Home namma chikmagalur chikamagalur ಎತ್ತಿನ ಗಾಡಿ ರಭಸಕ್ಕೆ ಇನ್ಸ್ಪೆಕ್ಟರ್ ತಲೆಗೆ ಪೆಟ್ಟು
chikamagalurCrime NewsLatest Newsnamma chikmagalur

ಎತ್ತಿನ ಗಾಡಿ ರಭಸಕ್ಕೆ ಇನ್ಸ್ಪೆಕ್ಟರ್ ತಲೆಗೆ ಪೆಟ್ಟು

Share
Share

ನಾಡಿನ ಪ್ರಸಿದ್ಧ ಅಂತರಘಟ್ಟೆ ದುರ್ಗಾಂಭದೇವಿಯ ಜಾತ್ರೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆ.ಭಕ್ತರು ಎತ್ತಿನ ಗಾಡಿ ಓಡಿಸುವುದು ವಿಶೇಷ.

ಪ್ರತಿವರ್ಷವೂ ಒಂದಲ್ಲೂಂದು ಅವಘಡ ಸಂಭವಿಸುತ್ತದೆ.ಪೊಲೀಸ್ ರು ಎಷ್ಟು ಕಟ್ಟು ನಿಟ್ಟು ಅನುಸರಿಸಿದರು ಅನಾಹುತ ಆಗುತ್ತದೆ.

ಅಜ್ಜಂಪುರ ಪಿ.ಐ.ವೀರೇಂದ್ರ ಕಳೆದ ಒಂದು ವಾರದಿಂದ ಎಡಬಿಡದೆ ಎಲ್ಲಾ ರೀತಿಯ ಮುಂಜಾಗ್ರತೆ ತೆಗೆದುಕೊಂಡರು ಅವರೆ ಇಂದು ಅನಾಹುತಕ್ಕೆ ಸಿಕ್ಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಸಂಜೆ ತಮ್ಮಟದಹಳ್ಳಿ ಗೇಟ್ ಬಳಿ ಬಂದೂಬಸ್ತಿನಲ್ಲಿ ಇದ್ದಾಗ ಎತ್ತಿನ ಗಾಡಿ ಅತಿವೇಗವಾಗಿ ಬಂದಿದ್ದನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ ಆದರೆ ಗಾಡಿ ನುಗ್ಗಿದ್ದರಿಂದ ಅನಾಮತ್ ಬಿದ್ದಾಗ ತಲೆ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಪೆಟ್ಟು ಬಿದ್ದಿದೆ ಜೊತೆಗೆ ಮೆದುಳಿಗೆ ಪೆಟ್ಟು ಬಿದ್ದಿರುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅವಘಡವಾದ ತಕ್ಷಣ ಪ್ರಥಮ ಚಿಕಿತ್ಸೆ ನೀಡಿ ಶಿವಮೊಗ್ಗ ಮೆಕ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ನಿರಂತರವಾಗಿ ಚಿಕಿತ್ಸೆ ನಡೆಯುತ್ತಿದೆ ವೀರೇಂದ್ರರವರು ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Inspector hit on the head by bullock cart

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...