Home namma chikmagalur ajjampura ದಂಪತಿಯಿಂದ 70 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಖದೀಮ
ajjampuraCrime NewsHomeLatest Newsnamma chikmagalur

ದಂಪತಿಯಿಂದ 70 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಖದೀಮ

Share
Share

ಅಜ್ಜಂಪುರ: ಅರಣ್ಯ ಇಲಾಖೆಯ ಅಧಿಕಾರಿಯಂತೆ ನಟಿಸಿ ದಂಪತಿಯನ್ನು ನಂಬಿಸಿ, ಅವರಿಂದ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ವಂಚನೆ ಪ್ರಕರಣವೊಂದು ಅಜ್ಜಂಪುರ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಭಕ್ತನಕಟ್ಟೆ ಮಹಿಳೆಯೊಬ್ಬರು ಮೇ 21 ರಂದು ತಮ್ಮ ಪರಿಚಯಸ್ಥರಾದ ಮಹೇಶ್ ಎಂಬುವವರ ಬೈಕಿನಲ್ಲಿ ಹೊಸದುರ್ಗಕ್ಕೆ ಹೊರಟಿದ್ದರು. ಮಧ್ಯಾಹ್ನ 12:30ರ ಸುಮಾರಿಗೆ ಭೂತನಹಳ್ಳಿ ವೀರಭದ್ರೇಶ್ವರ ದೇವಸ್ಥಾನದ ಬಳಿ ರಸ್ತೆ ಪಕ್ಕದ ಮರದ ನೆರಳಿನಲ್ಲಿ ಕುಳಿತು ಎಗ್ ಪಪ್ಸ್ ತಿನ್ನುತ್ತಿದ್ದಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ನಕಲಿ ಅರಣ್ಯ ಇಲಾಖೆಯ ಗುರುತಿನ ಚೀಟಿ ತೋರಿಸಿದ್ದಾನೆ.

“ಇಲ್ಲಿ ಕುಳಿತುಕೊಂಡರೆ ಕಳ್ಳರು ನಿಮ್ಮ ಸರ ಕಿತ್ತುಕೊಂಡು ಹೋಗುತ್ತಾರೆ, ಒಡವೆಗಳನ್ನು ಬಿಚ್ಚಿ ಕೊಡಿ, ನೀವು ಹೋಗುವಾಗ ವಾಪಸ್ ಕೊಡುತ್ತೇನೆ” ಎಂದು ನಂಬಿಸಿದ್ದಾನೆ. ಇದನ್ನು ನಿಜವೆಂದು ನಂಬಿದ ಮಹಿಳೆ ತನ್ನ 5 ಗ್ರಾಂ ತೂಕದ ಬಂಗಾರದ ಮಾಂಗಲ್ಯ, ತಲಾ ಒಂದು ಗ್ರಾಂನ 2 ಚಿನ್ನದ ಗುಂಡುಗಳು ಹಾಗೂ 6 ಗ್ರಾಂ ತೂಕದ ಒಂದು ಜೋಡಿ ಓಲೆಯನ್ನು ಬಿಚ್ಚಿ ಕೊಟ್ಟಿದ್ದಾರೆ.

ಒಡವೆಗಳನ್ನು ಕೈಗೆ ಪಡೆದ ಖದೀಮ ಅಲ್ಲಿಂದ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ವಂಚನೆಗೊಳಗಾದ ಮಹಿಳೆ ಮೇ 30 ರಂದು ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Khadeema robbed of gold ornaments worth 70 thousand rupees from a couple

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...