Home namma chikmagalur chikamagalur ಕಳಸದ ಹೆಮ್ಮಕ್ಕಿಯಲ್ಲಿ ಬೃಹತ್ ಕಾಳಿಂಗ ಸರ್ಪ ಪತ್ತೆ
chikamagalurHomeLatest Newsnamma chikmagalur

ಕಳಸದ ಹೆಮ್ಮಕ್ಕಿಯಲ್ಲಿ ಬೃಹತ್ ಕಾಳಿಂಗ ಸರ್ಪ ಪತ್ತೆ

Share
Share

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲ್ ಇಡಕಣಿ ಗ್ರಾಮದ ಹೆಮ್ಮಕ್ಕಿ ಭಾಗದಲ್ಲಿ ಕಳೆದ ಹತ್ತು ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ಬೃಹತ್ ಕಾಳಿಂಗ ಸರ್ಪವೊಂದು ಪತ್ತೆಯಾಗಿದೆ.

ಇಲ್ಲಿನ ಮುಂಡಾನೆ ಮೋಹನ್ ಗೌಡ ಎಂಬುವವರ ಮನೆಯ ಹಟ್ಟಿಯಲ್ಲಿ ಸುಮಾರು 18 ಅಡಿ ಉದ್ದದ ಈ ಕಾಳಿಂಗ ಸರ್ಪ ಅಡಗಿ ಕುಳಿತಿತ್ತು. ಹಟ್ಟಿಯಲ್ಲಿ ಹಾವು ಇರುವುದನ್ನು ಗಮನಿಸಿದ ಮನೆಯವರು ತಕ್ಷಣವೇ ಅರಣ್ಯ ಇಲಾಖೆ ಸ್ನೇಕ್ ರಿಜ್ವಾನ್ ಅವರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ರಿಜ್ವಾನ್ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ. ಹತ್ತು ದಿನಗಳಲ್ಲೇ ಈ ಭಾಗದಲ್ಲಿ ಕಾಣಿಸಿಕೊಂಡ ಎರಡನೇ ಕಾಳಿಂಗ ಸರ್ಪ ಇದಾಗಿದ್ದು, ಸೆರೆಹಿಡಿದ ಹಾವನ್ನು ಅರಣ್ಯ ಇಲಾಖೆಯ ಮಾರ್ಗದರ್ಶನದಲ್ಲಿ ಸಮೀಪದ ದಟ್ಟ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ. ಬೃಹತ್ ಗಾತ್ರದ ಹಾವನ್ನು ಕಾಡಿಗೆ ಬಿಟ್ಟ ನಂತರ ನಿಟ್ಟುಸಿರು ಬಿಟ್ಟಿದ್ದಾರೆ.

Huge python found in Kalasa Hemmakki

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....