Home namma chikmagalur chikamagalur ಕೆಂಪೇಗೌಡರ ಕನಸಿನ ಬೆಂಗಳೂರು ನಮ್ಮ ಹೆಮ್ಮೆಯ ಸಂಕೇತ
chikamagalurHomeLatest Newsnamma chikmagalur

ಕೆಂಪೇಗೌಡರ ಕನಸಿನ ಬೆಂಗಳೂರು ನಮ್ಮ ಹೆಮ್ಮೆಯ ಸಂಕೇತ

Share
Share
ಚಿಕ್ಕಮಗಳೂರು: ಇಂದು ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿರುವ ಬೆಂಗಳೂರು ಮಹಾನಗರದ ಸೃಷ್ಟಿಗೆ ಕಾರಣರಾದ ನಾಡಪ್ರಭು ಕೆಂಪೇಗೌಡರ ಜಯಂತಿಯು ಕೇವಲ ಒಬ್ಬ ವ್ಯಕ್ತಿಯ ಸ್ಮರಣೆಯಲ್ಲ. ಅದು ನಮ್ಮ ನಾಡಿನ ಅಸ್ಮಿತೆ, ಸಂಸ್ಕøತಿ ಮತ್ತು ಐತಿಹಾಸಿಕ ಹೆಮ್ಮೆಯ ಸಂಕೇತವಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.
ಚಿಕ್ಕಮಗಳೂರಿನ ಕುವೆಂಪು ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಮಾರಂಭದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕೆಂಪೇಗೌಡರು ಕೇವಲ ಒಬ್ಬ ಸಾಮಂತ ರಾಜರಾಗಿರಲಿಲ್ಲ. ಅವರು ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯರ ಕಾಲದಲ್ಲಿ ಯಲಹಂಕ ನಾಡನ್ನು ಆಳುತ್ತಿದ್ದಾಗ, ಇಡೀ ರಾಜ್ಯವನ್ನಾಳುವ ಮಹಾರಾಜರಿಗಿಂತಲೂ ಮಿಗಿಲಾದ ವಿಶಾಲವಾದ ದೂರದೃಷ್ಟಿ ಮತ್ತು ಕನಸುಗಳನ್ನು ಹೊಂದಿದ್ದರು. ಧರ್ಮನಿμÉ್ಠ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸುಧಾರಣೆಗಳ ಮೂಲಕ ಜಾತಿ-ಮತ ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಂಡ ಮಹಾನ್ ನಾಯಕ ಎಂದು ಬಣ್ಣಿಸಿದರು.
1537ರಲ್ಲಿ ಬೆಂಗಳೂರು ಒಂದು ಸಣ್ಣ ಪಟ್ಟಣವಾಗಿ ರೂಪುಗೊಳ್ಳುತ್ತಿದ್ದ ಕಾಲದಲ್ಲೇ ಕೆಂಪೇಗೌಡರು ನಗರದ ನಾಲ್ಕೂ ದಿಕ್ಕುಗಳಲ್ಲಿ ಗಡಿಗೋಪುರಗಳನ್ನು ನಿರ್ಮಿಸುವ ಮೂಲಕ ಭವಿಷ್ಯದ ನಗರದ ವ್ಯಾಪ್ತಿಯನ್ನು ಅಂದಾಜಿಸಿದ್ದರು. ಅಂದಿನ ಅವರ ಪುರಸಭಾ ಮಾದರಿಯ ಆಡಳಿತ ಇಂದು ಜಗತ್ತೇ ಮೆಚ್ಚುವ ಮಹಾನಗರಕ್ಕೆ ಅಡಿಪಾಯವಾಗಿದೆ. ಅಷ್ಟೇ ಅಲ್ಲದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಇಂದು ಗುರುತಿಸಿಕೊಂಡಿರುವ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ‘ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ನಾಮಕರಣ ಮಾಡಿರುವುದೇ ಅವರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದರು.
ಕೆಂಪೇಗೌಡರು ಅಂದಿನ ಕಾಲದಲ್ಲೇ ಪರಿಸರ ಹಾಗೂ ಜಲಸಂರಕ್ಷಣೆಗೆ ಆಪಾರ ಒತ್ತು ನೀಡಿದ್ದರು. ಬೆಂಗಳೂರಿನ ನಿರ್ಮಾಣದ ಸಂದರ್ಭದಲ್ಲಿ ಅವರು ನಿರ್ಮಿಸಿದ ನೂರಾರು ಕೆರೆಗಳು ಮತ್ತು ನೀರಿನ ಮೂಲಗಳು ಅವರ ಪರಿಸರ ಪ್ರೇಮ ಹಾಗೂ ದೂರದೃಷ್ಟಿಗೆ ಸಾಕ್ಷಿಯಾಗಿವೆ. ಕೆಂಪೇಗೌಡರ ಆಡಳಿತದಲ್ಲಿ ಜಾತಿ-ಧರ್ಮದ ಭೇದವಿರಲಿಲ್ಲ. ಅವರು ಎಲ್ಲ ಧರ್ಮಗಳ ದೇವಸ್ಥಾನಗಳನ್ನು ನಿರ್ಮಿಸಿ ಸಮಗ್ರತೆಯನ್ನು ಕಾಪಾಡಿದರು. ಅವರು ಕೇವಲ ಕೋಟೆ-ಕೆರೆಗಳನ್ನು ಕಟ್ಟಲಿಲ್ಲ, ಜನರ ವಿಶ್ವಾಸದ ಮೇಲೆ ನಾಡನ್ನು ಕಟ್ಟಿದರು. ಮಾತನಾಡುವುದಕ್ಕಿಂತ ಹೆಚ್ಚಾಗಿ ಕೆಲಸ ಮಾಡುವುದರಲ್ಲಿ ಅವರು ನಂಬಿಕೆ ಇಟ್ಟಿದ್ದರು ಎಂದು ತಿಳಿಸಿದ ಅವರು, ಇಂತಹ ಮಹಾನ್ ಚೇತನದ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕೇಂದ್ರ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ, ಇಡೀ ಪ್ರಪಂಚವೇ ಹೆಮ್ಮೆಪಡುವಂತಹ ಮತ್ತು ಎಲ್ಲರ ಕಣ್ಣು ಸೆಳೆಯುವಂತಹ ಸುಂದರ ಬೆಂಗಳೂರು ನಗರವನ್ನು ನಿರ್ಮಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ. ಎಂದು ತಿಳಿಸಿದರು.
ಕೆಂಪೇಗೌಡರು ಕೇವಲ ಒಬ್ಬ ರಾಜ, ಶೂರನಾಗಿರದೆ, ಮಾನವೀಯತೆ ಹಾಗೂ ಸಾಮಾಜಿಕ ಕಳಕಳಿಯುಳ್ಳ ಪರಿಸರ ಪ್ರೇಮಿಯಾಗಿದ್ದರು. ಎಲ್ಲಾ ಸಮಾಜಗಳನ್ನು ಪ್ರೀತಿಯಿಂದ ಕಾಣುವ ಜ್ಯಾತ್ಯತೀತ ಭಾವನೆ ಅವರಲ್ಲಿತ್ತು. ಕೃಷ್ಣದೇವರಾಯನ ವಿಜಯನಗರ ಸಾಮ್ರಾಜ್ಯದ ಯುದ್ಧಗಳಲ್ಲೂ ಕೆಂಪೇಗೌಡರ ತಂದೆ ಕೆಂಪನಂಜೇಗೌಡರು ಶೌರ್ಯ ಪ್ರದರ್ಶಿಸಿದ್ದರು. ಅವರೊಂದಿಗೆ ಬಾಲಕ ಕೆಂಪೇಗೌಡರು ಕೂಡ ಯುದ್ಧಕ್ಕೆ ತೆರಳುತ್ತಿದ್ದರು ಎಂದು ಇತಿಹಾಸವನ್ನು ಸ್ಮರಿಸಿದರು.
ಕೇವಲ 59 ವರ್ಷಗಳ ಜೀವಿತಾವಧಿಯಲ್ಲಿ ಕೆಂಪೇಗೌಡರು ಸುಮಾರು 40 ವರ್ಷಗಳ ಕಾಲ ಯಶಸ್ವಿಯಾಗಿ ಆಡಳಿತ ನಡೆಸಿದರು. ಕ್ರಿ.ಶ. 1534ರ ಮಕರ ಸಂಕ್ರಾಂತಿಯ ಶುಭ ದಿನದಂದು ಬೆಂಗಳೂರು ನಗರ ನಿರ್ಮಾಣಕ್ಕೆ ಅಡಿಪಾಯ ಹಾಕಲಾಯಿತು. ಅಂದಿನ ದಟ್ಟವಾದ ಕಾಡನ್ನು ಕಡಿದು, ಕೇವಲ ಮೂರೇ ವರ್ಷಗಳಲ್ಲಿ ಸುಂದರ ನಗರವನ್ನು ನಿರ್ಮಿಸಿ ಮುಗಿಸಿದರು. ಬೆಂಗಳೂರನ್ನು ನಿರ್ಮಿಸುವಾಗ ಕೆಂಪೇಗೌಡರು ಸಮಾಜದ ಎಲ್ಲಾ ವರ್ಗದವರನ್ನು ಸಮಷ್ಟಿಯಾಗಿ ಒಳಗೊಂಡಿದ್ದರು. ಜನರ ಕಸುಬು ಮತ್ತು ಜಾತಿಗೆ ಅನುಗುಣವಾಗಿ ಚಿಕ್ಕಪೇಟೆ, ಬಳೇಪೇಟೆ, ಕುರುಬರಪೇಟೆ, ಕುಂಬಾರಪೇಟೆ, ಗಾಣಿಗರಪೇಟೆ ಸೇರಿದಂತೆ ಒಟ್ಟು 66 ವಿವಿಧ ಪೇಟೆಗಳನ್ನು ಅವರು ನಿರ್ಮಿಸಿದರು.
ಅಲ್ಲದೆ, ಅಂದಿನ ಕಾಲದಲ್ಲಿ ವಾಹನ ಸೌಕರ್ಯಗಳಿಲ್ಲದೆ ಕೇವಲ ನಡಿಗೆಯನ್ನೇ ಆಶ್ರಯಿಸಿ, ತಲೆಯ ಮೇಲೆ ಭಾರವಾದ ಹೊರೆ ಹೊತ್ತು ಸಾಗುತ್ತಿದ್ದ ಜನ ಸಾಮಾನ್ಯರು ವಿಶ್ರಮಿಸಲು ಮತ್ತು ಹೊರೆ ಇಳಿಸಿಕೊಳ್ಳಲು ಅನುಕೂಲವಾಗುವಂತೆ ಆಯಕಟ್ಟಿನ ಸ್ಥಳಗಳಲ್ಲಿ ‘ಹೊರೆಗಟ್ಟೆಗಳನ್ನು’ ನಿರ್ಮಿಸುವ ಮೂಲಕ ತಮ್ಮ ಅಪಾರ ಮಾನವೀಯ ಕಾಳಜಿ ಮೆರೆದಿದ್ದರು ಎಂದರು.
ಕೆಂಪೇಗೌಡರು ಬೆಂಗಳೂರನ್ನು ನಿರ್ಮಿಸುವಾಗ ರಸ್ತೆಗಳ ಇಕ್ಕೆಲಗಳಲ್ಲಿ ಸಾಲು ಮರಗಳನ್ನು ನೆಟ್ಟು ಪರಿಸರ ಪ್ರೇಮ ಮೆರೆದಿದ್ದರು. ದಣಿದು ಬರುವ ಹಾದಿಹೋಕರು ವಿಶ್ರಮಿಸಲು ವ್ಯವಸ್ಥೆ ಮಾಡಿದ್ದರು. ಅಂದು ಅವರು ನಿರ್ಮಿಸಿದ್ದು ಹಸಿರು ಬೆಂಗಳೂರು. ಆದರೆ ಇಂದು ಆ ನಗರವು ಸಂಚಾರ ದಟ್ಟಣೆ ಹಾಗೂ ಕಾಂಕ್ರೀಟ್ ಕಾಡಾಗಿ ಪರಿಣಮಿಸಿರುವುದು ಅತ್ಯಂತ ವಿμÁದನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ ಅವರು,  ಕೆಂಪೇಗೌಡರ ಈ ಹಸಿರು ನಗರದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅವರ ನೆನಪಿನಲ್ಲಿ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದು ಶ್ಲಾಘನೀಯ ಎಂದರು.
ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ಕೆಂಪೇಗೌಡರು ಅಂದಿನ ಕಾಲದಲ್ಲೇ ತಂತ್ರಜ್ಞಾನ ಹಾಗೂ ಸಮರ್ಥ ಆಡಳಿತದ ಮೂಲಕ ಒಂದು ಸುಂದರ ನಗರದ ಕನಸಿಗೆ ಜೀವ ತುಂಬಿದ್ದರು. ಸುಮಾರು 500 ವರ್ಷಗಳ ಹಿಂದೆ ಅವರು ರೂಪಿಸಿದ ನಗರದ ವಿನ್ಯಾಸ, ರಸ್ತೆಗಳು ಹಾಗೂ ಮೂಲಸೌಕರ್ಯಗಳ ಯೋಜನೆ ಇಂದಿಗೂ ಅತ್ಯಂತ ಪ್ರಸ್ತುತವಾಗಿದೆ ಎಂದರು.
‘ಇಂದು ಜಾಗತಿಕ ಮಟ್ಟದಲ್ಲಿ ಬೆಂಗಳೂರು ‘ಸಿಲಿಕಾನ್ ವ್ಯಾಲಿ’ ಹಾಗೂ ಪ್ರಮುಖ ಮಾಹಿತಿ ತಂತ್ರಜ್ಞಾನ ಕೇಂದ್ರವಾಗಿ ಗುರುತಿಸಿಕೊಂಡಿದೆ. ಇದಕ್ಕೆ ಅಂದೇ ಕೆಂಪೇಗೌಡರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ. ವ್ಯಾಪಾರ-ವಹಿವಾಟಿಗೆ ಪೂರಕವಾಗಿ ಚಿಕ್ಕಪೇಟೆ ಸೇರಿದಂತೆ 50ಕ್ಕೂ ಹೆಚ್ಚು ವಾಣಿಜ್ಯ ಆಧಾರಿತ ಪೇಟೆಗಳನ್ನು ಅವರು ವ್ಯವಸ್ಥಿತವಾಗಿ ನಿರ್ಮಿಸಿದ್ದರು. ನಗರದಲ್ಲಿ ನೀರಿನ ಕೊರತೆಯಾಗದಂತೆ ನೂರಾರು ಕೆರೆಗಳನ್ನು ನಿರ್ಮಿಸಿ, ಉದ್ಯಾನಗಳು ಹಾಗೂ ಪರಿಸರ ಸಮತೋಲನವನ್ನು ಕಾಪಾಡಿದ್ದರು. ನಗರ ನಿರ್ಮಾಣದ ಅವರ ಈ ಯೋಜನೆ ಇಂದಿನ ಎಲ್ಲಾ ನಗರ ಯೋಜಕರು ಹಾಗೂ ಆಡಳಿತಾಧಿಕಾರಿಗಳಿಗೆ ದೊಡ್ಡ ಪ್ರೇರಣೆಯಾಗಿದೆ ಎಂದರು.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಮಾತನಾಡಿ, ನಾಡಪ್ರಭು ಕೆಂಪೇಗೌಡ ಜಯಂತಿಯ ಅದ್ದೂರಿ ಆಚರಣೆಗಾಗಿ ಸರ್ಕಾರವು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಪ್ರತಿ ವರ್ಷ ತಲಾ 5 ಲಕ್ಷ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಹಾಗೂ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಕೆಂಪೇಗೌಡರ ಭವ್ಯ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಸರ್ಕಾರಕ್ಕೆ ಒತ್ತಾಯಿಸಿದರು.
ಕೆಂಪೇಗೌಡರ ಜೀವನ ಮತ್ತು ಸಾಧನೆ ಕುರಿತು ದೀಪ ಹಿರೇಗುತ್ತಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷೆ ಲಲಿತಾ ರವಿನಾಯ್ಕ್, ಕೃಷಿ ಉತ್ಪನ್ನ ಸಂಸ್ಕರಣಾ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎನ್.ಹರೀಶ್,  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಂಜೇಗೌಡ, ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ,  ಡಿವೈಎಸ್‍ಪಿ ತಿಪ್ಪೇಸ್ವಾಮಿ, ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಟಿ.ಡಿ.ಮಲ್ಲೇಶ್, ಕಾರ್ಯದರ್ಶಿ ಎಂ.ಎಸ್.ಪ್ರದೀಪ್, ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷ ರೀನಾ ಸುಚೇಂದ್ರ, ನಿರ್ದೇಶಕರಾದ ಪೂರ್ಣೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಸೇರಿದಂತೆ ಮತ್ತಿತರರು ಇದ್ದರು.
Kempegowda’s dream Bangalore is a symbol of our pride
Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿನಾಡಿನಲ್ಲಿ ಲಾಂಗು – ಮಚ್ಚುಗದ್ದೆ ಸುದ್ದಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಲಾಂಗು ಮತ್ತು ಮಚ್ಚುಗಳಂತಹ ಮಾರಕಾಸ್ತ್ರಗಳು ಬಳಕೆ ತೀರಾ ಸಾಮಾನ್ಯ ಎಂಬಂತಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೇಕ್ ಕತ್ತರಿಸುವ ಸಂಭ್ರಮಾಚರಣೆ ಇರಲಿ ಅಥವಾ ರಾಜಕೀಯ ನಾಯಕರ...

ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಶಿಕ್ಷಕರ ಮೇಲೆ ಪೋಕೋ ಪ್ರಕರಣ

ಕಡೂರು: ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಕಾಮುಕ ಸಹ ಶಿಕ್ಷಕ ಹಾಗೂ ಆತನಿಗೆ ಸಾಥ್ ನೀಡಿದ ಮುಖ್ಯಶಿಕ್ಷಕನ ವಿರುದ್ಧ ಕಠಿಣ...

Related Articles

ಮುಳ್ಳಯ್ಯನಗಿರಿ ಬಳಿ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಮೂರು ದಿನಗಳ ಸತತ ರಜೆಯ ಹಿನ್ನೆಲೆಯಲ್ಲಿ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಪ್ರವಾಸಿಗರು ಕಾಫಿನಾಡು ಚಿಕ್ಕಮಗಳೂರಿನತ್ತ...

ಶ್ರೀರಾಮನ ಹೆಸರಿನಲ್ಲಿ ಹಣ ದೋಚಲಾಗಿದೆ

ಚಿಕ್ಕಮಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಟ್ರಸ್ಟ್‌ಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಕುರಿತು ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ...

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ,...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...