Home Latest News ಕೊಪ್ಪದಲ್ಲಿ ಜೆಡಿಎಸ್ ರಸ್ತೆಗುಂಡಿ ಮುಚ್ಚಿ ವಿನೂತನ ಪ್ರತಿಭಟನೆ
Latest NewschikamagalurHomenamma chikmagalur

ಕೊಪ್ಪದಲ್ಲಿ ಜೆಡಿಎಸ್ ರಸ್ತೆಗುಂಡಿ ಮುಚ್ಚಿ ವಿನೂತನ ಪ್ರತಿಭಟನೆ

Share
Share

ಕೊಪ್ಪ: ಹೆದ್ದಾರಿಯಲ್ಲಿ ಬಿದ್ದಿದ್ದ ಭಾರಿ ಗುಂಡಿಗಳನ್ನು ಸಿಮೆಂಟ್ ಕಾಂಕ್ರೀಟ್ ಹಾಕಿ ಮುಚ್ಚುವ ಮೂಲಕ ಜೆಡಿಎಸ್ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.‌

ಪಟ್ಟಣದ ತೀರ್ಥಹಳ್ಳಿ ರಸ್ತೆಯ ಟೋಲ್‌ಗೇಟ್ ಬಳಿಯಿಂದ ಬಸ್ ನಿಲ್ದಾಣದವರೆಗೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರಶೆಟ್ಟಿ ಅವರ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿದರು. ಈ ವೇಳೆ ರಸ್ತೆಯಲ್ಲಿರುವ ಗುಂಡಿಗಳಿಗೆ ಕಾರ್ಯಕರ್ತರು ಸಿಮೆಂಟ್ ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಒಳ್ಳೆಯ ಆಡಳಿತ ನೀಡುವಲ್ಲಿ ವಿಫಲವಾಗಿದೆ. ರಸ್ತೆಗಳ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಎಲ್ಲ ಭಾಗದ ರಸ್ತೆಗಳಲ್ಲಿಯೂ ಗುಂಡಿಗಳು ಮಾಮೂಲಿ ಎನ್ನುವಂತಾಗಿದೆ. ಬಾರಿ ಗುಂಡಿಗಳಿಂದಾಗಿ ಪ್ರತಿದಿನ ಅಪಘಾತಗಳು ಸಾಮಾನ್ಯವಾಗಿದ್ದು, ಜನ ಜೀವ ಕಳೆದುಕೊಳ್ಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಮಾತನಾಡಿ, ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿರುವ ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣವಾಗಿ ಗುಂಡಿಮಯವಾಗಿವೆ. ದೇಶದ ವಿವಿಧ ಭಾಗಗಳಿಂದ ಇಲ್ಲಿಗೆ ಆಗಮಿಸುವ ಭಕ್ತರು ರಸ್ತೆ ಗುಂಡಿಗಳಿಂದಾಗಿ ಸಮಸ್ಯೆ ಎದುರಿಸುವಂತಹಾಗಿದೆ. ಚಿಕ್ಕಮಗಳೂರು ಮಾರ್ಗವಾಗಿ ಶೃಂಗೇರಿಗೆ ಬರುವ ಭಕ್ತರು ವಸ್ತಾರೆ ದಾಟುತ್ತಿದ್ದಂತೆ ರಸ್ತೆ ಸ್ಥಿತಿ ಕಂಡು ವಾಪಸ್ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಸ್ತೆಗಳು ಗುಂಡಿಮಯವಾಗಿದ್ದರು ಕನಿ?ಪಕ್ಷ ಗುಂಡಿಗಳನ್ನು ಮುಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ಕಳೆದ ಏಳು ತಿಂಗಳಿನಿಂದ ರಸ್ತೆ ಅಭಿವೃದ್ಧಿ ಮಾಡುತ್ತಿಲ್ಲ. ಹೊಸದಾಗಿ ರಸ್ತೆ ನಿರ್ಮಿಸುವುದು ಬೇಡ. ತಾತ್ಕಾಲಿಕವಾಗಿ ರಸ್ತೆ ಗುಂಡಿಗಳನ್ನಾದರೂ ಮುಚ್ಚಿ ಜನರಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಶೃಂಗೇರಿ ಕ್ಷೇತ್ರದ ಶಾಸಕರು ಕ್ಷೇತ್ರಕ್ಕೆ ನೂರಾರು ಕೋಟಿ ರೂ. ಅನುದಾನ ತಂದಿದ್ದೇನೆ ಎನ್ನುತ್ತಾರೆ. ಆದರೆ ಕ್ಷೇತ್ರದ ಯಾವುದೇ ಭಾಗದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳು ಕಾಣುವುದಿಲ್ಲ. ಸುಳ್ಳು ಹೇಳುವುದನ್ನು ನಿಲ್ಲಿಸಿ ಮೊದಲು ಕ್ಷೇತ್ರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಅರಣ್ಯ ಭೂಮಿ ಗುರುತಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡುವ ಮೂಲಕ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಸುಧಾಕರ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಕಂದಾಯ ಭೂಮಿಗಳನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿಸಲಾಗಿದೆ. ಹೀಗಾಗಿ ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕ ಉಪಯೋಗಕ್ಕೂ ಸರ್ಕಾರಿ ಭೂಮಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ ರೈತರು ಉಳುಮೆ ಮಾಡುತ್ತಿರುವ ಜಮೀನುಗಳನ್ನು ಇದೀಗ ಎಸ್‌ಐಟಿ ರಚನೆ ಮಾಡುವ ಮೂಲಕ ಅರಣ್ಯ ಎಂದು ಘೋ?ಣೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.

ರೈತರು ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ನಮೂನೆ ೫೦, ೫೩, ೫೭ರಲ್ಲಿ ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಇಲ್ಲ ಸಲ್ಲದ ಸಬೂಬು ಹೇಳುವ ಮೂಲಕ ರೈತರಿಗೆ ಜಮೀನು ಮಂಜೂರು ಮಾಡುತ್ತಿಲ್ಲ ಎಂದು ಸುಧಾಕರ ಶೆಟ್ಟಿ ದೂರಿದರು.

ರೈತರು ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಕೆ ಮಾಡಿ ತಮ್ಮ ಹೆಸರಿಗೆ ಭೂಮಿ ಮಂಜುರಾಗುತ್ತದೆ ಎಂದು ಕಾಯುತ್ತಲೇ ಇದ್ದಾರೆ. ಆದರೆ ಸರ್ಕಾರ ಮಾತ್ರ ಬಡ ರೈತರಿಗೆ ಭೂಮಿ ಹಕ್ಕು ನೀಡಲು ಮೀನಾ ಮೇ? ಎಣಿಸುತ್ತಿದೆ. ಜೊತೆಗೆ ಭೂ ಮಂಜೂರಾತಿಗಾಗಿ ಸರ್ಕಾರ ಅರಣ್ಯ ಇಲಾಖೆಯ ಅನುಮತಿ ಕೇಳುತ್ತಿರುವುದು ಖಂಡನಾರ್ಹ ಎಂದರು. ಪ್ರತಿಭಟನೆಯಲ್ಲಿ ದಿವಾಕರ್ ಭಟ್, ವಾಸಪ್ಪ, ರಾಮಸ್ವಾಮಿ, ಶಾಂತಕುಮಾರ್, ವಿಜಯ್ ಕುಮಾರ್, ವೆಂಕಟೇಶ್, ಕಳಸಪ್ಪಣ್ನ, ಸತೀಶ್, ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.

Innovative protest by JDS blocking road block in Koppa

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...