Home namma chikmagalur ದಲಿತರು-ಹಿಂದುಳಿದವರಿಗೆ ನಿವೇಶನ ನೀಡುವಲ್ಲಿ ಅನ್ಯಾಯ
namma chikmagalurchikamagalurHomeLatest News

ದಲಿತರು-ಹಿಂದುಳಿದವರಿಗೆ ನಿವೇಶನ ನೀಡುವಲ್ಲಿ ಅನ್ಯಾಯ

Share
Share

ಚಿಕ್ಕಮಗಳೂರು:  ಕೊಪ್ಪ ತಾಲೂಕು ಎಲೆಮಡಲು, ಹೆರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಲಿತರು ಇತರೆ ಹಿಂದುಳಿದವರಿಗೆ ನಿವೇಶನ ನೀಡುವಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು ಆರೋಪಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆರೂರು ಗ್ರಾಮಪಂಚಾಯಿತಿಗೆ ಸಂಬಂಧಿಸಿದ ಸಿಗೋಡು ಸ.ನಂ.೯ ರಲ್ಲಿ ಒಂಭತ್ತು ದಲಿತ ಕುಟುಂಬಗಳು ವಾಸ ಮಾಡಲು ಮನೆಯಿಲ್ಲದೆ ಸರಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಆಗ ತಹಸೀಲ್ದಾರ್ ಮತು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗುಡಿಸಲುಗಳನ್ನು ಕಿತ್ತುಹಾಕಿ ನಿವಾಸಿಗಳ ಮೇಲೆ ಕೇಸು ದಾಖಲಿಸಿದ್ದರು ಎಂದರು ಹೇಳಿದರು.

ಮತ್ತೆ ಅದೇ ಪಂಚಾಯಿತಿಯ ಸರ್ವೆನಂಬರ್ ೬ ರಲ್ಲಿ ೪೦ ದಲಿತ ಬಡ ಕುಟುಂಬಗಳು ಪಂಚಾಯಿತಿ ಸದಸ್ಯ ಅಮ್ಜದ್ ಬೆಂಬಲದಲ್ಲಿ ಟೆಂಟ್ ಹಾಕಿ ವಾಸಿಸುತ್ತಿದ್ದರು. ಇದೇ ಅಮ್ಜದ್ ಆ ಜಾಗ ೪(೧) ಅಧಿಸೂಚನೆಗೆ ಸೇರಲ್ಪಟ್ಟಿದೆ ಎಂದು ಹೇಳಿ ಅಲ್ಲಿಂದಲೂ ಬಡವರನ್ನು ಒಕ್ಕಲೆಬ್ಬಿಸಿ ಈಗ ಆ ಜಾಗವನ್ನು ಉಳ್ಳವರು ಕಾಫಿ ತೋಟ ಮಾಡಿಕೊಂಡಿದ್ದಾರೆ. ಬಡವರಿಗೆ ನಿವೇಶನ ನೀಡಲು ೪(೧), ಅಡ್ಡಿಯಾದರೆ ಉಳ್ಳವರು ಕಾಫಿ ತೋಟಮಾಡಲು ಈ ಅಧಿಸೂಚನೆ ಅಡ್ಡಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಈಗ ಆ ೪೦ ಕುಟುಂಬಗಳು ಸ.ನಂ.೧೭ ರಲ್ಲಿ ನೆಲೆ ನಿಂತಿವೆ. ಆ ಜಾಗಕ್ಕೂ ತಹಸಿಲ್ದಾರ್, ಆರ್‌ಎಫ್‌ಓ, ಪಿಡಿಒ ಬಂದು ಈ ಜಾಗವೂ ೪(೧) ಗೆ ಸೇರುತ್ತದೆ ಎಂದು ಅಲ್ಲಿಂದಲೂ ತೆರವುಗೊಳಿಸಿದ್ದಾರೆ ಎಂದು ದೂರಿದರು.

ಹೀಗಾದರೆ ಬಡವರು ವಾಸಿಸುವುದಾದರೂ ಎಲ್ಲಿ ಎಂದು ಪ್ರಶ್ನಿಸಿದರಲ್ಲದೆ, ಕೂಡಲೇ ಕಂದಾಯ ಇಲಾಖೆ ಒತ್ತುವರಿಯಾಗಿರುವ ಸರಕಾರಿ ಜಾಗವನ್ನು ಖುಲ್ಲಾ ಮಾಡಿಸಿ ನಿವೇಶನ ಇಲ್ಲದ ಬಡವರಿಗೆ ನಿವೇಶನ ಹಂಚಿಕೆ ಮಾಡಬೇಕು. ಇಲ್ಲವಾದಲ್ಲಿ ಡಿಎಸ್‌ಎಸ್ ಕಾರ್ಯಕರ್ತರು ನಿವಾಸಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ತೀವ್ರತರದ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಯೋಗೇಶ್ ತುಡುಕೂರು, ಚೇತನ್, ಸತೀಶ್, ರವಿ ಮತ್ತಿತರರು ಉಪಸ್ಥಿತರಿದ್ದರು.

Injustice in allocating land to Dalits and backward classes

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....

Related Articles

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು...

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ...

ಅಕ್ರಮ ನುಸುಳುಕೋರರ ಮತಪಟ್ಟಿಗೆ ದಾಖಲಿಸದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಎಸ್‌ಐಆರ್ ಸಂಬಂಧ ಬಿಎಲ್‌ಒ೨ಗಳು ಪಕ್ಷದ ಮತದಾರರನ್ನು ಪಟ್ಟಿ ಯಿಂದ ಕೈಜಾರದಂತೆ ಗಮನಹರಿಸುವ ಜೊತೆಗೆ ಅಕ್ರಮ...