Home namma chikmagalur chikamagalur ನಕಲಿ ಬೀಗದ ಕೈ ಬಳಸಿ ಮನೆಯಲ್ಲಿದ್ದ ನಗ-ನಗದು ಕಳವು
chikamagalurHomeLatest Newsnamma chikmagalur

ನಕಲಿ ಬೀಗದ ಕೈ ಬಳಸಿ ಮನೆಯಲ್ಲಿದ್ದ ನಗ-ನಗದು ಕಳವು

Share
Share

ಚಿಕ್ಕಮಗಳೂರು: ಮನೆಯ ಯಜಮಾನರು ಹಬ್ಬದ ಸಂಭ್ರಮಕ್ಕೆಂದು ಊರಿಗೆ ತೆರಳಿದ್ದ ಸಮಯವನ್ನೇ ಹೊಂಚು ಹಾಕಿ ಕಾದು, ನಕಲಿ ಬೀಗದ ಕೈ ಮೂಲಕ ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಗಂಭೀರ ಆರೋಪ ಮನೆಗೆಲಸದಾಕೆಯೊಬ್ಬರ ಮೇಲೆ ಕೇಳಿಬಂದಿದೆ.

ಮನೆಯಲ್ಲಿ ಕಳೆದ ಐದು ವರ್ಷಗಳಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ಬೇಬಿ ಎಂಬ ಮಹಿಳೆಯೇ ಈ ಕೃತ್ಯವೆಸಗಿದ್ದಾರೆ ಎಂದು ಮನೆಯ ಮಾಲೀಕರಾದ ಶ್ರೀಮತಿ ನೇತ್ರಾವತಿ ಆರೋಪಿಸಿದ್ದಾರೆ. ಚಿಕ್ಕಮಗಳೂರಿನ ಉದಯಗಿರಿ ದಂಟರಮಕ್ಕಿ ಬಡಾವಣೆಯಲ್ಲಿರುವ ತಮ್ಮ ನಿವಾಸದಿಂದ ಈ ಹಿಂದೆಯೂ ಸುಮಾರು 60 ಗ್ರಾಂ ತೂಕದ ಆಭರಣಗಳು ನಾಪತ್ತೆಯಾಗಿದ್ದರಿಂದ ಅನುಮಾನಗೊಂಡ ಕುಟುಂಬಸ್ಥರು, ಬೆಡ್ ರೂಂನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರು.

ಸೆಪ್ಟೆಂಬರ್ 12ರಂದು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮಾಲೀಕರು ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದಂತೆ, ಸಂಜೆ ವೇಳೆ ನಕಲಿ ಕೀ ಬಳಸಿ ಮನೆ ಪ್ರವೇಶಿಸಿದ ಕೆಲಸದಾಕೆ ಸುಮಾರು ಒಂದೂವರೆ ಗಂಟೆಗಳ ಕಾಲ ತಡಕಾಡಿ ನಗದು ದೋಚಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಬೀರುವಿನಲ್ಲಿದ್ದ 25 ಗ್ರಾಂ ಕೊರಳ ಚೈನ್, 15 ಗ್ರಾಂ ಕೈಬಳೆ, ಕರಿಮಣಿ ಸರ, ವಿವಿಧ ಬಗೆಯ ಓಲೆಗಳು, ಪೆಂಡೆಂಟ್ ಸೇರಿದಂತೆ ಒಟ್ಟು ಚಿನ್ನಾಭರಣ ಹಾಗೂ ಸುಮಾರು 50 ಸಾವಿರ ನಗದು ಒಳಗೊಂಡಂತೆ ಒಟ್ಟು 7.40 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳವಾಗಿವೆ ಎಂದು ದೂರಲಾಗಿದೆ.

ಕದ್ದ ಹಣ ಮತ್ತು ಆಭರಣಗಳಿಂದ ಆರೋಪಿತ ಮಹಿಳೆ ತನ್ನ ಮಕ್ಕಳಿಗೆ ಆಟೋರಿಕ್ಷಾ, ಲ್ಯಾಪ್ಟಾಪ್ ಹಾಗೂ ಸ್ಕೂಟರ್ ಕೊಡಿಸಿದ್ದಾರೆ ಎಂದು ಸಂತ್ರಸ್ತರು ಸಂಶಯ ವ್ಯಕ್ತಪಡಿಸಿದ್ದು, ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Jewelry and cash stolen from the house using a duplicate key.

Share

Leave a comment

Leave a Reply

Your email address will not be published. Required fields are marked *

Don't Miss

ಬೆಳವಾಡಿ ಕೆರೆಗೆ ಎತ್ತಿನಹೊಳೆ ನೀರು-ರೈತರಲ್ಲಿ ಸಂತಸ

ಚಿಕ್ಕಮಗಳೂರು: ಎತ್ತಿನಹೊಳೆ ಯೋಜನೆಯ ನೀರಿನಿಂದ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿಯ ಬೆಳವಾಡಿ ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರು...

`ನಾನು’ ಎಂಬುದನ್ನು ಬಿಟ್ಟು `ನಾವು’ ಎಂಬ ಮನೋಭಾವ ಬೆಳೆಸಿಕೊಳ್ಳಿ

ಚಿಕ್ಕಮಗಳೂರು: `ನಾನು ಮಾಡಿದ್ದು, ನಾನು ಮಾಡಿದ್ದು’ ಎನ್ನುವುದಕ್ಕಿಂತ `ನಾವು ಮಾಡಿದ್ದು’ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಜನರ ಆಶೀರ್ವಾದದಿಂದಲೇ ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುತ್ತಾರೆ. ಅಭಿವೃದ್ಧಿ ಕಾರ್ಯಗಳಿಗೆ ವೈಯಕ್ತಿಕ ಹಕ್ಕು ಸಾಧಿಸುವ ಬದಲು ಎಲ್ಲರ...

Related Articles

ಮುಖ್ಯಮಂತ್ರಿ ಸೂಕ್ತ ಭದ್ರತಾ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳ ಜಿಲ್ಲಾ ಭೇಟಿಯ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸುವುದಲ್ಲದೆ, ಶಿಷ್ಟಾಚಾರ ಪಾಲನೆಗೆ...

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ...

 ವಿಶ್ವಕರ್ಮ ಸಮುದಾಯ ಎಲ್ಲ ರಂಗಗಳಲ್ಲೂ ಮುಂಚೂಣಿಗೆ ಬರಲಿ

ಚಿಕ್ಕಮಗಳೂರು: ವಿಶ್ವಕರ್ಮ ಸಮುದಾಯ ಎಲ್ಲ ರಂಗಗಳಲ್ಲೂ ಮುಂಚೂಣಿಗೆ ಬರಬೇಕು ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ...