Home namma chikmagalur ಲೈಫ್‌ ಲೈನ್ ಫೀಡ್ಸ್ ಸಂಸ್ಥೆಯ ಕಿಶೋರ್ ಕುಮಾರ್ ಹೆಗ್ಡೆ ನಿವಾಸ ಮತ್ತು ಕಛೇರಿ ಮೇಲೆ ಐ.ಟಿ ರೈಡ್ ?
namma chikmagalurchikamagalurHomeLatest News

ಲೈಫ್‌ ಲೈನ್ ಫೀಡ್ಸ್ ಸಂಸ್ಥೆಯ ಕಿಶೋರ್ ಕುಮಾರ್ ಹೆಗ್ಡೆ ನಿವಾಸ ಮತ್ತು ಕಛೇರಿ ಮೇಲೆ ಐ.ಟಿ ರೈಡ್ ?

Share
Share

ಚಿಕ್ಕಮಗಳೂರು: ಲೈಫ್‌ ಲೈನ್ ಫೀಡ್ಸ್ ಸಂಸ್ಥೆಯ ಕಿಶೋರ್ ಕುಮಾರ್ ಹೆಗ್ಡೆ ನಿವಾಸ ಮತ್ತು ಕಛೇರಿ ಹಾಗು ಫಾರಂಹೌಸ್ ಮೇಲೆ ಏಕಕಾಲದಲ್ಲಿ ಅದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ತೀವ್ರ ತನಿಖೆ ನಡೆಯುತ್ತಿದ್ದು ಕಿಶೋರ್ ಕುಮಾರ್ ಹೆಗ್ಡೆ ಸಮ್ಮುಖದಲ್ಲಿ ಪ್ರತಿ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಹತ್ತಕ್ಕೂ ಹೆಚ್ಚು ಇನಾವೋ ಕಾರಿನಲ್ಲಿ 40 ಕ್ಕೂ ಹೆಚ್ಚು ತೆರಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂಚು, ಇಂಚು ಮಾಹಿತಿ ತೆಗೆಯುತ್ತಿದ್ದು ತೆರೆಗೆ ವಂಚನೆ ಬಗ್ಗೆ ಜಾಲಡುತ್ತಿದ್ದಾರೆ ಜೊತೆಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ.

ಕಿಶೋರ್ ಕುಮಾರ್ ಹೆಗ್ಡೆ ಬೇರೆ, ಬೇರೆ ರಾಜ್ಯಗಳಿಗೆ ಮತ್ತು ವಿದೇಶಕ್ಕೆ ಕೋಳಿ ರಫ್ತು ಮಾಡುತ್ತಿದ್ದು ಇದರಲ್ಲಿ ಸರ್ಕಾರಕ್ಕೆ ತೆರೆಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಇದೆ ಎನ್ನಲಾಗಿದೆ.

ಹಲವು ರಾಜಕೀಯ ಪಕ್ಷಗಳು ಮತ್ತು ವ್ಯಕ್ತಿಗಳಿಗೆ ಹಣ ನೀಡಿದ್ದಾರೆ ಹಲವರು ಸಂಸ್ಥೆ ಮತ್ತು ವ್ಯಕ್ತಿಗಳಿಗೆ ದಾನದ ರೂಪದಲ್ಲಿ ನೀಡಿರುವ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರವುದಾಗಿ ತಿಳಿದು ಬಂದಿದೆ.

ಕೆಲವು ವರ್ಷಗಳ ಹಿಂದೆ ಸಣ್ಣದಾಗಿ ಕೋಳಿ ಸಾಗಣೆ ಮತ್ತು ಮಾರಾಟ ಮಾಡಿ ಇಷ್ಟೊಂದು ಆಸ್ತಿ ಮತ್ತು ಹಣ ಗಳಿಸಿರುವ ಮೂಲದ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

IT raid on Kishore Kumar Hegde’s residence and office of Lifeline Feeds?

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...