Home namma chikmagalur chikamagalur ಅದ್ದೂರಿ ಮೆರವಣಿಗೆ ಮೂಲಕ ಹಿಂದೂ ಮಹಾಗಣಪತಿ ವಿಸರ್ಜನೆ
chikamagalurHomeLatest Newsnamma chikmagalur

ಅದ್ದೂರಿ ಮೆರವಣಿಗೆ ಮೂಲಕ ಹಿಂದೂ ಮಹಾಗಣಪತಿ ವಿಸರ್ಜನೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ಪ್ರಮುಖ ಗಣಪತಿಗಳಲ್ಲೊಂದಾದ ಚಿಕ್ಕಮಗಳೂರಿನ ಹಿಂದುಮಹಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಶನಿವಾರ ವಿಜೃಂಭಣೆಯಿAದ ನೆರವೇರಿತು. ಸೌಂಡ್ ಸಿಸ್ಟಂಗೆ ಹೆಜ್ಜೆ ಹಾಕಿದ ಭಕ್ತರು ವಿಘ್ನ ವಿನಾಶಕನ ಘೋಷಣೆ ಹಾಕುತ್ತಾ ಜೈಕಾರ ಕೂಗುತ್ತಾ ಮೆರವಣಿಗೆಗೆ ರಂಗು ತಂದಿದ್ದರು. ವಿಸರ್ಜನಾ ಪೂರ್ವ ಮೆರವಣಿಗೆ ಬಳಿಕ ರಾತ್ರಿ ೧೧ಗಂಟೆ ಸುಮಾರಿಗೆ ಕೋಟೆ ಕೆರೆಯಲ್ಲಿ ನಿರ್ಮಿಸಿರುವ ಕಲ್ಯಾಣಿಯಲ್ಲಿ ಗಣೇಶನನ್ನು ವಿಸರ್ಜನೆ ಮಾಡಲಾಯಿತು.

ಬಸವನಹಳ್ಳಿ ಮುಖ್ಯರಸ್ತೆಯ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿದ್ದ ಗಣಪತಿ ಮೂರ್ತಿಯನ್ನು ಮಧ್ಯಾಹ್ನ ಅಲಂಕೃತ ಪ್ರಭಾವಳಿಯಲ್ಲಿ ಕೂರಿಸಿ ಮಂಗಳವಾದ್ಯಗಳೊAದಿಗೆ ಮೆರವಣಿಗೆ ಆರಂಭಿಸಲಾಯಿತು. ಕೀಲುಕುದುರೆ, ನಾಸಿಕ್ ಡೋಲ್, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಸೌಂಡ್ ಸಿಸ್ಟಂಗಳೊAದಿಗೆ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಾವಿರಾರು ಸಂಖ್ಯೆಯ ಯುವಕ, ಯುವತಿಯರು ಕೇಸರಿ ಧ್ವಜಗಳನ್ನು ಬೀಸುತ್ತಾ, ತಲೆಗೆ ರುಮಾಲು ಧರಿಸಿಕೊಂಡು ಉತ್ಸಾಹದಿಂದ ಗಣನಾಯಕನಿಗೆ ಬೀಳ್ಕೊಟ್ಟರು.

ಜಗಮಗಿಸುವ ಬೆಳಕಿನ ನಡುವೆ ಸೌಂಡ್ ಸಿಸ್ಟಂ ಸದ್ದಿಗೆ ಒಂದೇ ಸಮನೆ ಸಾವಿರು ಜನರು ಹೆಜ್ಜೆ ಹಾಕಿ ಒಗ್ಗಟ್ಟು ಪ್ರದರ್ಶಿಸಿದರು. ದಾರಿ ಮಧ್ಯೆ ಅಲ್ಲಲ್ಲಿ ಪಟಾಕಿಗಳನ್ನು ಸಿಡಿಸಿ ಮೆವಣಿಗೆಗೆ ಸಾಂಪ್ರದಾಯಿಕ ಮೆರಗು ನೀಡಲಾಯಿತು. ಗಣಪತಿ ಸಮಿತಿ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಹಲವು ಮಂದಿ ಸಾರ್ವಜನಿಕರು ಸಾಂಪ್ರದಾಯಿಕ ದಿರಿಸು ಧರಿಸಿ ಭಾಗವಹಿಸುವ ಮೂಲಕ ಭಕ್ತಿ ಭಾವ ಮೂಡಿಸಿದರು.

ಗಣನಾಯಕನ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಆಲ್ಲಿನ ನಿವಾಸಿಗಳು ಗಣಪನಿಗೆ ಹಣ್ಣು, ಕಾಯಿ ಪೂಜೆ ಮಾಡಿಸಿದರು. ಇನ್ನೂ ಕೆಲವರು ಈಡುಗಾಯಿ ಒಡೆದು ಭಕ್ತಿ ಸಮರ್ಪಿಸಿದರು. ಮಲ್ಲಂದೂರು ರಸ್ತೆ, ವಿಜಯಪುರ ಮುಖ್ಯ ರಸ್ತೆ, ಒಕ್ಕಲಿಗರ ಕಲ್ಯಾಣ ಮಂಟಪ ರಸ್ತೆ, ಆರ್.ಜಿ.ರಸ್ತೆ, ಬಸವನಹಳ್ಳಿ ಶಾಲೆ ರಸ್ತೆ ಮೂಲಕ ಹನುಮಂತಪ್ಪ ವೃತ್ತಕ್ಕೆ ಆಗಮಿಸಿದ ಮೆರವಣಿಗೆ ಎಂಜಿ ರಸ್ತೆಯಲ್ಲಿ ಸಾಗಿ ಕೋಟೆ ಕೆರೆ ತಲುಪಿತು. ಹಿಂದೂ ಸಭಾ ಗಣಪತಿ ಸಮಿತಿ ಮುಖಂಡರಾದ ಆಟೋ ಶಿವಣ್ಣ, ಸಂತೋಷ್ ಕೋಟ್ಯಾನ್, ಸುಮಂತ್, ಪ್ರದೀಪ್ ಸೇರಿದಂತೆ ಸಮಿತಿಯ ಎಲ್ಲ ಸದಸ್ಯರು ಹಾಗೂ ಇತರೆ ಪ್ರಮುಖರು ಮೆರವಣಿಗೆಯ ಉಸ್ತುವಾರಿ ನೋಡಿಕೊಂಡರು.

ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಪಟಾಕಿ ಸಿಡಿಸಿ ಸಂತಸ ಪಟ್ಟರು. ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಅಲ್ಲಿನ ನಿವಾಸಿಗಳು ಗಣಪತಿಗೆ ಪೂಜೆ ಸಲ್ಲಿಸಿದ್ದು ಮಾತ್ರವಲ್ಲದೆ ಪಟಾಕಿ ಸಿಡಿಸುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು. ಇನ್ನು ಮೆರವಣಿಗೆ ಹನುಮಂತಪ್ಪ ವೃತ್ತಕ್ಕೆ ಬರುತ್ತಿದ್ದಂತೆ ಭಕ್ತರ ಉತ್ಸಾಹ ಇಮ್ಮಡಿಗೊಂಡಿತ್ತು. ಇಲ್ಲಿಯೂ ಭಕ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪಟಾಕಿಗಳು ಆಕಾಶದಲ್ಲಿ ಚಿತ್ತಾರ ಮೂಡಿಸಿ ನೆರೆದಿದ್ದ ಜನರ ಹರ್ಷೋದ್ಘಾರಕ್ಕೆ ಕಾರಣವಾದವು. ಇನ್ನು ಗಣೇಶೋತ್ಸವ ಮೆರವಣಿಗೆ ಹಿನ್ನೆಲೆಯಲ್ಲಿ ಇಡೀ ನಗರವೇ ಕೇಸರಿಮಯವಾಗಿತ್ತು.

ಹಿAದು ಮಹಾಗಣಪತಿ ಮೆರವಣಿಗೆ ನಡೆಯುವ ಮಾರ್ಗದಲ್ಲಿ ಜಿಲ್ಲಾಡಳಿತ ವಾಹನ ಸಂಚಾರ ನಿರ್ಬಂಧಿಸಿತ್ತು. ಬೆಳಗ್ಗಿನಿಂದಲೇ ಎಂಜಿ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ನಿಲುಗಡೆ ನಿರ್ಬಂಧಿಸಲಾಗಿತ್ತು. ಈ ರಸ್ತೆಯಲ್ಲಿ ಜನ ವಾಹನ ನಿಲುಗಡೆ ಮಾಡಿದರೆ ಮೆರವಣಿಗೆ ಆಗಮಿಸುವ ಸಂದರ್ಭದಲ್ಲಿ ವಾಹನಗಳನ್ನು ತೆರವುಗೊಳಿಸಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿತ್ತು.
ಜೊತೆಗೆ ಎಂಜಿ ರಸ್ತೆಗೆ ಸಂಪರ್ಕ ಕಲ್ಪಿಸುವ ಹನುಮಂತಪ್ಪ ವೃತ್ತ, ಆಜಾದ್ ಪಾರ್ಕ್ ವತ್ತದ ಬಳಿ ರಸ್ತೆಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿತ್ತು. ಇದಲ್ಲದೆ ಎಂಜಿ ರಸ್ತೆಯ ಪ್ಯಾರಲಲ್ ರಸ್ತೆಗೂ ಬ್ಯಾರಿಕೇಡ್ ಅಳವಡಿಕೆ ಮಾಡಿ ಎಂಜಿ ರಸ್ತೆಗೆ ಯಾವ ವಾಹನಗಳೂ ಆಗಮಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು.

ಹಿAದು ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಬೆಳಗ್ಗಿನಿಂದಲೇ ಅಧಿಕಾರಿಗಳು ನಗರಾದ್ಯಂತ ಗಸ್ತು ಆರಂಭಿಸಿದ್ದರು. ಅಲ್ಲದೆ ನಗರದ ಸೂಕ್ಷö್ಮ ಪ್ರದೇಶಗಳಲ್ಲಿ ಬ್ಯಾರಿಕೇಡ್ ಅಳವಡಿಸುವುದರ ಜೊತೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ಇನ್ನು ಗಣಪತಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿತ್ತು. ಮೆರವಣಿಯಲ್ಲೂ ಮಫ್ತಿಯಲ್ಲಿದ್ದ ಪೊಲೀಸರು ಜನ ಒಂದೆಡೆ ನಿಲ್ಲದಂತೆ ನೋಡಿಕೊಳ್ಳುತ್ತಿದ್ದರು.

Immersion of Hindu Maha Ganapathi via a grand procession.

Share

Leave a comment

Leave a Reply

Your email address will not be published. Required fields are marked *

Don't Miss

ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಗ

ತರೀಕೆರೆ: ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ....

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ ಗಣಾಚಾರಿ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 33ಕ್ಕೂ...

Related Articles

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ...

ಆಕ್ಸಿಸ್ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹2.79 ಲಕ್ಷ ವಂಚನೆ

ಚಿಕ್ಕಮಗಳೂರು: ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರಿಂದ ಕ್ರೆಡಿಟ್ ಕಾರ್ಡ್ ವಿವರ...

ಬಾಳೆಹೊನ್ನೂರಿನಲ್ಲಿ ಮನೆಗೆ ನುಗ್ಗಿ ಚಿನ್ನ-ನಗದು ಕಳವು

ಬಾಳೆಹೊನ್ನೂರು: ಮನೆಯ ಬೀಗ ಮೀಟಿ ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಸುಮಾರು ₹4.90 ಲಕ್ಷ ಮೌಲ್ಯದ ಚಿನ್ನಾಭರಣ...