Home Crime News ಅಕ್ರಮ ಗೋ ಸಾಗಾಟ : ಪೊಲೀಸರಿಗೆ ಹಿಡಿದು ಕೊಟ್ಟ ಹಿಂದು ಸಂಘಟನೆಗಳು
Crime News

ಅಕ್ರಮ ಗೋ ಸಾಗಾಟ : ಪೊಲೀಸರಿಗೆ ಹಿಡಿದು ಕೊಟ್ಟ ಹಿಂದು ಸಂಘಟನೆಗಳು

Share
Share

ಚಿಕ್ಕಮಗಳೂರು : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಹಿಂದು ಸಂಘಟನಾ ಕಾರ್ಯಕರ್ತರು ಹಾಗೂ ಸ್ಥಳೀಯರು ತಡೆದು ರಕ್ಷಿಸಿರುವ ಘಟನೆ ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್‌ ನಲ್ಲಿ ನಡೆದಿದೆ.

ಏಜೆಂಟ್ ಒಬ್ಬನ ಮೂಲಕ ಸಾಗರದ ಕಸಾಯಿಖಾನೆಗೆ ಗೋವುಗಳನ್ನು ಬೇಗಾರಿನ ಹರಾವರಿ ಎಂಬ ಗ್ರಾಮದಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಇದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಸ್ಥಳೀಯರು ತಡೆದು ಗೋವುಗಳನ್ನು ಪೊಲೀಸರಿಗೆ ಒಪ್ಪಿಸಿದ್ದರು. ಆರೋಪಿಗಳನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ವಾಹನವನ್ನು ಸೀಜ್ ಮಾಡಲಾಗಿದೆ ಹಾಗೂ ಗೋವುಗಳನ್ನು ಗೋಶಾಲೆಗೆ ಬಿಡಲಾಗಿದೆ.

ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಯಾವಾಗ ?
ಗೋ ಹತ್ಯಾ ನಿಷೇಧವಿದ್ದರೂ ಮಲೆನಾಡು ಭಾಗದಲ್ಲಿ ಮಾತ್ರ ಗೋಕಳ್ಳತನ ಮತ್ತು ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬಿದ್ದಿಲ್ಲ. ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಗೋಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಪೊಲೀಸರ ಕಣ್ಣು ತಪ್ಪಿಸಲು ಗೋಕಳ್ಳರು ನಾನಾ ತಂತ್ರ ಹೆಣೆಯುತ್ತಿದ್ದಾರೆ. ಆದರೆ, ಗ್ರಾಮಸ್ಥರು ಹಾಗೂ ಬಜರಂಗದಳ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಹಲವು ಗೋವುಗಳನ್ನ ರಕ್ಷಿಸಲಾಗುತ್ತಿದೆ. ಐಷಾರಾಮಿ ವಾಹನಗಳಲ್ಲಿ ಅತಿ ಹಿಂಸಾತ್ಮಕವಾಗಿ ತುಂಬಿ ಗೋವುಗಳನ್ನು ಸಾಗಿಸಲಾಗುತ್ತಿದೆ. ದಿನ ಬೆಳಗಾದರೆ ಗೋಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಅಕ್ರಮ ಗೋ ಸಾಗಾಟ ಮತ್ತು ಕಳ್ಳತನಕ್ಕೆ ತಾರ್ಕಿಕ ಅಂತ್ಯವನ್ನು ಪೊಲೀಸ್ ಇಲಾಖೆಯೇ ಒದಗಿಸಬೇಕಾಗಿದೆ.

“ಮಲೆನಾಡು ಭಾಗದಲ್ಲಿ ಅಕ್ರಮ ಗೋಸಾಗಾಟವನ್ನು ಹಿಂದೂ ಸಂಘಟನೆ ಹಾಗೂ ಸ್ಥಳೀಯರು ತಡೆದು ಪೊಲೀಸರಿಗೆ ಒಪ್ಪಿಸಿದ್ದರೂ ಕೂಡ ಆರೋಪಿಗಳ ಮೇಲೆ ಸಣ್ಣ ಸೆಕ್ಷನ್ ಗಳನ್ನು ಹಾಕುತ್ತಿರುವುದರಿಂದ ಕೆಲವೇ ಗಂಟೆಯಲ್ಲಿ ಜಾಮೀನು ಪಡೆದು ಬರುತ್ತಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸದಿರುವುದು ಸಹ ಅಕ್ರಮ ಗೋ ಸಾಗಾಟಕ್ಕೆ ಪ್ರೇರಣೆ ನೀಡಿದೆ. ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗೋಸಾಗಾಟದ ಕುರಿತು ತತ್‌ಕ್ಷಣ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳಲಿ. ಇಲ್ಲದಿದ್ದಲ್ಲಿ ಸಂಘಟನೆಯಿಂದ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ದಿವೀರ್ ಮಲ್ನಾಡ್ ಎಚ್ಚರಿಸಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿದೆ. ಚಿಕ್ಕಮಗಳೂರು ತಾಲೂಕಿನ ಬಸವರಹಳ್ಳಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಮನಕಲಕುವ ಘಟನೆ ನಡೆದಿದೆ. ಮೂಡಿಗೆರೆ ಕಡೆಗೆ ತೆರಳುತ್ತಿದ್ದ...

Related Articles

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ-ನಗದು ಕಳವು

ಕೊಪ್ಪ: ಮನೆ ಮಾಲೀಕರು ಇಲ್ಲದ ಸಮಯ ನೋಡಿ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ...

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...