Home namma chikmagalur chikamagalur ಇಂದು ನವೀಕರಣಗೊಂಡ ರೈಲು ನಿಲ್ದಾಣದ ಲೋಕಾರ್ಪಣೆ
chikamagalurHomeLatest Newsnamma chikmagalur

ಇಂದು ನವೀಕರಣಗೊಂಡ ರೈಲು ನಿಲ್ದಾಣದ ಲೋಕಾರ್ಪಣೆ

Share
Share

ಚಿಕ್ಕಮಗಳೂರು: ರೈಲು ನಿಲ್ದಾಣದ ನವೀಕರಣ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಸರೆನ್ಸ್ ಮೂಲಕ ಈ ಯೋಜನೆಯನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ.

ಕೇಂದ್ರ ಸರ್ಕಾರದ ‘ಅಮೃತ್ ಭಾರತ್ ನಿಲ್ದಾಣ ಯೋಜನೆ’ಯಡಿ ಸುಮಾರು 22 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಚಿಕ್ಕಮಗಳೂರು ರೈಲು ನಿಲ್ದಾಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರಿನಿಂದ ಪ್ರಧಾನಿಯವರು ಚಾಲನೆ ನೀಡಲಿರುವ ಈ ಯೋಜನೆಯು ರೈಲ್ವೆ ಮೂಲಸೌಕರ್ಯ ಸುಧಾರಣೆ, ಪ್ರಯಾಣಿಕರ ಸೌಲಭ್ಯಗಳ ಉನ್ನತೀಕರಣ ಹಾಗೂ ಪ್ರಾದೇಶಿಕ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ತಿಳಿಸಿದ್ದಾರೆ.

ನಗರದ ರೈಲ್ವೆ ನಿಲ್ದಾಣವು ಇದೀಗ ನೂತನ ಕಳೆಯೊಂದಿಗೆ ಕಂಗೊಳಿಸುತ್ತಿದೆ. 22 ಕೋಟಿ ರೂಪಾಯಿಗಳ ಬೃಹತ್ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಿದ್ದು, ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಗಣ್ಯರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.

ಬಳಿಕ ಮಾತನಾಡಿದ ಸಂಸದರು, ನಿಲ್ದಾಣದ ಅಭಿವೃದ್ಧಿ ಕಾರ್ಯಗಳು ಅತ್ಯಂತ ತೃಪ್ತಿದಾಯಕವಾಗಿ ಮೂಡಿಬಂದಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಶುಕ್ರವಾರ ಪ್ರಧಾನಮಂತ್ರಿಗಳು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರುವ ಐತಿಹಾಸಿಕ ಸಂದರ್ಭದಲ್ಲೇ, ಈ ನೂತನ ಕಾಮಗಾರಿಗಳನ್ನೂ ಉದ್ಘಾಟಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಇದರ ಜೊತೆಗೆ, ಜಿಲ್ಲೆಗೆ ಇಂಟರ್‌ಸಿಟಿ ರೈಲು ಸೌಲಭ್ಯವನ್ನು ಒದಗಿಸುವ ಭರವಸೆಯೂ ವ್ಯಕ್ತವಾಗಿರುವುದು ಜನತೆಗೆ ಮತ್ತಷ್ಟು ಸಂತಸದ ವಿಚಾರವಾಗಿದೆ ಎಂದು ಅವರು ತಿಳಿಸಿದರು.

Inauguration of the renovated railway station today

 

Share

Leave a comment

Leave a Reply

Your email address will not be published. Required fields are marked *

Don't Miss

ಬೈಕ್‌ನಿಂದ ಬಿದ್ದು ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಚಿಕ್ಕಮಗಳೂರು: ರಸ್ತೆಗೆ ಏಕಾಏಕಿ ಹಸು ಅಡ್ಡ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಸೋಮಪ್ಪ (೫೮) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತರೀಕೆರೆ ತಾಲ್ಲೂಕಿನ ಕುಂಟಿನಮಡು ಗ್ರಾಮದ ಬಳಿ...

ಕಂಪೌಂಡ್ ಸ್ಲ್ಯಾಬ್‌ಗಳ ವಾಹನ ಪಲ್ಟಿ: ಕಾರ್ಮಿಕ ಸಾವು

ಚಿಕ್ಕಮಗಳೂರು: ಸಿಮೆಂಟ್ ಬೆಂಚ್ ಹಾಗೂ ಕಂಪೌಂಡ್ ಸ್ಲ್ಯಾಬ್‌ಗಳನ್ನು ಸಾಗಿಸುತ್ತಿದ್ದ ಮಹೇಂದ್ರ ಜಿತೋ ವಾಹನದ ಹಿಂಬದಿಯ ಟೈರ್ ಸ್ಫೋಟಗೊಂಡು ಸಂಭವಿಸಿದ ಅಪಘಾತದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಬೀರೂರು ಸಮೀಪದ ಚಟ್ನಹಳ್ಳಿ...

Related Articles

ಕೊಪ್ಪ ತಾಲ್ಲೂಕಿನಲ್ಲಿ ಕಾಡುಕೋಣಗಳ ಉಪಟಳ

ಕೊಪ್ಪ: ಕಾಡುಕೋಣಗಳ ಉಪಟಳ ದಿನೇ ದಿನೇ ಮಿತಿ ಮೀರುತ್ತಿದ್ದು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಲಸೆ ಕಾರ್ಮಿಕರ...

ಕೆಂಪುಬಸ್ ಬಲೂ ಗ್ಯಾರಂಟಿ ಡೇಂಜರ್ ? ಡೇಂಜರ್ ? ಕೆಟ್ಟು ನಿಲ್ಲುವ ಬಸ್ಸುಗಳು

ಚಿಕ್ಕಮಗಳೂರು:  ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಲೂ ಡೇಂಜರ್ ಯಾವಾಗ ಎಲ್ಲಿ ಕೆಟ್ಟು ನಿಲ್ಲುತ್ತವೆ ಎಂದು ಪ್ರಯಾಣಿಕರು...

ದೀಪಾವಳಿಗೆ ಕಾಡುಪ್ರಾಣಿಗಳ ಬೇಟೆ: ಓರ್ವನ ಬಂಧನ; ಮೂವರು ಪರಾರಿ

ಮೂಡಿಗೆರೆ: ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಅಕ್ರಮವಾಗಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಹಂಚಿಕೆ ಮಾಡುತ್ತಿದ್ದ ತಂಡವೊಂದರ ವಿರುದ್ಧ...

ಕಾವಲುಗಾರ ಕೊಲೆ ಮಾಡಿದ್ದ ಆರೋಪಿ ಬಂಧನ

ಕಡೂರು: ತೋಟದ ಮನೆಯೊಂದರಲ್ಲಿ ಕಾವಲುಗಾರನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಯನ್ನು ಕಡೂರು ಠಾಣೆ ಪೊಲೀಸರು...