Home namma chikmagalur chikamagalur ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ
chikamagalurHomeLatest Newsnamma chikmagalur

ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ

Share
Share

ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ ಶುಕ್ರವಾರ ಲೋಕಾರ್ಪಣೆಗೊಂಡಿತು.

ಬ್ರಿಗೇಡ್‌ ಫೌಂಡೇಷನ್ ವತಿಯಿಂದ ಈ ಶಾಲೆಯನ್ನು ಸಂಪೂರ್ಣವಾಗಿ ಮರು ನಿರ್ಮಾಣ ಮಾಡಿದ್ದು, ಸೊಗಸಾದ ಹಾಗೂ ಸುಸಜ್ಜಿತ ಆವರಣವನ್ನಾಗಿ ಬದಲಾಯಿಸಲಾಗಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಸಿ.ಟಿ. ರವಿ ಶಾಲೆ ಉದ್ಘಾಟಿಸಿದರು.

ಬ್ರಿಗೇಡ್ ಗ್ರೂಪ್ ಕಾರ್ಯನಿರ್ವಾಹಕ ಅಧ್ಯಕ್ಷ ಎಂ.ಆರ್. ಜೈಶಂಕರ್ ಮಾತನಾಡಿ, ‘ಈ ಕೆಲಸವನ್ನು ಕಟ್ಟಡದ ನವೀಕರಣ ಎಂದಷ್ಟೇ ಭಾವಿಸಿಲ್ಲ. ವಿದ್ಯಾರ್ಥಿಗಳನ್ನು ಪ್ರತಿದಿನ ಶಾಲೆಗೆ ಬರುವಂತೆ ಪ್ರೇರೇಪಿಸುವ ಕೆಲಸ ಇದಾಗಿದೆ. ತಮ್ಮ ಶಾಲೆ ಬಗ್ಗೆ ಮಕ್ಕಳು ಹೆಮ್ಮೆಪಡಬೇಕು. ಅದಕ್ಕೆ ಬೇಕಿರುವ ಸುಂದರ ವಾತಾವರಣ ನಿರ್ಮಿಸುವುದು ನಮ್ಮ ಉದ್ದೇಶ’ ಎಂದರು.

‘ಈ ಶಾಲೆಯ ಹಳೆಯ ವಿದ್ಯಾರ್ಥಿಯಾಗಿ ಬಾಲ್ಯದ ದಿನಗಳನ್ನು ಇಲ್ಲಿ ಕಳೆದಿದ್ದೇನೆ. ಬದುಕು ಮತ್ತು ಮೌಲ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಲೆಗೆ ಈ ರೀತಿಯ ಕೊಡುಗೆ ನೀಡುವುದು ನನಗೆ ಸಿಕ್ಕ ಸೌಭಾಗ್ಯ ಮತ್ತು ಗೌರವ’ ಎಂದು ಹೇಳಿದರು.

ವಿಧಾನ ಪರಿಷತ್‌ನ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ‘ಶೈಕ್ಷಣಿಕ ಮೂಲಸೌಕರ್ಯಗಳನ್ನು ಹೇಗೆ ಮರು ರೂಪಿಸಬಹುದು ಎಂಬುದಕ್ಕೆ ಇದು ಉತ್ತಮ ಉದಾಹರಣೆ. ಬ್ರಿಗೇಡ್ ಫೌಂಡೇಷನ್‌ ರೀತಿಯ ಸಂಸ್ಥೆಗಳು ಇಂತಹ ಶಾಲೆಗಳನ್ನು ಸುಧಾರಿಸಲು ಮುಂದೆ ಬಂದಿರುವುದು ಹೆಮ್ಮೆಯ ವಿಷಯ’ ಎಂದರು.

ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ, ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಸದಸ್ಯೆ ಸುಜಾತಾ ಶಿವ ಕುಮಾರ, ಬ್ರಿಗೇಡ್ ಫೌಂಡೇಶನ್ ಸಿಇಒ ಶಿವಯೋಗಿ ಕಳಸದ, ದಾನಿ ಕುಟುಂಬದ ಪ್ರತಿನಿಧಿ ಎಂ.ಆರ್. ಗುರುಮೂರ್ತಿ ಮತ್ತು ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ಅಧ್ಯಕ್ಷ ಪ್ರೇಮ್‌ಕುಮಾ‌ರ್ ಇದ್ದರು.

Inauguration of the renovated building of the University Education School

Share

Leave a comment

Leave a Reply

Your email address will not be published. Required fields are marked *

Don't Miss

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು ಘಟಕದಿಂದ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತ ದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ ಮಳೆಯಾಗಿ ಕೆರೆಗಳು ತುಂಬಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಸುಮಾರು 1,300 ಹೆಕ್ಟೇರ್...

Related Articles

ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ

ಚಿಕ್ಕಮಗಳೂರು: ಸಮಾನತೆಯ ಆಶಯ ದೊಂದಿಗೆ ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ...

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಶೃಂಗೇರಿ : ತಾಲೂಕಿನ ನೆಮ್ಮಾರ್ ಸರ್ಕಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ...

ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದ ನೂತನ ಗೋಶೆಡ್ ನಿರ್ಮಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್...

ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ...