Home namma chikmagalur chikamagalur ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ
chikamagalurHomeLatest Newsnamma chikmagalur

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ ಪ್ರವಾಸಿಗರ ಗಮನ ಸೆಳೆಯುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಹೂವುಗಳನ್ನು 12 ವರ್ಷಕ್ಕೊಮ್ಮೆ ಅರಳುವ ಪ್ರಸಿದ್ಧ ನೀಲಕುರಿಂಜಿ ಎಂದು ಬಿಂಬಿಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಚಂದ್ರದ್ರೋಣಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಪ್ರಸ್ತುತ ಅರಳಿರುವ ಹೂವುಗಳು ನೀಲಕುರಿಂಜಿ ಅಲ್ಲ ಎಂದು ಸಸ್ಯಶಾಸ್ತ್ರಜ್ಞರು ಹಾಗೂ ಪ್ರಕೃತಿ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಗಿರಿಕಂಡದ ಗಾಳಿಕೆರೆ ರಸ್ತೆಯುದ್ದಕ್ಕೂ ಹಾಗೂ ಪರ್ವತದ ಕೆಲವು ಭಾಗಗಳಲ್ಲಿ ಕಾಣಿಸುತ್ತಿರುವ ಹೂವುಗಳು ಗುರಿಂಜೆ (Strobilanthes heyneana Nees) ಪ್ರಭೇದಕ್ಕೆ ಸೇರಿವೆ. ಗೊರಟೆ ಹೂವಿನ ಕುಟುಂಬಕ್ಕೆ ಸೇರಿದ ಈ ಸಸ್ಯ ಪ್ರತಿ ವರ್ಷವೂ ಹೂ ಬಿಡುತ್ತದೆ. ಹೊರನೋಟಕ್ಕೆ ನೀಲಕುರಿಂಜಿಯಂತೆ ಕಾಣುವುದರಿಂದ ಪ್ರವಾಸಿಗರಲ್ಲಿ ಗೊಂದಲ ಉಂಟಾಗಿದೆ ಎಂದು ಸಸ್ಯಶಾಸ್ತ್ರ ಉಪನ್ಯಾಸಕ ಸೋಮಶೇಖರ್ ತಿಳಿಸಿದ್ದಾರೆ.

ವೈಜ್ಞಾನಿಕವಾಗಿ Strobilanthes kunthiana ಎಂದು ಕರೆಯಲಾಗುವ ನಿಜವಾದ ನೀಲಕುರಿಂಜಿ ಸಾಮಾನ್ಯವಾಗಿ 12 ವರ್ಷಗಳಿಗೊಮ್ಮೆ ಸಾಮೂಹಿಕವಾಗಿ ಅರಳುತ್ತದೆ. ಚಂದ್ರದ್ರೋಣ ಪರ್ವತದಲ್ಲಿ 2022ರಲ್ಲಿ ದೊಡ್ಡ ಪ್ರಮಾಣದಲ್ಲಿ ನೀಲಕುರಿಂಜಿ ಅರಳಿ ಹಲವು ಪ್ರದೇಶಗಳು ನೇರಳೆ ಬಣ್ಣದಿಂದ ಕಂಗೊಳಿಸಿದ್ದವು. ಮಾಣಿಕ್ಯಧಾರ ರಸ್ತೆ, ಸೀತಾಳಯ್ಯನಗಿರಿ ಹಾಗೂ ಕವಿಕಲ್ ಮಠದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗ ಹೂವುಗಳು ಕಂಡುಬಂದಿದ್ದವು.

ಈ ಬಾರಿ ಗಾಳಿಕೆರೆ ರಸ್ತೆಯಲ್ಲಿ ಅಲ್ಲಲ್ಲಿ ಬಿಡಿಬಿಡಿಯಾಗಿ ಹೂವುಗಳು ಕಂಡುಬರುತ್ತಿವೆಯೇ ಹೊರತು, ಇಡೀ ಪರ್ವತ ಶ್ರೇಣಿ ನೀಲಕುರಿಂಜಿಯಿಂದ ಆವೃತವಾಗಿಲ್ಲ. ಹಳೆಯ ನೀಲಕುರಿಂಜಿ ಹೂವುಗಳ ವಿಡಿಯೋಗಳನ್ನು ಪ್ರಸಕ್ತ ವರ್ಷದ ದೃಶ್ಯಗಳೊಂದಿಗೆ ಹಂಚಿಕೊಳ್ಳುತ್ತಿರುವುದೇ ಗೊಂದಲಕ್ಕೆ ಕಾರಣವಾಗಿದೆ.

ನೀಲಕುರಿಂಜಿ ನೋಡಲು ಮೈಸೂರಿನಿಂದ ಬಂದ ಪ್ರವಾಸಿಗರೂ ನಿರಾಶೆ ವ್ಯಕ್ತಪಡಿಸಿದ್ದಾರೆ. ಈ ನಡುವೆ ಹೆಚ್ಚುತ್ತಿರುವ ಪ್ರವಾಸಿಗರ ದಟ್ಟಣೆಯಿಂದ ಶೋಲಾ ಅರಣ್ಯ ಹಾಗೂ ಹುಲ್ಲುಗಾವಲುಗಳಂತಹ ಸೂಕ್ಷ್ಮ ಪರಿಸರ ಪ್ರದೇಶಗಳ ಮೇಲೆ ಒತ್ತಡ ಉಂಟಾಗುವ ಆತಂಕ ವ್ಯಕ್ತವಾಗಿದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿನ ವಿಡಿಯೋಗಳನ್ನು ಮಾತ್ರ ನಂಬದೆ, ಅರಣ್ಯ ಇಲಾಖೆ ಹಾಗೂ ಅಧಿಕೃತ ಮೂಲಗಳಿಂದ ಮಾಹಿತಿ ದೃಢಪಡಿಸಿಕೊಂಡು ಪ್ರವಾಸ ಕೈಗೊಳ್ಳುವಂತೆ ಪ್ರಕೃತಿ ಪ್ರೇಮಿಗಳು ಮನವಿ ಮಾಡಿದ್ದಾರೆ.

It is not Neelakurinji; what bloomed in Chandradrona is Gurinje.

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...

ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್-ಮನನೊಂದ ಯುವತಿ ಆತ್ಮಹತ್ಯೆ

ಕೊಪ್ಪ : ಪ್ರೀತಿಯ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಹಣಕ್ಕಾಗಿ ಪೀಡಿಸಿ ಬ್ಯಾಕ್ಮೇಲ್...