Home namma chikmagalur chikamagalur ದೀಪಾವಳಿಗೆ ಕಾಡುಪ್ರಾಣಿಗಳ ಬೇಟೆ: ಓರ್ವನ ಬಂಧನ; ಮೂವರು ಪರಾರಿ
chikamagalurCrime NewsHomeLatest Newsnamma chikmagalur

ದೀಪಾವಳಿಗೆ ಕಾಡುಪ್ರಾಣಿಗಳ ಬೇಟೆ: ಓರ್ವನ ಬಂಧನ; ಮೂವರು ಪರಾರಿ

Share
Share

ಮೂಡಿಗೆರೆ: ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಅಕ್ರಮವಾಗಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಹಂಚಿಕೆ ಮಾಡುತ್ತಿದ್ದ ತಂಡವೊಂದರ ವಿರುದ್ಧ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ಇಬ್ಬರು ಬಂದೂಕುಗಳು ಸೇರಿದಂತೆ ಅಪಾರ ಪ್ರಮಾಣದ ಮಾಂಸವನ್ನು ವಶಪಡಿಸಿಕೊಂಡಿದೆ.

ಮೂಡಿಗೆರೆ ತಾಲೂಕಿನ ಬಿನ್ನಡಿ ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ತಂಡವು ಈ ಬಾರಿ ಕಡವೆ ಹಾಗೂ ಕಾಡುಕುರಿಯನ್ನು ಬೇಟೆಯಾಡಿರುವ ಬಗ್ಗೆ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಗ್ರಾಮದ ರಮೇಶ್ ಎಂಬುವವರ ಮನೆಯಲ್ಲಿ ಬೇಟೆಯಾಡಿದ ಪ್ರಾಣಿಗಳ ಮಾಂಸವನ್ನು ಕತ್ತರಿಸಿ ಪಾಲು ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಹಠಾತ್ ದಾಳಿ ನಡೆಸಿದರು.

ಈ ವೇಳೆ ರಮೇಶ್ ಅರಣ್ಯಾಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ತಂಡದ ಇತರ ಸದಸ್ಯರಾದ ಮಹೇಂದ್ರ, ಪ್ರಕಾಶ್ ಮತ್ತು ಮಲ್ಲಯ್ಯ ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಬೇಟೆಗೆ ಬಳಸಿದ್ದ ಎರಡು ಬಂದೂಕುಗಳು ಹಾಗೂ ಕಡವೆ ಮತ್ತು ಕಾಡುಕುರಿಯ ಅಪಾರ ಪ್ರಮಾಣದ ಮಾಂಸವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮೂಡಿಗೆರೆ ಅರಣ್ಯ ಕಚೇರಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪರಾರಿಯಾಗಿರುವ ಮೂವರು ಆರೋಪಿಗಳ ಬಂಧನಕ್ಕಾಗಿ ಅರಣ್ಯ ಇಲಾಖೆ ಶೋಧ ಕಾರ್ಯ ತೀವ್ರಗೊಳಿಸಿದೆ.

Hunting of wild animals for Deepavali: One arrested; three absconding

Share

Leave a comment

Leave a Reply

Your email address will not be published. Required fields are marked *

Don't Miss

ಬೈಕ್‌ನಿಂದ ಬಿದ್ದು ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಚಿಕ್ಕಮಗಳೂರು: ರಸ್ತೆಗೆ ಏಕಾಏಕಿ ಹಸು ಅಡ್ಡ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಸೋಮಪ್ಪ (೫೮) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತರೀಕೆರೆ ತಾಲ್ಲೂಕಿನ ಕುಂಟಿನಮಡು ಗ್ರಾಮದ ಬಳಿ...

ಕಂಪೌಂಡ್ ಸ್ಲ್ಯಾಬ್‌ಗಳ ವಾಹನ ಪಲ್ಟಿ: ಕಾರ್ಮಿಕ ಸಾವು

ಚಿಕ್ಕಮಗಳೂರು: ಸಿಮೆಂಟ್ ಬೆಂಚ್ ಹಾಗೂ ಕಂಪೌಂಡ್ ಸ್ಲ್ಯಾಬ್‌ಗಳನ್ನು ಸಾಗಿಸುತ್ತಿದ್ದ ಮಹೇಂದ್ರ ಜಿತೋ ವಾಹನದ ಹಿಂಬದಿಯ ಟೈರ್ ಸ್ಫೋಟಗೊಂಡು ಸಂಭವಿಸಿದ ಅಪಘಾತದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಬೀರೂರು ಸಮೀಪದ ಚಟ್ನಹಳ್ಳಿ...

Related Articles

ಕೊಪ್ಪ ತಾಲ್ಲೂಕಿನಲ್ಲಿ ಕಾಡುಕೋಣಗಳ ಉಪಟಳ

ಕೊಪ್ಪ: ಕಾಡುಕೋಣಗಳ ಉಪಟಳ ದಿನೇ ದಿನೇ ಮಿತಿ ಮೀರುತ್ತಿದ್ದು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಲಸೆ ಕಾರ್ಮಿಕರ...

ಕೆಂಪುಬಸ್ ಬಲೂ ಗ್ಯಾರಂಟಿ ಡೇಂಜರ್ ? ಡೇಂಜರ್ ? ಕೆಟ್ಟು ನಿಲ್ಲುವ ಬಸ್ಸುಗಳು

ಚಿಕ್ಕಮಗಳೂರು:  ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಲೂ ಡೇಂಜರ್ ಯಾವಾಗ ಎಲ್ಲಿ ಕೆಟ್ಟು ನಿಲ್ಲುತ್ತವೆ ಎಂದು ಪ್ರಯಾಣಿಕರು...

ಇಂದು ನವೀಕರಣಗೊಂಡ ರೈಲು ನಿಲ್ದಾಣದ ಲೋಕಾರ್ಪಣೆ

ಚಿಕ್ಕಮಗಳೂರು: ರೈಲು ನಿಲ್ದಾಣದ ನವೀಕರಣ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ...

ಕಾವಲುಗಾರ ಕೊಲೆ ಮಾಡಿದ್ದ ಆರೋಪಿ ಬಂಧನ

ಕಡೂರು: ತೋಟದ ಮನೆಯೊಂದರಲ್ಲಿ ಕಾವಲುಗಾರನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಯನ್ನು ಕಡೂರು ಠಾಣೆ ಪೊಲೀಸರು...