Home namma chikmagalur chikamagalur ಕೇರಳ ಮೂಲದ ಬಾಲಕಿ ಶ್ರಿನಂದಾ ಶವವಾಗಿ ಪತ್ತೆ
chikamagalurHomeLatest Newsnamma chikmagalur

ಕೇರಳ ಮೂಲದ ಬಾಲಕಿ ಶ್ರಿನಂದಾ ಶವವಾಗಿ ಪತ್ತೆ

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರಿನಂದಾ (15) ಶವವಾಗಿ ಪತ್ತೆಯಾಗಿದ್ದಾಳೆ.

ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧಾರ ಪ್ರದೇಶದ ಸಮೀಪ ಸುಮಾರು 2 ಸಾವಿರ ಅಡಿಗಳಷ್ಟು ಆಳದ ಪ್ರಪಾತದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಕಳೆದ ಕೆಲವು ದಿನಗಳಿಂದ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಈ ದುರಂತ ಬೆಳಕಿಗೆ ಬಂದಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ಮನಕಲಕುವ ದೃಶ್ಯಗಳು ಕಂಡುಬಂದಿವೆ. ಪ್ರವಾಸಕ್ಕೆ ಬಂದಿದ್ದಾಗಲೇ ಬಾಲಕಿ ನಾಪತ್ತೆಯಾಗಿದ್ದ ಹಿನ್ನೆಲೆ, ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕಿ ಪ್ರಪಾತಕ್ಕೆ ಬಿದ್ದ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Kerala girl Srinanda found dead

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...