Home namma chikmagalur chikamagalur ₹8 ಕೋಟಿ ಹಣ, ಚಿನ್ನಾಭರಣ ದೋಚಿ 9 ವರ್ಷದ ಮಗನೊಂದಿಗೆ ಪತಿ ಪರಾರಿ
chikamagalurCrime NewsHomeLatest Newsnamma chikmagalur

₹8 ಕೋಟಿ ಹಣ, ಚಿನ್ನಾಭರಣ ದೋಚಿ 9 ವರ್ಷದ ಮಗನೊಂದಿಗೆ ಪತಿ ಪರಾರಿ

Share
Share

ಕೊಪ್ಪ: ಪತಿಯೊಬ್ಬ ತನ್ನ ಪತ್ನಿಗೆ ದೀರ್ಘಕಾಲದಿಂದ ದೈಹಿಕ, ಮಾನಸಿಕ ಹಿಂಸೆ ನೀಡಿ, ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ದೋಚಿ, ಮಗನನ್ನು ಬಲವಂತವಾಗಿ ಕರೆದೊಯ್ದಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆಕೆಯ ಪತಿ ಎರಾಲ್ ರೋಹನ್ ಡಿಕುನ್ನಾ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು ಮೂಲದ ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಪ್ರೀತಿಸಿ ಮದುವೆಯಾಗಿದ್ದ ದಂಪತಿ ಕತಾರ್‌ನಲ್ಲಿ ನೆಲೆಸಿದ್ದರು. ಮದುವೆ ಸಮಯದಲ್ಲಿ ವರದಕ್ಷಿಣೆ ರೂಪದಲ್ಲಿ 160 ಗ್ರಾಂ ಚಿನ್ನಾಭರಣ ಪಡೆದಿದ್ದ ಪತಿ, ನಂತರದ ದಿನಗಳಲ್ಲಿ ಹಣಕ್ಕಾಗಿ ಪೀಡಿಸಿ, ಪತ್ನಿಯ ಕೈಯಿಂದ ಕೆಲಸ ಮಾಡಿಸಿ, ಆಕೆಯ ಸಂಪಾದನೆಯ ಸುಮಾರು ₹8 ಕೋಟಿ ಹಣವನ್ನು ಸುಲಿಗೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ.

ಹಣಕ್ಕಾಗಿ ನಿರಂತರ ಹಲ್ಲೆ ನಡೆಸಿ, ಚಾಕುವಿನಿಂದ ಕೊಲೆ ಮಾಡಲು ಯತ್ನಿಸಿದ್ದಲ್ಲದೆ, ಜಗಳ ಬಿಡಿಸಲು ಬಂದ ಮಕ್ಕಳ ಮೇಲೂ ಹಲ್ಲೆ ನಡೆಸಿ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಗಸ್ಟ್ 3ರಂದು ಆಸ್ಪತ್ರೆಗೆಂದು ಕರೆದೊಯ್ದು ತಾಯಿ ಮತ್ತು ಮಗಳನ್ನು ಅಲ್ಲಿಯೇ ಬಿಟ್ಟು, 9 ವರ್ಷದ ಮಗನನ್ನು ಪುಸಲಾಯಿಸಿ ಕರೆದುಕೊಂಡು ಪತಿ ಭಾರತಕ್ಕೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಅಲ್ಲದೆ, ಮನೆಯಲ್ಲಿದ್ದ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿ, ಸುಮಾರು 300 ಗ್ರಾಂ ಚಿನ್ನಾಭರಣ, 2 ಚಿನ್ನದ ಬಿಸ್ಕೆಟ್‌ಗಳು, ₹65 ಲಕ್ಷ ನಗದು, ಆಸ್ತಿ ದಾಖಲೆಗಳು ಹಾಗೂ ಪಾಸ್‌ಪೋರ್ಟ್‌ಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರುದಾರೆ ತಿಳಿಸಿದ್ದಾರೆ.

ನಂತರ ಕತಾರ್‌ನ ಭಾರತೀಯ ರಾಯಭಾರ ಕಚೇರಿಯಿಂದ ತಾತ್ಕಾಲಿಕ ಪಾಸ್‌ಪೋರ್ಟ್ ಪಡೆದು ಮಂಗಳೂರಿಗೆ ಮರಳಿದ ಸಂತ್ರಸ್ತೆ, ಪತಿಯ ಜೊತೆಗೆ ಆತನ ಕೃತ್ಯಕ್ಕೆ ಸಾಥ್ ನೀಡಿ ಮಾನಸಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಅತ್ತೆ ಮೇರಿ ಮೇಗ್ನಲಿನ್ ಡಿಕುನ್ಹಾ, ಗಂಡನ ಅಣ್ಣ ಎಜಿಲ್ ಶರಣ್ ಡಿಕುನ್ನಾ ಹಾಗೂ ನಾದಿನಿ ಪ್ರೀಮಲ್ ವಿವಿನ್ ಪಿಂಟೋ ವಿರುದ್ಧವೂ ಜಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Husband absconds with 9-year-old son after stealing Rs 8 crore in cash and jewellery

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...