ಚಿಕ್ಕಮಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ಅಸೆಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 7,02,112 ರೂಪಾಯಿ ವಂಚಿಸಿರುವ ಘಟನೆ ಸೆನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತ ಭರತ್ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಕಂಡುಬಂದ ‘Proxtrend limited.com.international’ ಎಂಬ ಲಿಂಕ್ ಮೂಲಕ ನೋಂದಾಯಿಸಿಕೊಂಡಿದ್ದರು. ನಂತರ ವಿದೇಶಿ ಸಂಖ್ಯೆಗಳಿಂದ ಕರೆ ಮಾಡಿದ ಕಿಡಿಗೇಡಿಗಳು, ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ.
ತಮ್ಮ ಟ್ರೇಡಿಂಗ್ ಖಾತೆಯಲ್ಲಿದ್ದ ಹಣವನ್ನು ಹಿಂಪಡೆಯಲು ಹೋದಾಗ, ವಂಚಕರು ಮತ್ತೆ ಹೆಚ್ಚಿನ ಹಣ ಹೂಡುವಂತೆ ಒತ್ತಾಯಿಸಿದ್ದಾರೆ. ಇದರಿಂದ ತಾನು ಮೋಸ ಹೋಗಿರುವುದು ಅರಿವಾಗಿ ಭರತ್ ಕುಮಾರ್ ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Investment in the stock market – fraud of Rs. 702112
Leave a comment