Home ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ
HomeKadurLatest Newsnamma chikmagalur

ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ

Share
Share
ಕಡೂರು :  ಬೆಂಗಳೂರು ನಗರವನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ್ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಡಿನ ರಕ್ಷಣೆಗಾಗಿ ಕಂಕಣ ಬದ್ದರಾಗಿ ಶ್ರಮಿಸುವ ಮೂಲಕ ರಾಜ್ಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಇದರ ಪೂರಕವಾಗಿ ರಾಜ್ಯದ ಅಭಿವೃದ್ದಿಗೆ ವಕ್ಕಲಿಗ ಸಮಾಜದ ಹಿರಿಯ ನಾಯಕ ದಿ. ಎಸ್.ಎಂ. ಕೃಷ್ಣ ವಿಕಾಸ ಸೌಧ, ಕುಮಾರಸ್ವಾಮಿಯವರು ಸುವರ್ಣಸೌಧವನ್ನು ನಿರ್ಮಿಸಿಕೊಡುವ ಮೂಲಕ ಕೂಡುಗೆ ಸಲ್ಲಿಸಿದ್ದಾರೆ. ಅವರದೇ ಸಾಲಿನಲ್ಲಿ 40 ವರ್ಷ ರಚನಾತ್ಮಕ ರಾಜಕಾರಣದ ಸೇವೆಯಲ್ಲಿರುವ ಡಿ.ಕೆ. ಶಿವಕುಮಾರ್ ಅವರು ಪ್ರಸ್ತುತ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಡಿಪೋ ಮಾರ್ಗದ ರಸ್ತೆಯ ಬಳಿ ಸ್ಥಾಪಿತವಾಗಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಉದ್ಘಾಟನೆಯ ಭಾಗ್ಯ ಲಭಿಸಿಲ್ಲ. ಇದನ್ನು ಮನಗಂಡು ಸಮಾಜದ ಬೇಡಿಕೆಯಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸುವ ಮೂಲಕ ಅದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದ ಸ್ವಾಮೀಜಿಯ ಸಮ್ಮುಖದಲ್ಲಿ ತಾಲ್ಲೂಕು ಒಕ್ಕಲಿಗ ಸಮಾಜ ಮತ್ತು ತೆಲುಗು ಗೌಡ ಸಮಾಜ ಒಳಗೊಂಡು ಅದ್ದೂರಿಯ ಕಾರ್ಯಕ್ರಮದೊಂದಿಗೆ ಶೀಘ್ರದಲ್ಲೇ ಅನಾವರಣಗೊಳಿಸುವ ಕಾರ್ಯ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ಟಿ.ಆರ್.ಲಕ್ಕಪ್ಪ ಉಪನ್ಯಾಸ ನೀಡಿದರು. ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ತಾಪಂ ಇಒ ಸಿ.ಆರ್.ಪ್ರವೀಣ್, ತಾಲ್ಲೂಕು ಒಕ್ಕಲಿಗ ಸಮಾಜದ ಅಧ್ಯಕ್ಷ ವಿಜಯ್‌ಕುಮಾರ್, ತೆಲುಗುಗೌಡ ಸಮಾಜದ ಮುಖಂಡ ಜಿಗಣೇಹಳ್ಳಿ ಲೋಕೇಶ್, ಶ್ರೀಧರ್, ಚೇತನ್, ಗೋಪಿ, ಹೊ.ರಾ.ಕೃಷ್ಣಕುಮಾರ್, ರಾಜಕುಮಾರ್, ಕೃಷಿಕ ಸಮಾಜದ ಅಧ್ಯಕ್ಷ ಎಸ್.ಎಲ್. ರುದ್ರೇಗೌಡ ಮತ್ತಿತರಿದ್ದರು.
Kempegowda is credited with putting Bangalore on a global stage.
Share

Leave a comment

Leave a Reply

Your email address will not be published. Required fields are marked *

Don't Miss

ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ

ಚಿಕ್ಕಮಗಳೂರು: ಶಾಂತಿಯುತವಾಗಿ ನಡೆಯಬೇಕಿದ್ದ ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯೊಂದು ನೋಡನೋಡುತ್ತಿದ್ದಂತೆ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಂಗರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ. ಸಭೆಯಲ್ಲಿ...

ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು. ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ(ಅಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ...

Related Articles

ಜಿಲ್ಲೆಯ ಐದು ಜನ ಶಾಸಕರಿಗೆ ಬೊಗಣಿ ಗೂಟ ಖಚಿತ !?

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು...

ಕಲಿಕೆ ವಯಸ್ಸಿನಲ್ಲಿ ವ್ಯಾಮೋಹಕ್ಕೆ ಒಳಗಾಗದಿರಿ

ಚಿಕ್ಕಮಗಳೂರು: ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸುವ ಇಂದಿನ ಯುವಪೀಳಿಗೆ ಬಹಳ ಷ್ಟು ಎಚ್ಚರಿಕೆ ವಹಿಸಬೇಕು. ಕಲಿಕೆಯಲ್ಲಿ ಹೊರತಾಗಿ...

ಭೋವಿ ಜಾತಿ ಪ್ರಮಾಣಪತ್ರ ನೀಡಲು ವಿಳಂಬ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಡ್ಡರ ಸಮುದಾಯದವರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ...

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ...