Home namma chikmagalur chikamagalur ಸ್ಟಿಂಗ್ ಆಪರೇಷನ್ ಹಿಂದಿನ ರೂವಾರಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಿ
chikamagalurHomeLatest Newsnamma chikmagalur

ಸ್ಟಿಂಗ್ ಆಪರೇಷನ್ ಹಿಂದಿನ ರೂವಾರಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಿ

Share
Share

ಚಿಕ್ಕಮಗಳೂರು: ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯದ ಹಿರಿಯ ರಾಜಕೀಯ ನಾಯಕರ ವಿರುದ್ಧ ಆರೋಪ ಮಾಡುವ ಬದಲು, ಆ ಕಾರ್ಯಾಚರಣೆಯ ಹಿಂದಿರುವವರು ಯಾರು, ಅದರ ನಿರ್ದೇಶಕರು ಮತ್ತು ನಿರ್ಮಾಪಕರು ಯಾರು ಎಂಬುದನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಆಗ್ರಹಿಸಿದರು.

ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಸುಮಾರು ೨೦೦ ಜನರ ಹೆಸರು ಕೇಳಿಬರುತ್ತಿದೆ. ನಾನೇ ಮಾಡಿದ್ದೇನೆ ಎಂದು ಕೆಲವರು ಹೇಳಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ಅಭಿಮಾನಿ, ಡಿ.ಕೆ. ಶಿವಕುಮಾರ್ ಅವರ ಅಭಿಮಾನಿ ಎಂದು ಹೇಳಿಕೊಂಡ ಮಾತ್ರಕ್ಕೆ ಆರೋಪಿಗಳನ್ನು ವಿಚಾರಣೆಯಿಂದ ಹೊರಗಿಡಲು ಸಾಧ್ಯವೇ? ಹಾಗಿದ್ದರೆ ಇದುವರೆಗೆ ಅವರನ್ನು ವಿಚಾರಣೆಗೊಳಪಡಿಸದಿರುವುದೇಕೆ? ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿರುವುದೇಕೆ ಎಂದು ಪ್ರಶ್ನಿಸಿದರು.

ಕೆಪಿಎಸ್ಸಿ ಪರೀಕ್ಷೆಯಲ್ಲಿನ ಭ್ರಷ್ಟಾಚಾರ, ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ನೈಸ್ ಯೋಜನೆಗೆ ಸಂಬಂಧಿಸಿದ ರೈತರ ಹೋರಾಟದಂತಹ ಗಂಭೀರ ವಿಚಾರಗಳನ್ನು ಮುಚ್ಚಿಹಾಕಲು ಸ್ಟಿಂಗ್ ಆಪರೇಷನ್ ಅಸ್ತ್ರವನ್ನು ಬಳಸಲಾಗುತ್ತಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು. ಮಹಿಳೆಯ ಮೂಲಕ ಸ್ಟಿಂಗ್ ಆಪರೇಷನ್ ಮಾಡಿಸಿದವರು ಯಾರು, ಅದರಿಂದ ಯಾರಿಗೆ ಲಾಭವಾಗಿದೆ ಎಂಬುದರ ಕುರಿತು ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಗೃಹ ಸಚಿವರು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಮಾತಿನ ಮೇಲೆ ಹಿಡಿತವಿರಬೇಕು. ಗ್ರಾಮೀಣ ಜನರನ್ನು ಅವಹೇಳನ ಮಾಡುವ ರೀತಿಯ ಪದಪ್ರಯೋಗ ಮಾಡುವುದು ಸರಿಯಲ್ಲ. ಹಳ್ಳಿಯಲ್ಲಿ ಹುಟ್ಟಿ ಬೆಳೆದವರಿಗೆ ಅಲ್ಲಿನ ಸರ್ಕಾರಿ ಶಾಲೆ, ಆಸ್ಪತ್ರೆ, ವಸತಿನಿಲಯ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಏನೆಂಬುದು ಚೆನ್ನಾಗಿ ತಿಳಿದಿರುತ್ತದೆ. ಸದಾಶಿವನಗರದಂತಹ ಐಷಾರಾಮಿ ಪರಿಸರದಲ್ಲಿ ಬೆಳೆದವರಿಗೆ ಗ್ರಾಮೀಣ ಜನರ ಕಷ್ಟದ ಅರಿವು ಇರುವುದಿಲ್ಲ ಎಂದು ಟೀಕಿಸಿದರು.

ಗ್ರಾಮೀಣ ಜನರನ್ನು ಅವಮಾನಿಸುವ ಹೇಳಿಕೆಗಳು ರಾಜ್ಯದಲ್ಲಿ ಅನಗತ್ಯ ಪ್ರಚೋದನೆ ಮತ್ತು ಸಂಘರ್ಷಕ್ಕೆ ಕಾರಣವಾಗಬಹುದು. ಗೃಹ ಇಲಾಖೆಯ ಜವಾಬ್ದಾರಿ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದೇ ಹೊರತು ಅಶಾಂತಿ ಸೃಷ್ಟಿಸುವುದಲ್ಲ. ಗೃಹ ಸಚಿವರು ಇಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ೭,೯೨೫ ಹುದ್ದೆಗಳು ಖಾಲಿ ಇವೆ. ಅವುಗಳನ್ನು ನ್ಯಾಯಯುತವಾಗಿ ಭರ್ತಿ ಮಾಡುವತ್ತ ಸರ್ಕಾರ ಗಮನಹರಿಸಬೇಕು. ಕೆಪಿಎಸ್ಸಿ ಸೇರಿದಂತೆ ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆ ಮಾಡಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು. ಕೇವಲ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುವುದರಿಂದ ನಾಯಕತ್ವ ಸಾಬೀತಾಗುವುದಿಲ್ಲ. ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಬೇಕು ಎಂದು ಸಲಹೆ ನೀಡಿದರು.

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಉತ್ತರ ನೀಡಬೇಕು. ಕಾಂಗ್ರೆಸ್ ಪಕ್ಷದವರೇ ಈ ಕಾರ್ಯಾಚರಣೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಅಂತಹವರ ವಿರುದ್ಧ ನೋಟಿಸ್ ನೀಡಿ ತನಿಖೆ ನಡೆಸಲು ಸರ್ಕಾರ ಏಕೆ ಮುಂದಾಗುತ್ತಿಲ್ಲ? ಪ್ರಕರಣದ ಕುರಿತು ದೂರು ಸಲ್ಲಿಕೆಯಾಗಿದ್ದರೂ ನಿಜವಾದ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಏಕೆ ನಡೆಯುತ್ತಿಲ್ಲ ಎಂದು ಪ್ರಶ್ನಿಸಿದರು

Identify the masterminds behind the sting operation and take action.

Share

Leave a comment

Leave a Reply

Your email address will not be published. Required fields are marked *

Don't Miss

ಪ್ಯಾರಾ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಲೈಫ್‌ಲೈನ್ ಫೀಡ್ಸ್ ನಿಂದ ಸನ್ಮಾನ

ಚಿಕ್ಕಮಗಳೂರು: ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಪ್ಯಾರಾ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಲೈಫ್‌ಲೈನ್ ಫೀಡ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ಒಕ್ಕಲಿಗರ ಸಮುದಾಯ...

ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕಿಂತ ಜನಸೇವೆ ಮುಖ್ಯ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿಗೆ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿರುವುದು ಸಂತಸದ ಸಂಗತಿ. ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿ, ಜನಸಾಮಾನ್ಯರ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಟ್ಟಾಗ ಮಾತ್ರ ಕಟ್ಟಡ ನಿರ್ಮಾಣ...

Related Articles

ಕಾರ್ಖಾನೆಗಳ ವಿಪರೀತ ಹಾವಳಿ ಖಂಡಿಸಿ ಗೌಡನಹಳ್ಳಿ ಗ್ರಾಮಸ್ಥರ ಧರಣಿ

ಚಿಕ್ಕಮಗಳೂರು: ಕೈಗಾರಿಕೆ ಕಾರ್ಖಾನೆಗಳು ಹೊರಸೂಸುವ ಅನಿಲದಿಂದ ವಾಯುಮಾಲಿನ್ಯ ಹಾಗೂ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಒತ್ತುವರಿ...

ನಕಲಿ ತುಪ್ಪದ ಬೆನ್ನಲ್ಲೇ ನಕಲಿ ಜೇನುತುಪ್ಪ ದಂಧೆ ಪತ್ತೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ನಕಲಿ ತುಪ್ಪದ ಹಾವಳಿ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ನಕಲಿ...

ನೈಜ ಮತದಾರರ ಹಕ್ಕುಗಳ ರಕ್ಷಿಸಲು ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ ಹಾಗೂ ನೈಜ ಮತದಾರರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಕಾಂಗ್ರೆಸ್...

ತೋರಣಕಾಡು ಗ್ರಾಮದಲ್ಲಿ 10 ಅಡಿ ಉದ್ದದ ಬೃಹತ್ ಹೆಬ್ಬಾವು

ಚಿಕ್ಕಮಗಳೂರು: ಸುಮಾರು ೧೦ ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಕಾಫಿ ತೋಟದಲ್ಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ...