Home namma chikmagalur chikamagalur ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ
chikamagalurHomeLatest Newsnamma chikmagalur

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

Share
Share

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ ಮಾಡಲಾಗುತ್ತಿದೆ. ನೂತನ ಬಸ್ ನಿಲ್ದಾಣದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ

ಇನ್ನು ಮುಂದೆ ಕ್ಯಾಂಟೀನ್ ಕೆ.ಎಂ. ರಸ್ತೆಯ ಶ್ರೀ ಕತ್ರಿಮಾರಮ್ಮ ದೇವಸ್ಥಾನದ ಎದುರಿಗಿರುವ ನಗರಸಭೆ ಮಳಿಗೆಯ ಕೆಳಭಾಗದ ಸೆಲ್ಲಾರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಥಳಾಂತರ ಪ್ರಕ್ರಿಯೆಯ ಕಾರಣದಿಂದಾಗಿ ಮಾರ್ಚ್ 25 ಮತ್ತು 26ರಂದು ಕ್ಯಾಂಟೀನ್‌ನಲ್ಲಿ ಉಪಹಾರ ಹಾಗೂ ಊಟದ ವ್ಯವಸ್ಥೆ ಇರುವುದಿಲ್ಲ ಎಂದು ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 27ರಿಂದ ಹೊಸ ಸ್ಥಳದಲ್ಲಿ ಎಂದಿನಂತೆ ಸೇವೆ ಲಭ್ಯವಿರಲಿದೆ. ಪ್ರತಿನಿತ್ಯ ಸುಮಾರು 1500 ಜನರಿಗೆ ಆಸರೆಯಾಗಿದ್ದ ಈ ಕ್ಯಾಂಟೀನ್ ಸ್ಥಳ ಬದಲಾವಣೆಯಿಂದಾಗಿ, ಇದನ್ನು ನಂಬಿಕೊಂಡಿದ್ದ ಬಡ ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರಿಗೆ ತಾತ್ಕಾಲಿಕವಾಗಿ ಸಮಸ್ಯೆಯುಂಟಾಗಿದೆ.

ಬೆಳಗ್ಗೆ 600, ಮಧ್ಯಾಹ್ನ 600 ಹಾಗೂ ರಾತ್ರಿ 300 ಜನರಿಗೆ ಆಹಾರ ಸಿದ್ಧಪಡಿಸುತ್ತಿದ್ದ ಈ ಕೇಂದ್ರವು ನಗರದ ಪ್ರಮುಖ ಹಸಿವು ನೀಗಿಸುವ ತಾಣವಾಗಿತ್ತು. ಇದೀಗ ಸ್ಥಳ ಬದಲಾಗಿರುವುದು ಮತ್ತು ಎರಡು ದಿನ ಸೇವೆ ಸ್ಥಗಿತಗೊಂಡಿರುವುದು ಬಡವರ ಪಾಲಿಗೆ ಕಷ್ಟಕರವಾಗಿ ಪರಿಣಮಿಸಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕೆಂದು ಪೌರಾಯುಕ್ತರು ಮನವಿ ಮಾಡಿದ್ದಾರೆ.

Indira Canteen on I.G. Road Chikkamagaluru City shifted

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...