Home namma chikmagalur chikamagalur ಬಡ ಮಕ್ಕಳ ಬಾಳಿಗೆ ನೆರವಾದ ಕ.ಸಾ.ಪ ಘಟಕ
chikamagalurHomeLatest Newsnamma chikmagalur

ಬಡ ಮಕ್ಕಳ ಬಾಳಿಗೆ ನೆರವಾದ ಕ.ಸಾ.ಪ ಘಟಕ

Share
Share

ಚಿಕ್ಕಮಗಳೂರು: ಕಾಫಿನಾಡಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕವು ಸಾಹಿತ್ಯ ಸೇವೆಯ ಜೊತೆಗೆ ಅತ್ಯಂತ ಶ್ಲಾಘನೀಯ ಸಾಮಾಜಿಕ ಕಾರ್ಯವೊಂದನ್ನು ಕೈಗೊಳ್ಳುವ ಮೂಲಕ ಬಡ ಮಕ್ಕಳ ಬಾಳಿಗೆ ಬೆಳಕಾಗಿದೆ. ತಾಲ್ಲೂಕು  ಕಸಾಪ ಘಟಕವು ಬೆಂಗಳೂರಿನ ವೈದೇಹಿ ಆಸ್ಪತ್ರೆಯ ಸಹಯೋಗ ಹಾಗೂ ಸಹಕಾರದೊಂದಿಗೆ ಜಿಲ್ಲೆಯ 25 ಮಕ್ಕಳಿಗೆ ಉಚಿತವಾಗಿ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಕೊಡಿಸುವ ಮೂಲಕ ಮಹತ್ತರವಾದ ಮಾನವೀಯ ಕಾರ್ಯವನ್ನು ಮಾಡಿದೆ.

ಕಳೆದ ಮೇ 14 ರಂದು ಚಿಕ್ಕಮಗಳೂರು ತಾಲೂಕು ಕಸಾಪ ಘಟಕದ ವತಿಯಿಂದ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಖ್ಯಾತ ಮಕ್ಕಳ ಹೃದ್ರೋಗ ತಜ್ಞರಾದ ಡಾ. ಗೋವಿಂದರಾಜ್ ನೇತೃತ್ವದ ವೈದ್ಯರ ತಂಡವು ತಪಾಸಣೆ ನಡೆಸಿ, ಶಸ್ತ್ರ ಚಿಕಿತ್ಸೆಯ ಅಗತ್ಯವಿರುವ ಮಕ್ಕಳನ್ನು ಗುರುತಿಸಿತ್ತು. ಈ ಶಿಬಿರದಲ್ಲಿ ಪತ್ತೆಯಾದ 9 ತಿಂಗಳಿಂದ ಹಿಡಿದು 14 ವರ್ಷದೊಳಗಿನ ಒಟ್ಟು 25 ಮಕ್ಕಳಿಗೆ ಈಗ ಸಂಪೂರ್ಣ ಉಚಿತವಾಗಿ ಹೃದಯ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಲಾಗುತ್ತಿದೆ.

ಈ ಪುಣ್ಯ ಕಾರ್ಯಕ್ಕಾಗಿ ಚಿಕ್ಕಮಗಳೂರಿನಿಂದಲೇ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿ, ಮಕ್ಕಳು ಹಾಗೂ ಅವರ ಪೋಷಕರನ್ನು ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಕೇವಲ ಶಸ್ತ್ರ ಚಿಕಿತ್ಸೆಯಷ್ಟೇ ಅಲ್ಲದೆ, ಆಸ್ಪತ್ರೆಯಲ್ಲಿ ದಾಖಲಾದ ಅವಧಿಯಲ್ಲಿ ಮಕ್ಕಳು ಮತ್ತು ಅವರ ಪೋಷಕರಿಗೆ ಉಚಿತವಾಗಿ ಊಟ, ತಿಂಡಿ ಹಾಗೂ ವಸತಿ ಸೇರಿದಂತೆ ಎಲ್ಲಾ ಅಗತ್ಯ ಸೌಕರ್ಯಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗಿದೆ.

ಸಾಹಿತ್ಯಕ ಚಟುವಟಿಕೆಗಳಿಗೆ ಸೀಮಿತವಾಗದೆ, ಬಡ ಕುಟುಂಬಗಳ ಮಕ್ಕಳ ಆರೋಗ್ಯ ರಕ್ಷಣೆಗೆ ನಿಂತ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಈ ಅಪೂರ್ವ ಸೇವೆಗೆ ಜಿಲ್ಲೆಯಾದ್ಯಂತ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ಹಾಗೂ ಅಭಿನಂದನೆಗಳು ಹರಿದು ಬರುತ್ತಿವೆ.

K.S.P unit that helped poor children’s lives

Share

Leave a comment

Leave a Reply

Your email address will not be published. Required fields are marked *

Don't Miss

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು ಘಟಕದಿಂದ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತ ದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ ಮಳೆಯಾಗಿ ಕೆರೆಗಳು ತುಂಬಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಸುಮಾರು 1,300 ಹೆಕ್ಟೇರ್...

Related Articles

ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ

ಚಿಕ್ಕಮಗಳೂರು: ಸಮಾನತೆಯ ಆಶಯ ದೊಂದಿಗೆ ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ...

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಶೃಂಗೇರಿ : ತಾಲೂಕಿನ ನೆಮ್ಮಾರ್ ಸರ್ಕಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ...

ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದ ನೂತನ ಗೋಶೆಡ್ ನಿರ್ಮಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್...

ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ...