Home ಜಿಲ್ಲೆಯಲ್ಲಿ ಇಂದಿನಿಂದ ಪೌರನೌಕರರ ಅನಿರ್ದಿಷ್ಟಕಾಲ ಮುಷ್ಕರ
Home

ಜಿಲ್ಲೆಯಲ್ಲಿ ಇಂದಿನಿಂದ ಪೌರನೌಕರರ ಅನಿರ್ದಿಷ್ಟಕಾಲ ಮುಷ್ಕರ

Share
Share

ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿರುವುದರಿಂದ ಮೇ.೨೭ ರಂದು ಅನಿರ್ದಿಷ್ಟಕಾಲ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪೌರನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ಅಣ್ಣಯ್ಯ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸೋಮವಾರ ಮಾತನಾಡಿ, ಬೇಡಿಕೆ ಈಡೇರುವ ತನಕ ಹಂತಹಂತವಾಗಿ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದ ಅವರು, ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು. ಇದುವರೆಗೂ ರಾಜ್ಯಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಲು ಸಭೆಯನ್ನು ಕರೆದಿಲ್ಲವೆಂದು ಹೇಳಿದರು.

ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ಒತ್ತಾಯಿಸಿ ೪೫ ದಿನಗಳ ಅನಿರ್ದಿಷ್ಟಕಾಲ ಮುಷ್ಕರ ನಡೆಸುವ ಬಗ್ಗೆ ನೋಟಿಸ್ ನೀಡಿದ್ದು, ರಾಮನಗರದಲ್ಲಿ ರಾಜ್ಯ ಪರಿಷತ್ತಿನ ಸರ್ವಸದಸ್ಯರ ಸಭೆ ನಡೆಸಿದ್ದು, ಮೇ.೨೭ರಿಂದ ಮುಷ್ಕರ ನಡೆಸಲಾಗುತ್ತಿದೆ. ಇಂದು ಸಾಂಕೇತಿಕವಾಗಿ ರಾಜ್ಯಾದ್ಯಂತ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಖನಿ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದರು.

ಕರ್ನಾಟಕ ನಾಗರಿಕ ನಿಯಮ ಅಧಿನಿಯಮ ೧೯೭೮ರನ್ನು ಕರ್ನಾಟಕ ಪೌರಸೇವಾ ನೌಕರರಿಗೆ ಅನ್ವಯಿಸುವುದು ಹಾಗೂ ಪಂಚಾಯತ್ ರಾಜ್ ಇಲಾಖೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿರುವ ಮಾದರಿಯಲ್ಲಿಯೇ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ನೌಕರರನ್ನು ಸರ್ಕಾರಿ ನೌಕರೆಂದು ಪರಿಗಣಿಸಬೇಕು. ಸರ್ಕಾರಿ ನೌಕರರು ಪಡೆಯುವ ಸೌಲಭ್ಯಗಳನ್ನು ನಮಗೂ ವಿಸ್ತರಿಸಲು ಶಾಸನ ಸಭೆಯಲ್ಲಿ ಕಾಯ್ದೆರೂಪಿಸಬೇಕೆಂದು ಒತ್ತಾಯಿಸಿದರು.

ಹೊರಗುತ್ತಿಗೆ ಆಧಾರದ ಮೇಲೆ ನೀರುಸರಬರಾಜು ಸಹಾಯಕರು, ವಾಹನ ಚಾಲಕರು, ಬೀದಿದೀನ ಸಹಾಯಕರು ಲೋಡರ್ಸ್, ಪಾರ್ಕ್, ಗಾರ್ಡನರ್‌ಕಾವಲುಗಾರ, ಸ್ಯಾನಿಟರಿ ಸೂಪರ್‌ವೈಸರ್ ಸೇರಿದಂತೆ ವಿವಿಧ ವೃಂದಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರನ್ನು ನೌಕರರನ್ನು ನೇರಪಾವತಿಗೆ ಒಳಪಡಿಸಬೇಕೆಂದು ತಿಳಿಸಿದರು.

ಘನತ್ಯಾಜ್ಯ ವಸ್ತು ನಿರ್ವಹಣೆಗೆ ಮತ್ತು ಮಾಲಿನ್ಯ ನೀರು ನಿರ್ವಹಣೆಗೆ ಅಗತ್ಯವಾದ ವಾಹನಗಳನ್ನು ಖರೀದಿಸುತ್ತಿದ್ದು, ಈ ವಾಹನಗಳಿಗೆ ಪೂರಕವಾಗಿ ವೃಂದ ಮತ್ತು ನೇಮಕಾತಿಯಲ್ಲಿ ವಾಹನ ಚಾಲಕ ಹುದ್ದಗಳನ್ನು ಮಂಜೂರು ಮಾಡದೆ ಇರುವುದರಿಂದ ಶಾಶ್ವತ ವಾಹನ ಚಾಲಕರನ್ನು ನೇಮಕಮಾಡಿಕೊಳ್ಳಲು ತೊಡಕಾಗಿದ್ದು, ಈ ಅಂಶವನ್ನು ಸಮಗ್ರವಾಗಿ ಪರಿಶೀಲಿಸಿ ಮಂಜೂರಾತಿ ಹುದ್ದೆಗಳನ್ನು ಸಕ್ರಮಗೊಳಿಸಬೇಕೆಂದು ಆಗ್ರಹಿಸಿದರು.

ನಗರ ಸ್ಥಳೀಯ ಸಂಸ್ಥೆಗಳಿಗೆ ಮುಖ್ಯವಾಗಿ ನಗರಸಭೆ ಮತ್ತು ಪುರಸಭೆಗಳಲ್ಲಿ ಒಳಚರಂಡಿ ವ್ಯವಸ್ಥೆಯನ್ನುಅನುಷ್ಟಾನಗೊಳಿಸಿ ನಗರಸ್ಥಳೀಯ ಸಂಸ್ಥೆಗಳಲ್ಲಿ ನಿರ್ವಹಣೆಗೆ ಹಸ್ತಾಂತರಿಸುತ್ತಿದ್ದು, ಇವುಗಳ ನಿರ್ವಹಣೆಗೆ ಅಗತ್ಯವಾದ ತಜ್ಞ ಸಿಬ್ಬಂದಿಗಳನ್ನು ಮಹಾನಗರಪಾಲಿಕೆ ವೃಂದ ಮತ್ತು ನೇಮಕಾತಿಯಲ್ಲಿ ಅವಕಾಶ ಕಲ್ಪಿಸಿರುವಂತೆ ನಗರಸ್ಥಳೀಯ ಸಂಸ್ಥೆಗಳ ವೃಂದ ಮತ್ತು ನೇಮಕಾತಿಯಲ್ಲಿ ಅವಕಾಶ ಕಲ್ಪಿಸಬೇಕೆಂದು ಸರ್ಕಾರವನ್ನು ಕೋರಿದರು.

ನೇರ ಪಾವತಿಯಲ್ಲಿರುವ ಪೌರಕಾರ್ಮಿಕರು,ಲೋಡರ್ಸ್, ಕ್ಲೀನರ್ಸ್ ಮರಣಹೊಂದಿದಲ್ಲಿ ೧೦ ಲಕ್ಷ ರೂ.ಗಳನ್ನು ಅವಲಂಬಿತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು. ಮಾನವೀಯ ದೃಷ್ಟಿಯಿಂದ ಅನುಕಂಪ ಆಧಾರದ ಮೇಲೆ ಕುಟುಂಬದವರಿಗೆ ಹುದ್ದೆ ನೀಡುವುದು ಸೇರಿದಂತೆ ಒಟ್ಟು ೧೯ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ಹಮ್ಮಿಕೊಂಡಿರುವುದಾಗಿ ಹೇಳಿದರು.

ಪೌರನೌಕರ ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸ, ಪದಾಧಿಕಾರಿಗಳಾದ ಸುನೀಲ್‌ಕುಮಾರ್, ಪಾಪಣ್ಣ, ರಮೇಶ್ ಇದ್ದರು.

Indefinite strike by civic employees in the district from today

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...