Home namma chikmagalur ಆ.28 ರಂದು ಐಸಿರಿ ಸ್ಟೀಲ್ ಬ್ಯಾಂಕ್: ಉದ್ಘಾಟನೆ
namma chikmagalurchikamagalurHomeLatest News

ಆ.28 ರಂದು ಐಸಿರಿ ಸ್ಟೀಲ್ ಬ್ಯಾಂಕ್: ಉದ್ಘಾಟನೆ

Share
Share

ಚಿಕ್ಕಮಗಳೂರು: ಕಲ್ಯಾಣ ನಗರದ ಬಸವತತ್ವ ಪೀಠದ ಆವರಣದಲ್ಲಿ ಬೆಂಗಳೂರಿನ ಅದಮ್ಯ ಚೇತನ ಹಾಗೂ ಐಸಿರಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಆ.೨೮ ರಂದು ಸಂಜೆ ೬ ಗಂಟೆಗೆ ಐಸಿರಿ ಸ್ಟೀಲ್ ಬ್ಯಾಂಕ್: ಉದ್ಘಾಟನೆ ಹಾಗೂ ಐಸಿರಿ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಐಸಿರಿ ಫೌಂಡೇಶನ್ ಅಧ್ಯಕ್ಷ ರೋಹನ್ ಭಾರ್ಗವಪುರಿ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಸ್ಥೆಯು ಭರವಸೆ ಮತ್ತು ಸುಧಾರಣೆ ಕಾರ್ಯದ ಜವಾಬ್ದಾರಿಯನ್ನು ತನ್ನ ಹೆಗಲಿಗೇರಿಸಿಕೊಂಡು ವಿವಿಧ ಆಯಾಮದಲ್ಲಿ ಈಗಾಗಲೇ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಐಸಿರಿ ಪರ್ಸ್ಪೆಕ್ಟಿವ್ಯೆಂಬ ಆಯಾಮದಡಿ ಜ್ಞಾನ ಶಿಬಿರ, ಐಸಿರಿ ಸಸ್ಟೇನೆಬಿಲಿಟಿಯೆಂಬ ಆಯಾಮದಡಿಯಲ್ಲಿ ಹಸಿರು ಸಮರ್ಥನೀಯ ಭವಿಷ್ಯಕ್ಕೆ ಐಸಿರಿ ಇಂಡಿಯಾ ಆಯಾಮದಡಿ ನಾಗರಿಕ ನಿರ್ಮಾಣ ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಸವತತ್ವ ಪೀಠದ ಡಾ. ಬಸವ ಮರುಳಸಿದ್ದ ಸ್ವಾಮಿಗಳು ವಹಿಸಲಿದ್ದು, ತಮ್ಮ ನೇತೃತ್ವದಲ್ಲಿ ನಡೆಯುವ ಈ ಉದ್ಘಾಟನಾ ಸಮಾರಂಭ ತೇಜಸ್ವಿನಿ ಅನಂತಕುಮಾರ್ ಅವರ ಮಾರ್ಗದರ್ಶನದಲ್ಲಿ ಅನಂತ ಪ್ಲೇಟ್ ಬ್ಯಾಂಕ್‌ನ ೨೭ನೇ ಘಟಕ ಇದಾಗಿದ್ದು, ಈಗಾಗಲೇ ೨ ಸಾವಿರ ಸ್ಟೀಲ್ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ನಟ, ನಿರ್ಮಾಪಕ, ನಿರ್ದೇಶಕ ಮತ್ತು ರಂಗಕರ್ಮಿಯಾಗಿ ಕಲಾಸೇವೆಯನ್ನು ಸಲ್ಲಿಸುತ್ತಿರುವ ಟಿ.ಎಸ್. ನಾಗಾಭರಣ ಹಾಗೂ ಸಾಮಾಜಿಕ ಕಾರ್ಯಕರ್ತೆ ಹಸಿರು ಭಾನುವಾರ ಸಮಾಜದ ಹಿತಕ್ಕಾಗಿ ನಿತ್ಯ ಅನ್ನದಾನ ಸೇವೆ ಸಲ್ಲಿಸುತ್ತಿರುವ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರೂ, ಸಂಸ್ಥಾಪಕರೂ ಆದ ತೇಜಸ್ವಿನಿ ಅನಂತಕುಮಾರ್, ಶಾಸಕ ಹೆಚ್.ಡಿ. ತಮ್ಮಯ್ಯ, ಲೈಫ್‌ಲೈನ್ ಫೀಡ್ಸ್‌ನ ಸಂಸ್ಥಾಪಕ ಕಿಶೋರ್ ಕುಮಾರ್ ಹೆಗ್ಡೆ, ನಗರಸಭಾಧ್ಯಕ್ಷೆ ಶೀಲಾದಿನೇಶ್, ಪೌರಾಯುಕ್ತ ಬಿ.ಸಿ. ಬಸವರಾಜ್ ಮತ್ತಿತರರು ಭಾಗವಹಿಸಲಿದ್ದಾರೆಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಐವರು ಸಾಧಕರಿಗೆ ಐಸಿರಿ ಸಾಧಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದೆಂದು ಹೇಳಿದ ಅವರು, ಟಿ.ಎಸ್. ನಾಗಾಭರಣ, ತೇಜಸ್ವಿನಿ ಅನಂತಕುಮಾರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೈಸರ್ಗಿಕ ಕೃಷಿಕ ಚಂದ್ರಶೇಖರ್ ನಾರಣಾಪುರ, ವೈಲ್ಡ್ ಕ್ಯಾಟ್-ಸಿ ಸಂಸ್ಥಾಪಕ ಡಿ.ವಿ ಗಿರೀಶ್ ಹಾಗೂ ಶಿವಮೊಗ್ಗದ ಸಮನ್ವಯ ಟ್ರಸ್ಟ್ ಸಂಸ್ಥಾಪಕ ಸಮನ್ವಯ ಕಾಶಿ ಇವರುಗಳನ್ನು ಐಸಿರಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದರು.

ನಾಗಶ್ರೀ ತ್ಯಾಗರಾಜ್ ಅವರ ಪದ್ಮಪತ್ರೆ, ಹುಳಿಗೆರೆ ಮಲ್ಲಿಕಾರ್ಜುನ್ ಅವರ ಒನ್ ಮಿನಿಟ್ ಪ್ಲೀಸ್ ಕೃತಿಗಳು ಅಂದು ಲೋಕಾರ್ಪಣೆಯಾಗಲಿವೆ ಎಂದು ತಿಳಿಸಿದರು.

ಈ ಸ್ಟೀಲ್ ಬ್ಯಾಂಕಿನ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕೆಂದು ಮನವಿ ಮಾಡಿದ ಅವರು, ಆ.೨೮ ರಂದು ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಐಸಿರಿ ಫೌಂಡೇಶನ್‌ನ ಟ್ರಸ್ಟಿಗಳಾದ ಬಿ.ತಿಪ್ಪೇರುದ್ರಪ್ಪ, ನಂಜೇಶ್ ಬೆಣ್ಣೂರ್, ಸದಾಶಿವಪ್ಪ, ಜಗದೀಶ್ ಬಾಬು, ಬಿ.ಎಂ ಶಶಿಧರ್ ಉಪಸ್ಥಿತರಿದ್ದರು.

ICRI Steel Bank to be inaugurated on August 28

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...