಗೆ ಸೇರಿದ ಮನೆಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಬಟ್ಟೆಬರೆ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕುಟುಂಬಸ್ಥರು ಹಾಗೂ ಸ್ಥಳೀಯರು ಆತಂಕಗೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆಯಿಂದ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ಘಟನಾ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
House catches fire due to a short circuit
Leave a comment