Home Crime News ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು
Crime NewsHomeKadurLatest Newsnamma chikmagalur

ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು

Share
Share

ಬೀರೂರು: ಮನೆಯ ಮಾಲೀಕರು ಊರಿಗೆ ತೆರಳಿದ್ದ ವೇಳೆ ಕಳ್ಳರು ಮನೆಯ ಬಾಗಿಲು ಮುರಿದು ಒಳನುಗ್ಗಿ ₹1.45 ಲಕ್ಷ ಮೌಲ್ಯದ ಚಿನ್ನಾ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ಬೀರೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಟ್ಟಣದ ರಾಜಾಜಿನಗರ ಬಡಾವಣೆ ವಾಸಿ ಎಸ್ಟೆಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಕುಮಾರ್ ಅವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆ.

ಕುಮಾರ್‌ಅವರು ಕಳೆದವಾರ ರಜೆ ಪ್ರಯುಕ್ತ ಸ್ವಗ್ರಾಮವಾದ ಹೊಸದುರ್ಗ ತಾಲೂಕಿನ ದುಗ್ಗಾವರಕ್ಕೆ ತೆರಳಿದ್ದರು. ಸೋಮವಾರ ಬೆಳಗಿನ ಜಾವ ಸಹೋದ್ಯೋಗಿ ರಾಜೇಶ್ ದೂರವಾಣಿ ಮೂಲಕ ಮನೆಯ ಬಾಗಿಲು ಮುರಿದಿರುವ ಮಾಹಿತಿ ನೀಡಿದರು.

ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿ ಬೆದ್ರೂಮ್ ವಾರ್ಡ್ ರೋಟ್ನಲ್ಲಿ ಇರಿಸಿದ್ದ ಒಂದು ಜತೆ ಬಂಗಾರದ ಓಲೆ. ಜುಮುಕಿ, ಮೂರು ಜತೆ ಬಂಗಾರದ ಓಲೆ. ಒಂದು ಬೆಳ್ಳಿಯ ಚೊಂಬು ಹಾಗೂ ನಾಲ್ಕು ಬೆಳ್ಳಿಯ ದೀಪಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಈ ಸಂಬಂಧ ಕುಮಾರ್‌ ಅವರು ಬೀರೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

House door broken into and jewellery stolen

Share

Leave a comment

Leave a Reply

Your email address will not be published. Required fields are marked *

Don't Miss

ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ

ಚಿಕ್ಕಮಗಳೂರು: ಶಾಂತಿಯುತವಾಗಿ ನಡೆಯಬೇಕಿದ್ದ ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯೊಂದು ನೋಡನೋಡುತ್ತಿದ್ದಂತೆ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಂಗರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ. ಸಭೆಯಲ್ಲಿ...

ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು. ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ(ಅಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ...

Related Articles

ಜಿಲ್ಲೆಯ ಐದು ಜನ ಶಾಸಕರಿಗೆ ಬೊಗಣಿ ಗೂಟ ಖಚಿತ !?

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು...

ಕಲಿಕೆ ವಯಸ್ಸಿನಲ್ಲಿ ವ್ಯಾಮೋಹಕ್ಕೆ ಒಳಗಾಗದಿರಿ

ಚಿಕ್ಕಮಗಳೂರು: ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸುವ ಇಂದಿನ ಯುವಪೀಳಿಗೆ ಬಹಳ ಷ್ಟು ಎಚ್ಚರಿಕೆ ವಹಿಸಬೇಕು. ಕಲಿಕೆಯಲ್ಲಿ ಹೊರತಾಗಿ...

ಭೋವಿ ಜಾತಿ ಪ್ರಮಾಣಪತ್ರ ನೀಡಲು ವಿಳಂಬ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಡ್ಡರ ಸಮುದಾಯದವರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ...

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ...