Home namma chikmagalur chikamagalur ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನ ರಕ್ಷಣೆ ಮಾಡಬೇಕು
chikamagalurHomeLatest Newsnamma chikmagalur

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನ ರಕ್ಷಣೆ ಮಾಡಬೇಕು

Share
Share

ಬಾಳೆಹೊನ್ನೂರು : “ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ. ವೈಮಾನಿಕ ದಾಳಿಯಲ್ಲಿ ಮಕ್ಕಳು ಸತ್ತಿದ್ದಾರೆ. ಏನೂ ಮಾಡದ ಮಕ್ಕಳ ಶಾಲೆ ಮೇಲೆ ಏಕೆ ದಾಳಿ ಮಾಡಬೇಕು. ಇದು ಖಂಡನೀಯ. ದುಬೈ ಸೇರಿದಂತೆ ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನ ರಕ್ಷಣೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದರು.

ಬಾಳೆಹೊನ್ನರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿ ಸೌದಿ, ದುಬೈ ಸೇರಿದಂತೆ ಇತರೆಡೆ ಇರುವ ಕನ್ನಡಿಗರ ರಕ್ಷಣೆ ಬಗ್ಗೆ ಕೇಳಿದಾಗ, “ಕರ್ನಾಟಕ, ಕೇರಳ ಸೇರಿದಂತೆ ಭಾರತೀಯ ನಾಗರಿಕರನ್ನ ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡುತ್ತೇನೆ. ನಾಗರಿಕರ ರಕ್ಷಣೆಗೆ ಏನೂ ಒತ್ತಡ ಹೇರಬೇಕೋ ಆ ಕೆಲಸವನ್ನು ನಾವು ಮಾಡುತ್ತೇವೆ. ಭಾರತೀಯರು, ಕನ್ನಡಿಗರಿಗೆ ಧೈರ್ಯ ತುಂಬುವ ಕೆಲಸ ನಾವು ಮಾಡುತ್ತೇವೆ. ಪ್ರಪಂಚದ ಯಾವ ಮನುಷ್ಯರು ಹೀಗೆ ಸಾಯುವುದನ್ನ ನಾನು ಖಂಡಿಸುತ್ತೇನೆ” ಎಂದರು.

“ದುಬೈನಲ್ಲಿ ನಮ್ಮ ಶಾಸಕರಾದ ಎ.ಸಿ. ಶ್ರೀನಿವಾಸ್, ಭರತ್ ರೆಡ್ಡಿ ಅವರ ಕುಟುಂಬ, ಎಂಎಲ್ ಸಿ ಭೋಜೇಗೌಡ ಅವರು ಸಿಲುಕಿಕೊಂಡಿದ್ದಾರೆ. ಜೊತೆಗೆ ಅನೇಕ ನಾಗರಿಕರು ಸಿಲುಕಿಕೊಂಡಿದ್ದಾರೆ. ಇವರನ್ನೆಲ್ಲಾ ರಕ್ಷಣೆ ಮಾಡಬೇಕು. ದಕ್ಷಿಣ ಭಾರತದ ಅನೇಕರು ದುಬೈ, ಸೌದಿಯಲ್ಲಿದ್ದಾರೆ. ಅನೇಕ ಭಾರತೀಯ ವಿದ್ಯಾಸಂಸ್ಥೆಗಳಿವೆ” ಎಂದರು.

“ಅಲ್ಲಿರುವ ಕನ್ನಡ ಸಂಘಟನೆಗಳು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಅನೇಕ ಪರಿಚಿತರಿಂದ ವ್ಯಾಪಕವಾಗಿ ಕರೆಗಳು ಬರುತ್ತಿವೆ. ನಮ್ಮ ಜೊತೆ ವ್ಯವಹಾರ ನಡೆಸುವವರು, ಪರಿಚಿತರು ಗಾಬರಿಯಾಗಿದ್ದಾರೆ. ಸೌದಿಯಲ್ಲಿ ಏರ್ ಸ್ಟೈಕ್, ಕ್ಷಿಪಣಿಗಳು ಹಾರುತ್ತಿರುವುದು ಕಾಣುತ್ತಿದೆ ಎಂದು ಹೇಳಿದ್ದಾರೆ. ನಾನು ಆತಂಕ ಪಡುವುದು ಬೇಡ ಎಂದು ಹೇಳಿದ್ದೇನೆ” ಎಂದು ತಿಳಿಸಿದರು.

ಬೆಂಗಳೂರಿನವರು ಯಾರಾದರೂ ಸಿಲುಕಿರುವ ಮಾಹಿತಿ ಇದೆಯೇ ಎಂದು ಕೇಳಿದಾಗ, “ಈ ಕಾರಣಕ್ಕೆ ಕಮಿಷನರ್ ಅವರಿಗೆ ಮುಖ್ಯಮಂತ್ರಿಯವರು ಸೇರಿದಂತೆ ನಾವು ನಿರ್ದೇಶನ‌ ನೀಡಿದ್ದೇವೆ” ಎಂದರು.

ಸಹಾಯವಾಣಿ ತೆರೆಯುವ ಇರಾದೆ ಏನಾದರೂ ಇದೆಯೇ ಎಂದು ಕೇಳಿದಾಗ, “ನಾವು ಹಾಗೂ ಕೇಂದ್ರ ಸರ್ಕಾರ ಬೇರೆ, ಬೇರೆಯಾಗಿ ಸಹಾಯವಾಣಿ ತೆರೆಯಲು ಆಗುವುದಿಲ್ಲ. ವಿದೇಶಾಂಗ ಇಲಾಖೆಯಿಂದ ಮಾಡಬೇಕು. ನಾವು ಧೈರ್ಯ ತುಂಬುವಂತಹ ಕೆಲಸ ಮಾಡಬೇಕು” ಎಂದರು.

ಮಾನವ ಧರ್ಮಕ್ಕೆ ಜಯವಾಗಲಿ: “ಪ್ರಪಂಚದಲ್ಲಿ ಶಾಂತಿ ನೆಲೆಸಬೇಕು. ಯಾವುದೇ ಪ್ರಾಣ ಹಾನಿಯಾಗಬಾರದು ಎಂಬುದು ನಮ್ಮ ಪ್ರಾರ್ಥನೆ. ಮಾನವಧರ್ಮಕ್ಕೆ ಜಯವಾಗಲಿ. ಮಾನವಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಗಂಗಾಧರ ಅಜ್ಜಯ್ಯ ಅವರು ಹೇಳಿದ್ದಾರೆ” ಎಂದರು

“ಅಮೇರಿಕಾ ಯುದ್ಧವನ್ನು ನಿಲ್ಲಿಸಬೇಕಿದೆ. ಈ ಯುದ್ಧ ದಿಂದ ಭಾರತಕ್ಕೂ ಗಂಡಾಂತರವಾಗಲಿದೆ. ನಮ್ಮ ಸರ್ಕಾರದಿಂದಲೂ ನಮ್ಮ ಜನರಿಗೆ ಧೈರ್ಯ ತುಂಬುವ ಕೆಲಸವಾಗುತ್ತಿದೆ. ಶಾಂತಿ ಕಾಪಾಡಲು ನಾವೆಲ್ಲರೂ ಮನವಿ ಮಾಡೋಣ” ಎಂದರು.

“ಇಲ್ಲಿ ಕನ್ನಡಿಗರು, ಆ ರಾಜ್ಯದವರು ಎಂದು ಬರುವುದಿಲ್ಲ‌. ನಾವೆಲ್ಲರೂ ಭಾರತೀಯರು. ಏಕೆಂದರೆ ಇಡೀ ಸೌದಿ ದೇಶ ನಡೆಯುತ್ತಿರುವುದೇ ಭಾರತೀಯರಿಂದ. ಅದರಲ್ಲೂ ದಕ್ಷಿಣ ಭಾರತೀಯರು ವೃತ್ತಿಪರವಾಗಿ ಕೆಲಸ ಮಾಡುತ್ತಿದ್ದಾರೆ. ಮಂಗಳೂರು, ಕೇರಳ ಭಾಗದಲ್ಲಿ ಕುಟುಂಬದ ಒಬ್ಬರಾದರೂ ಸೌದಿಯಲ್ಲಿ ನೆಲೆಸಿರುತ್ತಾರೆ. ದೇಶವನ್ನು ಬೆಳೆಸುತ್ತಾ ಅವರೂ ಬದುಕುತ್ತಿದ್ದಾರೆ” ಎಂದು ಹೇಳಿದರು.

ಒಂದೇ ಬಾಂಬ್ ದಾಳಿಗೆ 70 ಮಂದಿ ಪುಟಾಣಿ ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ‌. ಲಕ್ಷಾಂತರ ಜನ ಗಾಬರಿಯಾಗಿದ್ದಾರೆ. ಇಡೀ ಪ್ರಪಂಚಕ್ಕೆ ತೆರಳಲು ಇದ್ದಿದ್ದು ಎರಡು ಮಾರ್ಗಗಳು ಸೌದಿ ಹಾಗೂ ಸಿಂಗಾಪುರ ಆದರೆ ಈಗ ಅರ್ಧಕ್ಕೂ ಹೆಚ್ಚು ಪ್ರಪಂಚಕ್ಕೆ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ. ಎರಡು ಮೂರು ದಿನಗಳ ಹಿಂದೆಯೇ ಪ್ರಯಾಣಿಸದಂತೆ ಎಚ್ಚರಿಕೆ ನೀಡಲಾಗಿತ್ತು” ಎಂದರು.

Indian citizens stranded in Gulf countries must be protected

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...