Home Latest News ಜೂ.25 ರಿಂದ ದೇವನಹಳ್ಳಿ ತಾಲೂಕು ಕಚೇರಿ ಮುಂದೆ ಅನಿರ್ದಿಷ್ಠಾವಧಿ ಮುಷ್ಕರ
Latest NewschikamagalurHomenamma chikmagalur

ಜೂ.25 ರಿಂದ ದೇವನಹಳ್ಳಿ ತಾಲೂಕು ಕಚೇರಿ ಮುಂದೆ ಅನಿರ್ದಿಷ್ಠಾವಧಿ ಮುಷ್ಕರ

Share
Share

ಚಿಕ್ಕಮಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ರೈತರ ಜಮೀನನ್ನು ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿರುವ ಸರಕಾರದ ಕ್ರಮ ಖಂಡಿಸಿ ಜೂ.೨೫ ರಿಂದ ದೇವನಹಳ್ಳಿ ತಾಲೂಕು ಕಚೇರಿ ಮುಂದೆ ಅನಿರ್ದಿಷ್ಠಾವಧಿ ಮುಷ್ಕರ ಹೂಡಲು ನಿರ್ಧರಿಸಲಾಗಿದೆ ಎಂದು ಸಂಯುಕ್ತ ಹೋರಾಟ ಸಮಿತಿ ರಾಜ್ಯ ಸಂಚಾಲಕ ಗೌಸ್ ಮೊಹಿದ್ದೀನ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ರೈತರ ಭೂಮಿಯನ್ನು ಬಲವಂತವಾಗಿ ಭೂಸ್ವಾಧೀನಕ್ಕೆ ಪಡೆಯುವುದಿಲ್ಲ ಎಂದು ಧರಣಿ ನಿರತರಿಗೆ ಭರವಸೆ ನೀಡಿದ್ದರು. ಈಗ ಅವರೇ ಆಡಳಿತದಲ್ಲಿದ್ದು ಇಂದು ಸದ್ದಿಲ್ಲದೆ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ನೊಟೀಸನ್ನು ರೈತರಿಗೆ ನೀಡಿದ್ದಾರೆ. ನೊಟೀಸ್ ಹಿಂಪಡೆಯದಿದ್ದರೆ ಇಡೀ ರಾಜ್ಯಾದ್ಯಂತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದರು.

ಚನ್ನರಾಯಪಟ್ಟಣ ಹೋಬಳಿಯ ೧೩ ಹಳ್ಳಿಯ ರೈತರ ಭೂಮಿಯನ್ನು ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ನೀಡಲು ಸರಕಾರ ಮುಂದಾಗಿದೆ. ಪ್ರಪಂಚಕ್ಕೆ ಅನ್ನ ನೀಡುವ ರೈತರ ಭೂಮಿಯನ್ನು ಕಿತ್ತು ಬಹುರಾಷ್ಟ್ರೀಯ ಕಂಪನಿಗಳು, ರಿಯಲ್ ಎಸ್ಟೇಟ್ ಮಾಫಿಯಾಗಳಿಗೆ ನೀಡಲು ಮುದಾಗಿರುವ ಸರಕಾರದ ಕ್ರಮ ರೈತ ವಿರೋಧಿಯಾಗಿದೆ. ಈ ಬಲವಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ರದ್ದುಪಡಿಸಬೇಕು ಎಂದು ಜೂ.೨೫ ರಂದು ರೈತರು, ರೈತ ಕಾರ್ಮಿಕರು, ದಲಿತ, ಮಹಿಳಾ, ಬುದ್ದಿಜೀವಿಗಳು, ಸಾಹಿತಿಗಳು, ವಿದ್ಯಾರ್ಥಿ ಯುವಜನರು ದೇವನಹಳ್ಳಿ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಕಳೆದ ಮೂರುವರೆ ವರ್ಷದಿಂದ ಅಲ್ಲಿನ ೧೩ ಹಳ್ಳಿಯ ರೈತರು ನಾಡಕಚೇರಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡುತ್ತಿದ್ದಾರೆ. ಶೇ.೮೦ ರಷ್ಟು ರೈತರು ಭೂಸ್ವಾಧೀನಕ್ಕೆ ನಮ್ಮ ಸಮ್ಮತಿ ಇಲ್ಲ ಎಂದು ಲಿಖಿತವಾಗಿ ಬರೆದುಕೊಟ್ಟಿದ್ದಾರೆ. ಇಷ್ಟಾಗಿಯೂ ಬಲವಂತದ ಭೂಸ್ವಾಧೀನಕ್ಕೆ ಸರಕಾರ ಮುಂದಾಗಿರುವುದು ಭೂಸ್ವಾಧೀನ ಕಾಯಿದೆ ೨೦೧೩ ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿವರಿಸಿದರು.

ದೇವನಹಳ್ಳಿ ವ್ಯಾಪ್ತಿಯಲ್ಲಿ ಅಲ್ಲಿನ ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿದ್ದು, ಪೊಲೀಸರ ಕೇಸಿಗೆ, ಜೈಲು, ಲಾಠಿ, ಗುಂಡಿಗೆ ಬಗ್ಗುವವರಲ್ಲ. ಹೋರಾಟದಿಂದ ಹಿಂದೆ ಸರಿಯುವವರಲ್ಲ. ಹೀಗಾಗಿ ಕೂಡಲೇ ಸರಕಾರ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಸುನಿಲ್‌ಕುಮಾರ್, ಮುಖಂಡ ಸಿ.ಟಿ. ತುಳಸೇಗೌಡ, ಡಿಎಸ್‌ಎಸ್‌ನ ಆಶಾ ಸಂತೋಷ್, ಪುಟ್ಟಸ್ವಾಮಿ, ಮಲ್ಲುಂಡಪ್ಪ, ನಜ್ಮಾಅಲಿ, ಟಿ.ಎಲ್. ಗಣೇಶ್ ದುರ್ಗೇಶ್, ಲೋಕೇಶ್, ವೆಂಕಟೇಶ್, ಸುರೇಶ್ ಮತ್ತಿತರರಿದ್ದರು.

Indefinite strike in front of Devanahalli Taluk Office on June 25th

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

Related Articles

ಏಷ್ಯನ್ ಗೇಮ್ಸ್‌ನಲ್ಲಿಶಾನುವಳ್ಳಿಯ ಎಸ್.ಎಸ್. ಸ್ನೇಹಾಗೆ ಕಂಚು

ಚಿಕ್ಕಮಗಳೂರು: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4×100 ಮೀಟರ್ ರಿಲೇ...

ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಅತಿರೇಕದ...

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು...

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ...