Home namma chikmagalur chikamagalur ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
chikamagalurCrime NewsHomeLatest Newsnamma chikmagalur

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Share
Share

ಚಿಕ್ಕಮಗಳೂರು: ತೋಟ ಹಾಗೂ ಮನೆಯ ಕೆಲಸಗಾರನಾಗಿ ಸುಮಾರು ಎರಡು ವರ್ಷಗಳಿಂದ ನಂಬಿಕಸ್ಥನಾಗಿದ್ದ ವ್ಯಕ್ತಿಯೊಬ್ಬನೇ ಮಾಲೀಕರ ಮನೆಯ ಲಾಕರ್‌ನಿಂದ ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸವರವಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಬಿ.ಹೆಚ್. ಮಂಜುನಾಥ್ ಎಂಬುವರ ಮನೆಯಲ್ಲಿ ಕೆಲಸಕ್ಕಿದ್ದ ಮಂಗಳೂರು ಮೂಲದ ವಿನೋದ (50) ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಜೂನ್ 17ರಂದು ಮನೆಯವರೆಲ್ಲರೂ ತೋಟಕ್ಕೆ ಗೊಬ್ಬರ ಹಾಕಲು ಹೋಗಿದ್ದಾಗ, ಸೊಸೆ ರಕ್ಷಿತಾ ಔಟ್‌ಹೌಸ್ ಸ್ವಚ್ಛಗೊಳಿಸುತ್ತಿದ್ದ ಸಮಯ ಸಾಧಿಸಿ ಈತ ಮೊದಲ ಮಹಡಿಯ ಬೆಡ್‌ರೂಮ್ ಕಬೋರ್ಡ್ ಲಾಕರ್‌ನಲ್ಲಿದ್ದ ₹7.50 ಲಕ್ಷ ಮೌಲ್ಯದ 51 ಗ್ರಾಂ ತೂಕದ ತಾಳಿಸರ, ₹3.30 ಲಕ್ಷ ಮೌಲ್ಯದ 22 ಗ್ರಾಂನ ಎರಡು ಕೈಬಳೆಗಳು, ₹1.80 ಲಕ್ಷ ಮೌಲ್ಯದ 12 ಗ್ರಾಂನ ಬ್ರೇಸ್‌ಲೆಟ್ ಹಾಗೂ ₹1,000 ನಗದನ್ನು ಕಳವು ಮಾಡಿದ್ದಾನೆ.

ಸಂಜೆಯಾದರೂ ಆತ ಕಾಣಿಸದಿದ್ದಾಗ ಮತ್ತು ಮೊಬೈಲ್ ಸ್ವಿಚ್ ಆಫ್ ಬಂದಾಗ ಅನುಮಾನಗೊಂಡು ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಘಟನೆಯ ಸಂಬಂಧ ಆಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Jewellery worth lakhs of rupees stolen

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...