Home namma chikmagalur ಪರಿಹಾರದ ಹಣ ಬಿಡುಗಡೆಗೆ ಆಗ್ರಹಿಸಿ ಮೆಸ್ಕಾಂಗೆ ಕನ್ನಡಸೇನೆ ಮನವಿ
namma chikmagalurchikamagalurHomeLatest News

ಪರಿಹಾರದ ಹಣ ಬಿಡುಗಡೆಗೆ ಆಗ್ರಹಿಸಿ ಮೆಸ್ಕಾಂಗೆ ಕನ್ನಡಸೇನೆ ಮನವಿ

Share
Share

ಚಿಕ್ಕಮಗಳೂರು:  ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಕುಟುಂಬಕ್ಕೆ ಉಸ್ತುವಾರಿ ಸಚಿವರು ಘೋಷಿಸಿರುವ ಪರಿಹಾರದ ಹಣವನ್ನು ಬಿಡುಗಡೆ ಮಾಡಬೇಕು ಎಂದು ನೊಂದ ಕುಟುಂಬಸ್ಥರು ಕನ್ನಡ ಸೇನೆ ನೇತೃತ್ವದಲ್ಲಿ ಮೆಸ್ಕಾಂ ಇಲಾಖೆ ಅಧಿಕಾರಿ ಮಂಜುನಾಥ್‌ಗೆ ಮಂಗಳವಾರ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಕಳೆದ ಜನವರಿ ತಿಂಗಳಿನಲ್ಲಿ ಕೂ ದುವಳ್ಳಿ ಗ್ರಾಮದ ಹೂವೇಗೌಡ ಎಂಬುವವರು ಕಾಫಿ ತೋಟದಲ್ಲಿ ತೆರಳುವಾಗ ವಿದ್ಯುತ್ ಸ್ಪರ್ಶಿಸಿ ಬಿದ್ದಿದ್ದು ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತರಾಗಿದ್ದರು ಎಂದರು.

ಅದೇ ಮರುದಿನ ಗಣರಾಜ್ಯೋತ್ಸವದಲ್ಲಿ ಉಸ್ತುವಾರಿ ಸಚಿವರು ಈ ಬಗ್ಗೆ ವಿಷಯ ತಿಳಿಸಿಕೊಂಡು ಮಾನವೀಯ ದೃಷ್ಟಿಯಿಂದ ೨ ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಆದರೆ ಇದಾದ ಬಳಿಕ ಪರಿಹಾರದ ಮೊತ್ತವನ್ನು ಪಡೆಯಲು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಆರೇಳು ತಿಂಗಳು ಕಳೆದರೂ ಅಧಿಕಾರಿಗಳು ಸಂ ಬಂಧವಿಲ್ಲದಂತೆ ವರ್ತಿಸಿ ಸತಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಈ ನಡುವೆ ಉಸ್ತುವಾರಿ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದ ವೇಳೆಯಲ್ಲೂ ಪರಿಹಾರ ನೀಡಲು ಸೂ ಚಿಸಿದ್ದರು. ಈ ಕುರಿತು ಮೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಲ್ಲದೇ ಮೃತ ಕುಟುಂಬವು ತೀ ವ್ರ ಬಡವರಾದ ಕಾರಣ ಜೀವನಾಧಾರ ಕಷ್ಟವಾಗಿದೆ. ಅಲ್ಲದೇ ಅವರ ಮಗ ಅಪಘಾತಕ್ಕೀಡಾಗಿ ಕಾಲಿಗೆ ಗಂ ಭೀರವಾಗಿ ಗಾಯವಾಗಿದ್ದು ಜೀವನ ಸುಧಾರಿಸಿಕೊಳ್ಳುವುದು ಕಷ್ಟವಾಗಿದೆ ಎಂದರು.

ಹೀಗಾಗಿ ಮೆಸ್ಕಾಂ ಇಲಾಖೆ ನೊಂದ ಕುಟುಂಬದವರ ಜೀವನವು ತೀವ್ರ ಸಂಕಷ್ಟದಲ್ಲಿರುವ ಕಾರಣ ಇಂದಿನ ಆಧುನಿಕ ಜಗತ್ತಿನಲ್ಲಿ ಬದುಕಿಗಾಗಿ ಕನಿಷ್ಟ ೧೫ ಲಕ್ಷ ರೂ.ಗಳ ಪರಿಹಾರ ಪೂರೈಸಬೇಕು. ಒಂದು ವೇಳೆ ಪರಿಹಾರ ಬಿಡುಗಡೆಗೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಮುಖಂಡರುಗಳಾದ ಕಳವಾಸೆ ರವಿ, ಹುಣಸೇಮಕ್ಕಿ ಲಕ್ಷ್ಮಣ್, ಸುಜಾ ತ, ಚೈತ್ರ ಗೌಡ, ನೊಂದ ಕುಟುಂಬವರಾದ ವಿನೋದ, ಚಂದ್ರಶೇಖರ್, ಜನನಿ ಮತ್ತಿತರರಿದ್ದರು.

Kannada Sena appeals to MESCOM demanding release of compensation money

 

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...