Home namma chikmagalur chikamagalur ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ
chikamagalurHomeLatest Newsnamma chikmagalur

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

Share
Share

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಪೌರಾಯುಕ್ತ ಬಿ.ಸಿ.ಬಸವರಾಜು ಎಚ್ಚರಿಕೆ ನೀಡಿದ್ದಾರೆ.

ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ, ಮುಗಟ್ಟು, ವಾಣಿಜ್ಯ ಮಳಿಗೆಗಳು ಮತ್ತು ಎಲ್ಲಾ ರೀತಿಯ ಜಾಹೀರಾತು ಫಲಕಗಳಲ್ಲಿ ಸರ್ಕಾರದ ನಿಯಮಾವಳಿಗಳ ಅನ್ವಯ ನಾಮಫಲಕದ ಮೇಲ್ಬಾಗದಲ್ಲಿ ಶೇ. ೬೦ ರಷ್ಟು ಕನ್ನಡ ಮತ್ತು ಇದರ ಕೆಳಭಾಗದಲ್ಲಿ ಶೇ.೪೦ ರಷ್ಟು ಆಂಗ್ಲಭಾಷೆಯ ನಾಮಫಲಕ ಇರುವುದು ಕಡ್ಡಾಯವಾಗಿದೆ. ಹೀಗಿದ್ದರೂ ಇನ್ನು ಹಲವಾರು ವಾಣಿಜ್ಯ ಮಳಿಗೆಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ ಸರ್ಕಾರದಿಂದ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಹಲವಾರು ವರ್ಷಗಳಿಂದ ಸರ್ಕಾರದ ನಿಯಮಗಳನ್ನು ಪಾಲನೆ ಮಾಡಲು ನೋಟೀಸ್‌ಗಳ ಮುಖಾಂತರ, ಮಾಧ್ಯಮಗಳ ಮುಖಾಂತರ ಮತ್ತು ಕನ್ನಡ ಸೇನೆಯಿಂದ ಪ್ರತಿಭಟನೆಗಳ ಮುಖಾಂತರ ಎಚ್ಚರಿಕೆ ನೀಡಲಾಗಿದ್ದರೂ ಸಹ ನಿಯಮಗಳನ್ನು ಪಾಲನೆ ಮಾಡದೇ ಈ ಉದ್ದಿಮೆಗಳು ನಿರ್ಲಕ್ಷ್ಯ ವಹಿಸಿರುವುದು ಸ್ಪಷ್ಟವಾಗಿದೆ.

ಈ ಬಗ್ಗೆ ಜುಲೈ ೨೫ ರಂದು ಕನ್ನಡಸೇನೆ ಮತ್ತು ನಗರಸಭಾ ವತಿಯಿಂದ ಜಾಥಾ ಕಾರ್ಯಕ್ರಮ ಮಾಡುವುದರ ಮುಖಾಂತರ ಅರಿವು ಕಾರ್ಯಕ್ರಮವನ್ನು ಸಹಾ ನಡೆಸಲಾಗಿದೆ. ಇನ್ನು ಮುಂದೆ ನಿಯಮ ಪಾಲನೆ ಮಾಡದೇ ಇರುವವರ ವಿರುದ್ಧ ಕನ್ನಡ ಸೇನೆಯಿಂದ ಮಸಿ ಬಳಿಯುವ ಮೂಲಕ ಉಗ್ರ ಪ್ರತಿಭಟನೆ ಮಾಡುವುದಾಗಿ ಇದೀಗ ನಗರಸಭಾ ಕಚೆರಿಗೆ ಪತ್ರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಎಲ್ಲ ಅಂಗಡಿ, ಮುಗ್ಗಟ್ಟು, ವಾಣಿಜ್ಯ ಮಳಿಗೆಗಳ ಮತ್ತು ಜಾಹೀರಾತು ಫಲಕಗಳ ಮಾಲೀಕರಿಗೆ ಮುನ್ಸೂಚನೆ ನೀಡಲಾಗಿದ್ದು, ನಾಮಫಲಕದಲ್ಲಿ ಶೇ.೬೦ ರಷ್ಟು ಕನ್ನಡವನ್ನು ಕಡ್ಡಾಯಗೊಳಿಸುವಂತೆ ಅವರು ಸೂಚಿಸಿದ್ದಾರೆ.

ಮಾರ್ಕೇಟ್ ರಸ್ತೆ ಇನ್ನು ಮುಂದೆ ಅಂಬೇಡ್ಕರ್ ರಸ್ತೆ
ನಗರಸಭಾ ವ್ಯಾಪ್ತಿಯ ಮಾರ್ಕೆಟ್ ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಲಾಗಿದ್ದು ಈ ರಸ್ತೆಯಲ್ಲಿ ಇರುವ ಎಲ್ಲಾ ಅಂಗಡಿ ಮುಂಗಟ್ಟುಗಳು ತಮ್ಮ ಉದ್ಯಮದ ನಾಮಫಲಕಗಳಲ್ಲಿ ಇರುವ ಮಾರ್ಕೆಟ್ ರಸ್ತೆ ಎಂಬುದನ್ನು ‘ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ’ ಎಂದು ಕೂಡಲೇ ಬದಲಾವಣೆ ಮಾಡಿಕೊಳ್ಳಲು ಸೂಚಿಸಲಾಗಿದೆ. ನಿರ್ಲಕ್ಷಿಸಿದಲ್ಲಿ ಅಂತಹ ನಾಮಫಲಕಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Indication of 60% preference for Kannada on nameplate

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...