Home namma chikmagalur chikamagalur ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ
chikamagalurHomeLatest Newsnamma chikmagalur

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

Share
Share

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು ಒಂದು ದಿನವೂ ನಡೆಯಲು ಸಾಧ್ಯವೇ ಇಲ್ಲ. ನೀವೇ ಈ ಸಮಾಜದ ನಿಜವಾದ ಶಕ್ತಿ. ಅಧಿಕಾರಿಗಳಿಗೆ ಹೆದರಿಕೊಂಡು ಕೂರಬೇಡಿ, ಧೈರ್ಯವಾಗಿ ನಿಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವುದನ್ನು ಕಲಿಯಿರಿ” ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಅವರು ಪೌರಕಾರ್ಮಿಕರಲ್ಲಿ ಆತ್ಮವಿಶ್ವಾಸ ತುಂಬಿದರು.

ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರ ಕುಂದುಕೊರತೆಗಳ ನೇರ ಸಂವಾದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿದರೆ ಕೆಲಸದಿಂದ ತೆಗೆಯುತ್ತಾರೆ, ಇಲ್ಲವೇ ಬೇರೆಡೆಗೆ ವರ್ಗಾವಣೆ ಮಾಡುತ್ತಾರೆ ಎಂಬ ಅನಗತ್ಯ ಭಯ ಪೌರಕಾರ್ಮಿಕರಲ್ಲಿ ಬೇಡ ಎಂದ ಅವರು, ಯಾರಾದರೂ ನಿಮಗೆ ಕಿರುಕುಳ ನೀಡಿದರೆ ಅಥವಾ ಬೆದರಿಕೆ ಹಾಕಿದರೆ ನೇರವಾಗಿ ನನಗೆ ಫೋನ್ ಮಾಡಿ ಅಥವಾ ನಮ್ಮ ಆಯೋಗದ ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ, ಅಂತಹ ಅಧಿಕಾರಿಗಳ ವಿರುದ್ಧ ನಾವೇ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಭರವಸೆ ನೀಡಿದರು.

ಪೌರಕಾರ್ಮಿಕರ ಸಮಸ್ಯೆಗಳ ಸಂಪೂರ್ಣ ವಿವರಗಳ ವರದಿಯನ್ನು ರಾಜ್ಯದ ಮುಖ್ಯಮಂತ್ರಿಗಳಾದ  ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದು ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಪೌರಕಾರ್ಮಿಕ ನಾಗರಾಜ್ ಮಾತನಾಡಿ, ಪೌರ ಕಾರ್ಮಿಕರಿಗಾಗಿ ನಿರ್ಮಿಸಲಾಗಿರುವ ಕ್ವಾರ್ಟರ್ಸ್‌ಗಳನ್ನು ವಿಳಂಬವಿಲ್ಲದೆ ತಕ್ಷಣವೇ ತಮಗೆ ಹಸ್ತಾಂತರಿಸಬೇಕು ಹಾಗೂ ಅಲ್ಲಿಗೆ ಸರಿಯಾದ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು. ಇದರೊಂದಿಗೆ ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬರಬೇಕಾದ ತಲಾ ರೂ. ೧.೫ ಲಕ್ಷ ಬಾಕಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಿಸಬೇಕು ಮತ್ತು ವರ್ಷಗಳಿಂದ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರನ್ನು ತಕ್ಷಣವೇ ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು.

ಪೌರಕಾರ್ಮಿಕರಿಗೆ ನೀಡಲಾಗುವ ಬೆಳಗಿನ ಉಪಾಹಾರದ  ಗುಣಮಟ್ಟವನ್ನು ಉತ್ತಮಪಡಿಸಬೇಕು ಮತ್ತು ನಿಯಮಿತವಾಗಿ ಕಡ್ಡಾಯ ಆರೋಗ್ಯ ತಪಾಸಣೆಯನ್ನು ಉಚಿತವಾಗಿ ನಡೆಸಬೇಕು ಎಂದು ಆಗ್ರಹಿಸಿದರು.
ಈ ಸಂವಾದ ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷ ಲಲಿತ ರವಿ ನಾಯಕ ಸೇರಿದಂತೆ ಚಿಕ್ಕಮಗಳೂರು ನಗರಸಭೆ, ಕಡೂರು, ಬೀರೂರು, ತರೀಕೆರೆ, ನರಸಿಂಹರಾಜಪುರ, ಕೊಪ್ಪ, ಶೃಂಗೇರಿ, ಮೂಡಿಗೆರೆ ಹಾಗೂ ಅಜ್ಜಂಪುರ ಸೇರಿದಂತೆ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು, ಸ್ವಚ್ಛತಾ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

If you sweep the garbage in the morning the country will not run. Be brave and demand your rights.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು...