Home namma chikmagalur chikamagalur ಬಿಜೆಪಿ ನಾಯಕರ ಟೀಕೆಗೆ ಈಶ್ವರ್ ಖಂಡ್ರೆ ತಿರುಗೇಟು
chikamagalurHomeLatest Newsnamma chikmagalur

ಬಿಜೆಪಿ ನಾಯಕರ ಟೀಕೆಗೆ ಈಶ್ವರ್ ಖಂಡ್ರೆ ತಿರುಗೇಟು

Share
Share

ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಚಿಕ್ಕಮಗಳೂರಿನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದ್ದಾರೆ.

ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಬಿಜೆಪಿ ಮೊದಲು ತನ್ನ ಆಡಳಿತ ಅವಧಿಯ ಬೆಲೆ ಏರಿಕೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು. ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆಗಳು ಬಿಜೆಪಿ ಆಡಳಿತದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ ಎಂದು ಆರೋಪಿಸಿದರು.

ಒಮ್ಮೆ ₹400 ಇದ್ದ ಗ್ಯಾಸ್ ಸಿಲಿಂಡರ್ ದರ ಈಗ ₹1000 ದಾಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿದರೂ ದೇಶದಲ್ಲಿ ದರ ಕಡಿಮೆಯಾಗಿಲ್ಲ ಎಂದು ಹೇಳಿದರು. ಬಡಜನರ ಹಣವನ್ನು ತೆರಿಗೆಗಳ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದರು.

ತೆರಿಗೆ ಹಂಚಿಕೆ ವಿಚಾರದಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಸಚಿವರು, ರಾಜ್ಯ ಬಿಜೆಪಿ ನಾಯಕರು ದೆಹಲಿಯಲ್ಲಿ ಹಕ್ಕು ಕೇಳಬೇಕು, ಇಲ್ಲಿ ಟೀಕೆ ಮಾಡುವುದು ಬೇಡ ಎಂದು ಲೇವಡಿ ಮಾಡಿದರು.

ಉಪಚುನಾವಣೆ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದರು. ಪಕ್ಷದೊಳಗಿನ ಸಣ್ಣಪುಟ್ಟ ಅಸಮಾಧಾನಗಳಿದ್ದರೂ, ಎಲ್ಲರಿಗೂ ಅವಕಾಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಕಾಂಗ್ರೆಸ್ ಮಹಿಳಾ ಪರ ಪಕ್ಷವಾಗಿದ್ದು, ಬಿಜೆಪಿ ಮಹಿಳಾ ವಿರೋಧಿ ಧೋರಣೆ ಹೊಂದಿದೆ ಎಂದು ಟೀಕಿಸಿದರು.

Ishwar Khandre hits back at BJP leaders’ criticism

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...