Home ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ
HomechikamagalurLatest Newsnamma chikmagalur

ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ

Share
Share

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಕನ್ನಡ ಭಾಷೆಯ ಬಗ್ಗೆ ತಮಿಳು ನಟ ಕಮಲ್ ಹಾಸ ನ್ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಾರ್ಯಕರ್ತರು ಕಮಲ್ ಭಾವಚಿತ್ರಕ್ಕೆ ಶೂಕಾಲಿನಿಂದ ತುಳಿದು, ಚಪ್ಪಲಿ ಯಿಂದ ಒಡೆದು, ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ಹೊರಹಾಕಿದರು.

ಬಳಿಕ ಮಾತನಾಡಿದ ವೇದಿಕೆ ಜಿಲ್ಲಾಧ್ಯಕ್ಷ ಕೆಂಪನಹಳ್ಳಿ ಅಶೋಕ್ ರಾಜ್ಯಾಧ್ಯಕ್ಷರ ಆದೇಶದಂತೆ ಕರವೇ ಹಾಗೂ ಕೆಚ್ಚದೆಯ ಕನ್ನಡಿಗರು ಕಮಲ್ ಹಾಸನ್ ವಿರುದ್ಧ ರೊಚ್ಚಿಗೆದ್ದು ರಾಜ್ಯಾದ್ಯಂತ ಪ್ರತಿಭಟನೆ ನಡೆಸು ತ್ತಿದ್ದು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸದೇ ಮೊಂಡುತನ ಮುಂದುವರೆಸಿದರೆ ಕಮಲ್‌ನ ಚಿತ್ರ ಹಾಗೂ ಆತನನ್ನು ರಾಜ್ಯದಲ್ಲಿ ಕಾಲಿಡಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಇತ್ತೀಚೆಗೆ ಕನ್ನಡ ನಾಡಿನ ಮಣ್ಣಿನಿಂದಲೇ ಪ್ರಸಿದ್ಧ ಪಡೆಯುತ್ತಿರುವ ಗಾಯಕ ಸೋನುನಿಗಮ್ ಹಾಗೂ ನಟ ಕಮಲ್ ಹಾಸಲ್ ಪದೇ ಪದೇ ಭಾಷೆಯ ಬಗ್ಗೆ ಟೀಕಿಸುವುದು ಅವರ ಯೋಗ್ಯತೆಗೆ ಸರಿಯಲ್ಲ. ಮು ಖ್ಯವಾಗಿ ಕಮಲ್‌ಹಾಸನ್‌ನ ಈ ಹಿಂದೆ ಕನ್ನಡದಲ್ಲೇ ಅನೇಕ ಚಿತ್ರಗಳಲ್ಲಿ ನಟಿಸಿರುವ ಅವರಿಗೆ ಭಾಷೆಯ ಅರಿ ವು ಇಲ್ಲದಿರುವುದು ಶೋಚನೀಯ ಎಂದರು.

ಕನ್ನಡದ ಕೆಲವು ಸಿನಿತಾರೆಯರು ತಮಿಳಿನ ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದು ದುದೈರ್ವ. ಅಲ್ಲದೇ ಕನ್ನಡಕ್ಕಾಗಿ ಇಡೀ ಜೀವನವನ್ನೇ ಮುಡಿಪಿಟ್ಟ ಡಾ|| ರಾಜ್‌ಕುಮಾರ್ ಪುತ್ರ ಅಂದಿನ ಕಾರ್ಯಕ್ರಮದಲ್ಲಿದ್ದರೂ ಯಾಕೆ ವಿರೋಧಿಸಿಲ್ಲ ಎಂಬುದು ತಿಳಿಯುತ್ತಿಲ್ಲ. ಕನ್ನಡ ಭಾಷೆ, ನೆಲ, ಜಲ ಸ್ವಾ ಭಿಮಾನದ ಬಗ್ಗೆ ಅಪಮಾನ ಮಾಡಿದರೆ ವಿರೋಧಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಬೇಕು ಎಂದು ಹೇಳಿದರು.

ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ್ ಆರ್.ಶೆಟ್ಟಿ ಮಾತನಾಡಿ ಅತಿಹೆಚ್ಚು ಜ್ಞಾನಪೀಠ ಪ್ರಶ ಸ್ತಿಕ್ಕೆ ಭಾಜನವಾಗಿರುವ ಕನ್ನಡ ನಾಡಿನ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿರುವ ಕನ್ನಡದ್ರೋಹಿ ಕಮಲ್ ಹಾಸನ್ ನೈತಿಕತೆ, ಮಾರ್ಯದೆಯಿಲ್ಲ. ತಮಿಳಿಗಿಂತ ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಇತಿಹಾಸವಿ ದೆ ಎಂಬುದನ್ನು ಮರೆತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ಪಂಚಾಕ್ಷರಿ, ಉಪಾಧ್ಯಕ್ಷರಾದ ದಶರಥ ರಾಜ್ ಅರಸ್, ಕೋಟೆ ಮಲ್ಲೇಶ್, ತಾಲ್ಲೂಕು ಅಧ್ಯಕ್ಷ ಮನೋಜ್, ವಕ್ತಾರ ಅಶೋಕ್‌ಕುಮಾರ್, ಮುಖಂಡರುಗಳಾದ ದೇ ವನೂರು ಅಶೋಕ್, ರುದ್ರೇಶ್ ಸಿಂಹಾದ್ರಿ, ಇರ್ಷಾದ್ ಅಹ್ಮದ್, ರಾಧಾ, ರೇಖಾ, ಕಿಟ್ಟಿ, ಪೂರ್ಣಿಮಾ, ಶಶಿ ಆಣೂರು, ಚಂದನ್, ನಾಗಲತಾ, ಅನ್ನ ಪೂರ್ಣ, ರಾಜೇಶ್ವರಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು

Karave protests against actor Kamal Haasan’s statement

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...