ಚಿಕ್ಕಮಗಳೂರು: ದೇಶದ ಜನತೆಗೆ ಅನ್ನ ನೀಡುವ ಅನ್ನದಾತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಅಗತ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ತೋಟಗಾರಿಕೆ ಇಲಾಖೆ ವತಿಯಿಂದ ಇಂದು ನಗರದ ಕಾಫಿ ಮಂಡಳಿಯಲ್ಲಿ ರೈತರಿಗೆ ತೆಂಗು, ಶುಂಠಿ ಹಾಗೂ ತಾಳೆ ಬೆಳೆಯ ಬೇಸಾಯ ಕ್ರಮ ಹಾಗೂ ರೋಗ ಮತ್ತು ಕೀಟ ನಿಯಂತ್ರಣದ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ರೈತರು ಮಿಶ್ರ ಬೆಳೆಯನ್ನು ಬೆಳೆಯುತ್ತಿದ್ದರು. ಅದೇ ರೀತಿ ಈಗಲೂ ಸಹ ಮಿಶ್ರ ಬೆಳೆಗಳನ್ನು ಅವಲಂಬಿಸುವಂತಾದರೆ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯ. ಜೊತೆಗೆ ಸಂದರ್ಭಕ್ಕೆ ಅನುಗುಣವಾಗಿ ಬೆಳೆಗಳನ್ನು ಅವಲಂಬಿಸುವ ಕ್ರಮವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತೋಟಗಾರಿಕೆ ಹಾಗೂ ಕೃಷಿ ಬೆಳೆಯನ್ನು ಅವಲಂಬಿಸುವುದರ ಜೊತೆಗೆ ಕೃಷಿ ಆಧಾರಿತ ಉದ್ಯಮವನ್ನು ನಡೆಸಲು ಕೇಂದ್ರ ಸರ್ಕಾರದಿಂದ ಸಾಕಷ್ಟು ಸಹಾಯಧನವನ್ನು ಒದಗಿಸಲಾಗುತ್ತದೆ. ಆ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ತೋಟಗಾರಿಕೆ ಬೆಳೆಗಳಾದ ಅಡಿಕೆ, ಟೀ, ತೆಂಗು, ಮೆಣಸು ಇದರ ಜೊತೆಗೆ ಹೊಸ ಹೊಸ ತೋಟಗಾರಿಕೆ ಬೆಳೆಗಳ ಬಗ್ಗೆ ಇಲಾಖೆ ವತಿಯಿಂದ ಮಾಹಿತಿ ನೀಡುವ ಪ್ರಯತ್ನ ಮಾಡಬೇಕು. ತೋಟಗಾರಿಕೆ ಬೆಳೆಯ ಜೊತೆಗೆ ಉಪಬೆಳೆಗಳನ್ನು ಬೆಳೆದರೆ ಆರ್ಥಿಕವಾಗಿ ಸಹಾಯವಾಗುತ್ತದೆ ಎಂದರು
ತೋಟಗಾರಿಕೆ ಹಾಗೂ ಕೃಷಿ ಬೆಳೆಗಳಿಗೆ ತಗಲುವ ರೋಗಗಳಿಗೆ ಕಾಲಕಾಲಕ್ಕೆ ಕೈಗೊಳ್ಳಬೇಕಾದ ಔಷಧಿ ಸಿಂಪಡಣೆ ಹಾಗೂ ರಸಗೊಬ್ಬರಗಳ ಬಳಕೆ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಇಂಥ ವಿಚಾರ ಸಂಕಿರಣಗಳನ್ನು ಕೇವಲ ಜಿಲ್ಲಾ ಮಟ್ಟಕ್ಕೆ ಸೀಮಿತಗೊಳಿಸದೇ ಗ್ರಾಮ ಪಂಚಾಯಿತಿ, ಹೋಬಳಿ ಮಟ್ಟದಲ್ಲಿ ನಡೆಸಿದರೆ ಅಲ್ಲಿನ ರೈತರಿಗೂ ಅನುಕೂಲವಾಗಲಿದೆ ಎಂದರು.
ತೋಟಗಾರಿಕೆ ಉಪನಿರ್ದೇಶಕಿ ಪೂರ್ಣಿಮಾ ಪ್ರಾಸ್ತ್ತಾವಿಕ ನುಡಿಗಳನ್ನಾಡಿ, ಜಿಲ್ಲೆಯಲ್ಲಿ ೨,೧೫,೦೦೦ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಅದರಲ್ಲಿ ಮುಖ್ಯವಾದ ಬೆಳೆ ಅಡಿಕೆ ಮತ್ತು ತೆಂಗು ಈ ಬೆಳೆಗಳಿಗೆ ರೈತರು ಹೆಚ್ಚು ಅವಲಂಬಿತರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಳೆ ಹಲವಾರು ರೋಗಗಳಿಗೆ ತುತ್ತಾಗುತ್ತಿದೆ. ಈ ಹಿಂದೆ ಅಡಿಕೆ ಬೆಳೆಯಲ್ಲಿ ಕಡಿಮೆ ಹಾನಿ ಉಂಟು ಮಾಡುತ್ತಿದ್ದ ರೋಗಗಳು ಇತ್ತೀಚಿನ ವ?ಗಳಲ್ಲಿ ವಾತಾವರಣದಲ್ಲಿ ಉಂಟಾಗುತ್ತಿರುವ ಏರುಪೇರಿನಿಂದಾಗಿ ರೋಗಗಳು ಹೆಚ್ಚಿ ಅಧಿಕ ಹಾನಿಯನ್ನುಂಟು ಮಾಡುತ್ತಿವೆ.
ಅವುಗಳಲ್ಲಿ ಎಲೆ ಚುಕ್ಕೆ ರೋಗವು ಪ್ರಮುಖವಾಗಿದ್ದು, ಮಲೆನಾಡಿನೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದು ಈ ಭಾಗದ ಬೆಳೆಗಾರರಲ್ಲಿ ಹೆಚ್ಚು ಆತಂಕಕ್ಕೆ ಕಾರಣವಾಗುತ್ತಿದೆ. ಈ ರೋಗದಿಂದಾಗಿ ಅಡಿಕೆ ಇಳುವರಿ ಕುಂಠಿತವಾಗುತ್ತಿದ್ದು, ನಿರ್ದಿ? ಅವಧಿಯಲ್ಲಿ ಸರಿಯಾದ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕಾರ್ಯಾಗಾರದ ಮುಖಾಂತರ ರೈತರಿಗೆ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಾಗಾರದಲ್ಲಿ ದಿಶಾ ಸಮಿತಿಯ ಸದಸ್ಯ ಕಲ್ಮರುಡಪ್ಪ, ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿಗಳಾದ ಡಾ.ಸುರೇಶ್, ಡಾ.ಸುಚಿತ್ರ ಕುಮಾರಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ನೇತ್ರಾವತಿ, ರೈತ ಸಂಘದ ಮುಖಂಡ ಬಸವರಾಜು ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.
It is necessary to make farmers financially strong.
Leave a comment