Home namma chikmagalur chikamagalur ಇನ್ನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿ- ಇಬ್ಬರ ಸಾವು
chikamagalurCrime NewsHomeLatest Newsnamma chikmagalur

ಇನ್ನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿ- ಇಬ್ಬರ ಸಾವು

Share
Share

ಚಿಕ್ಕಮಗಳೂರು: ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಭೀಕರ ಘಟನೆ ಜಾವಗಲ್ ಹಳೇಬೀಡು ಮುಖ್ಯ ರಸ್ತೆಯ ಕೊಟ್ಟಿಗೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕಾರನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಅರಸೀಕೆರೆ ಮೂಲದ ಮಹಮ್ಮದ್ ಸಾಧಿಕ್ (28) ಮತ್ತು ಜಿಲಾನ್ (27) ಎಂಬುವವರು ತಲೆಗೆ ಗಂಭೀರ ಪೆಟ್ಟಾಗಿ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಉಳಿದ ಸ್ನೇಹಿತರಾದ ಅಲಿ, ಇರ್ಪಾನ್, ಕರೀಂ, ಶಹಬಾಜ್ ಹಾಗೂ ಚಾಲಕ ನೆಮನ್ ಪಾಷಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೃತನ ಅಣ್ಣ ಶಹಬಾಜ್ ನೀಡಿದ ದೂರಿನ ಮೇರೆಗೆ ಕಾರು ಚಾಲಕ ನೆಮನ್ ಪಾಷಾ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Innova car loses control and overturns – two dead

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...