Home namma chikmagalur ನ.೧೦ ಲಯನ್ಸ್ ಸೇವಾ ಭವನದಲ್ಲಿ ಕನ್ನಡ ವೀಣಾ
namma chikmagalurchikamagalurLatest News

ನ.೧೦ ಲಯನ್ಸ್ ಸೇವಾ ಭವನದಲ್ಲಿ ಕನ್ನಡ ವೀಣಾ

Share
Share

ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡಿನ ಖ್ಯಾತ ವೀಣಾ ವಿದುಷಿ ರೇವತಿ ಕಾಮತ್‌ರವರಿಂದ ನ.೧೦ ರಂದು ಸಂಜೆ ೬ ಗಂಟೆಗೆ ಮಧುವನ ಲೇಔಟ್‌ನಲ್ಲಿರುವ ಎಂಎಲ್‌ಆರ್ ಲಯನ್ಸ್ ಸೇವಾ ಭವನದಲ್ಲಿ ಕನ್ನಡ ವೀಣಾ ಎಂಬ ವಿಶೇಷ, ವಿಶಿಷ್ಟ, ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಸಂಸ್ಥೆ ಸಂಯೋಜಕ ಜಿ. ರಮೇಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಯನ್ಸ್ ಸಂಸ್ಥೆ, ಕಲ್ಕಟ್ಟೆ ಪುಸ್ತಕದ ಮನೆ, ಪೂರ್ವಿ ಸುಗಮಸಂಗೀತ ಅಕಾಡೆಮಿ ಟ್ರಸ್ಟ್ ಇವರುಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ವೀಣಾ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಅಧ್ಯಕ್ಷತೆಯನ್ನು ಲಯನ್ಸ್ ಸಂಸ್ಥೆ ಅಧ್ಯಕ್ಷ ಸಿ.ಎನ್ ಕುಮಾರ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ. ಜೆ.ಪಿ. ಕೃಷ್ಣೇಗೌಡ, ರೇಖಾ ನಾಗರಾಜ್‌ರಾವ್, ಎಂ.ಎಸ್ ಸುಧೀರ್, ಬಿ.ಎನ್ ವೆಂಕಟೇಶ್, ಕೆ.ಸಿ ಆನಂದ್, ಚರಣ್‌ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆಂದು ಹೇಳಿದರು.

ವೀಣಾವಿದುಷಿ ರೇವತಿ ಕಾಮತ್ ಅವರು ಜಿಲ್ಲೆಯ ಶೃಂಗೇರಿಯವರಾಗಿದ್ದು, ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲಯನ್ಸ್ ಸಂಸ್ಥೆ ನಿರ್ವಹಿಸುತ್ತಿರುವ ಸುವರ್ಣ ವನಕ್ಕೆ ನ.೧೧ ರಂದು ಭೇಟಿನೀಡಿ ಅರಣ್ಯಾಭಿವೃದ್ಧಿ ಬಗ್ಗೆ ಪರಿಶೀಲಿಸಲಿದ್ದಾರೆಂದು ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಮಹಿಳೆಯರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಲಯನ್ಸ್ ಅಧ್ಯಕ್ಷ ಸಿ.ಎನ್ ಕುಮಾರ್, ಉಪಾಧ್ಯಕ್ಷ ಟಿ. ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಶಿವಣ್ಣ, ಅಣ್ಣಾವೇಲು, ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

Kannada Veena at Lions Seva Bhavan on November 10

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...