ಚಿಕ್ಕಮಗಳೂರು: ೨೭ನೇ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಭಾನುವಾರ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಮಾಜಿ ಸೈನಿಕರು ಕಾರ್ಗಿಲ್ ವಿಜಯೋತ್ಸವದ ಜಯಘೋಷ ಮೊಳಗಿಸಿ, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರನ್ನು ಸ್ಮರಿಸಿದರು. ಬಳಿಕ ಆಜಾದ್ ಪಾರ್ಕ್ ವೃತ್ತದಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಮಾಜಿ ಸೈನಿಕರ ಸಂಘದ ಕಚೇರಿವರೆಗೆ ಮೆರವಣಿಗೆ ನಡೆಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸಿ.ಎಸ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಿ.ಬಿ. ಪ್ರದೀಪ್, ಮಾಜಿ ಅಧ್ಯಕ್ಷ ನಾಗರಾಜ್, ಸಹ ಕಾರ್ಯದರ್ಶಿ ಪ್ರಕಾಶ್ ಸೇರಿದಂತೆ ಮಾಜಿ ಸೈನಿಕರಾದ ಮಂಜುನಾಥ್, ರಾಮಯ್ಯ, ಸದಾಶಿವ, ರೇವಣ್ಣ, ಕುಮಾರಸ್ವಾಮಿ, ಲೋಬೋ, ಡಯಾಸ್, ಸುರೇಶ್, ಪ್ರಕಾಶ್, ಗೋಪಿನಾಥ್ ಹಾಗೂ ಕಡೂರು, ಸಕಲೇಶಪುರ ಮತ್ತು ಮೂಡಿಗೆರೆ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
Kargil Victory Day celebrated by ex-servicemen
Leave a comment