Home namma chikmagalur chikamagalur ಪತಿ – ಪತ್ನಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ
chikamagalurCrime NewsHomeLatest Newsnamma chikmagalur

ಪತಿ – ಪತ್ನಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ

Share
Share

ಚಿಕ್ಕಮಗಳೂರು: ತಾಲ್ಲೂಕಿನ ಅಂಬಳೆ ಹೋಬಳಿ ಗಿಡ್ಡೆನಹಳ್ಳಿ ಗ್ರಾಮದ ನಿವಾಸಿ ಗೋವಿಂದೇಗೌಡ ಅವರು ತಮ್ಮ ಹಾಗೂ ತಮ್ಮ ಪತ್ನಿಯ ಮೊಬೈಲ್ ಸಂಖ್ಯೆಗಳಿಗೆ ನಿರಂತರವಾಗಿ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿರುವ ವ್ಯಕ್ತಿಯ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಳೆದ 2025ರ ಮೇ ತಿಂಗಳಿನಿಂದ ಗೋವಿಂದೇಗೌಡರ ಜಿಯೋ ಸಂಖ್ಯೆಗೆ ಹಾಗೂ ನವೆಂಬರ್ ತಿಂಗಳಿನಿಂದ ಅವರ ಪತ್ನಿ ಭವ್ಯ ಅವರು ಬಳಸುತ್ತಿರುವ ಏರ್‌ಟೆಲ್ ಸಂಖ್ಯೆಗೆ 9025682598 ಎಂಬ ಮೊಬೈಲ್ ಸಂಖ್ಯೆಯಿಂದ ಅಸಭ್ಯ ಫೋಟೋ ಮತ್ತು ವಿಡಿಯೋಗಳು ಬರುತ್ತಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಆರೋಪಿತ ವ್ಯಕ್ತಿಯ ಸಂದೇಶಗಳನ್ನು ಹಲವಾರು ಬಾರಿ ಬ್ಲಾಕ್ ಮಾಡಿದರೂ ಸಹ ಬೇರೆ ಬೇರೆ ರೀತಿಯಲ್ಲಿ ಅಶ್ಲೀಲ ಮಾಹಿತಿ ರವಾನಿಸುವುದು ಮುಂದುವರೆದಿದ್ದು, ಇದರಿಂದ ದಂಪತಿಗಳು ತೀವ್ರ ಮಾನಸಿಕ ಕಿರಿಕಿರಿ ಮತ್ತು ತೊಂದರೆ ಅನುಭವಿಸುವಂತಾಗಿದೆ.

ಈ ಸಂಬಂಧ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Husband harasses wife by sending obscene messages

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...